ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ; ಬಿಜೆಪಿ ನಾಯಕರ ಕಾಲೆಳೆದ ಕಾಂಗ್ರೆಸ್

Date:

  • ‘ಪ್ರಜಾಪ್ರಭುತ್ವ ಅರಿತ ವಿಪಕ್ಷ ನಾಯಕರು ಬೇಕಾಗಿದ್ದಾರೆ‘
  • ‘ಆರ್‌ಎಸ್‌ಎಸ್ ಕೈಗೊಂಬೆಯಾಗದವರು ಬಿಜೆಪಿಗೆ ಬೇಕು‘

ಚುನಾವಣೆ ಫಲಿತಾಂಶ ಬಂದು ಒಂದೂವರೆ ತಿಂಗಳಾದರೂ ಇನ್ನೂ ವಿಪಕ್ಷ ನಾಯಕರನ್ನು ನೇಮಕ ಮಾಡದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಟ್ವೀಟ್​ ಮೂಲಕ ​​ಬಿಜೆಪಿ ನಾಯಕರ ಕಾಲೆಳೆದಿದೆ.

- Advertisement -

ಶನಿವಾರ ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ. ವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ” ಎಂದು ವ್ಯಂಗ್ಯವಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಆರ್‌ಎಸ್‌ಎಸ್ ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.‌ ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ!” ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾನೂನಿನ ಅಗತ್ಯವಿದೆ

“ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು. ಮಂತ್ರಿಮಂಡಲವೂ ರಚನೆಯಾಯ್ತು. ಸರ್ಕಾರ ಕೆಲಸ ಶುರು ಮಾಡಿಯಾಯ್ತು. ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು. ಮೂರು ಗ್ಯಾರಂಟಿಗಳೂ ಜಾರಿಯಾದವು. ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿಲ್ಲ” ಎಂದು ಟೀಕಿಸಿದೆ.

“ಬಿಜೆಪಿ ಆಡಳಿತ ಮಾಡಲು ನಾಲಾಯಕ್ ಎಂದು ಈಗಾಗಲೇ ಜನರು ಸರ್ಟಿಫಿಕೇಟ್ ಕೊಟ್ಟಾಗಿದೆ, ಈಗ ವಿರೋಧ ಪಕ್ಷವಾಗಿರಲೂ ಸಹ ನಾಲಾಯಕ್ ಎಂದು ತಿಳಿಯುತ್ತಿದೆ. ಪ್ರಜಾಪ್ರಭುತ್ವದ ಸೌಂದರ್ಯಕ್ಕಾಗಿ ಸಮರ್ಥ ವಿಪಕ್ಷ ನಾಯಕನನ್ನು ಎದುರು ನೋಡುತ್ತಿದ್ದೇವೆ. ನಮ್ಮ ಆಸೆ ಈಡೇರುತ್ತದೋ ಇಲ್ಲವೋ ಗೊತ್ತಿಲ್ಲ” ಎಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಚಲಿಸುತ್ತಿದ್ದ ಕಾರು ಕೆರೆಗೆ; ಮೂವರು ಪಾರು 

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾ‌ರ್ ಕೆರೆಗೆ ಬಿದ್ದ ಪರಿಣಾಮ...

ಹಾಸನ | ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಶಾಸಕ ಸಿ.ಎನ್ ಬಾಲಕೃಷ್ಣರಿಗೆ ಮನವಿ; ಸಿಐಟಿಯು

ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಹಾಗೂ ಕಾರ್ಮಿಕರ ವಿವಿಧ ಬೇಡಿಕೆಗಳ...

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು...

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...