ಬಗರ್ ಹುಕುಂ | ವಿಲೇವಾರಿವಿಲ್ಲದೇ ಒಕ್ಕಲೆಬ್ಬಿಸುವಂತಿಲ್ಲ, ಬೆಳೆ ನಾಶ ಸಲ್ಲ: ಸಚಿವ ಕೃಷ್ಣ ಬೈರೇಗೌಡ

Date:

ಬಡ ಹಾಗೂ ಭೂ ರಹಿತ ರೈತರಿಗೆ ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಭೂ ಮಂಜೂರು ಮಾಡಲು ರಾಜ್ಯಾದ್ಯಂತ ಈವರೆಗೆ ಒಟ್ಟಾರೆ 185 ಸಮಿತಿಗಳನ್ನು ರಚಿಸಲಾಗಿದೆ. ರೈತರು ಭೂ ಮಂಜೂರಾತಿಗಾಗಿ ನಮೂನೆ 53, ನಮೂನೆ 57 ಅರ್ಜಿ ಹಾಕಿದ್ದರೆ, ಅರ್ಜಿ ಇತ್ಯರ್ಥ ಆಗುವ ಮೊದಲು ಅವರನ್ನು ಭೂಮಿಯಿಂದ ಒಕ್ಕಲೆಬ್ಬಿಸಲು ಸಾಧ್ಯವಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

- Advertisement -

ಸೋಮವಾರು ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕರಾದ ಶೈಲೇಂದ್ರ ಬೆಲ್ದಾಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಅರ್ಜಿ ಹಾಕಿರುವ ಕಡೆ ಬೆಳೆ ತೆಗೆದುಕೊಳ್ಳಲೂ ಸಹ ಅಧಿಕಾರಿಗಳು ಅಡ್ಡಿಪಡಿಸಬಾರದು. ಈ ಸಂಬಂಧ ಸ್ಪಷ್ಟವಾದ ಕಾನೂನನ್ನು ರೂಪಿಸಲಾಗಿದೆ. ಭಾಗಶಃ ಬಗರ್ ಹುಕುಂ ಯೋಜನೆಗೆ ಸಂಬಂಧಿಸಿ ಇಷ್ಟು ಸ್ಪಷ್ಟವಾಗಿ ಹಿಂದೆ ಯಾವತ್ತು ಸುತ್ತೋಲೆ ಹೊರಡಿಸಿಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

“ಬಡ ಹಾಗೂ ಭೂ ರಹಿತ ರೈತರಿಗೆ ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಭೂ ಮಂಜೂರು ಮಾಡಲು ರಾಜ್ಯಾದ್ಯಂತ ಈವರೆಗೆ 185 ಸಮಿತಿಗಳನ್ನು ರಚಿಸಿ, ಅರ್ಜಿ ವಿಲೇವಾರಿಯನ್ನೂ ತ್ವರಿತಗೊಳಿಸಲಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲೇ ಇದೊಂದು ಹೊಸ ದಾಖಲೆ” ಎಂದು ಹೇಳಿದರು.

“ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ, ಅತಿಹೆಚ್ಚು ಬಗರ್ ಹುಕುಂ ಸಮಿತಿಗಳನ್ನು ರಚಿಸಿದ್ದು ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ. ಅಲ್ಲದೆ, ಅರ್ಜಿ ವಿಲೇವಾರಿಗೊಳಿಸಿ ಅರ್ಹ ರೈತರಿಗೆ ಭೂ ಮಂಜೂರುಗೊಳಿಸುವ ಪ್ರಕ್ರಿಯೆಗೂ ಸಾಕಷ್ಟು ವೇಗ ತುಂಬಲಾಗುತ್ತಿದೆ. ಸ್ವತಃ ನಾನೇ ನೇರವಾಗಿ ಪರಿಶೀಲಿಸಿ ವಿಲೇ ಕೆಲಸಗಳನ್ನು ಶೀಘ್ರ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ಸಂಬಂಧ ಅಧಿಕಾರಿಗಳಿಗೆ ಗಡುವು ನೀಡಿದ್ದು ನಿಜ, ಸರ್ಕಾರವೇ ಅದನ್ನು ಬೆನ್ನಟ್ಟಿರುವುದೂ ನಿಜ” ಎಂದರು.

ಈ ವೇಳೆ ಮಧ್ಯಪ್ರವೇಶಿಸಿದ ಶಾಸಕ ಶೈಲೇಂದ್ರ ಬೆಲ್ದಾಳೆ, “ರಾಜ್ಯದಲ್ಲಿ ಎಲ್ಲೂ ಸರಿಯಾಗಿ ಬಗರ್ ಹುಕುಂ ಸಮಿತಿ ರಚಿಸಿಯೇ ಇಲ್ಲ. ಬೀದರ್ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದು, ಆ ಕಾರಣಕ್ಕಾಗಿಯೇ ಸರ್ಕಾರ ಈವರೆಗೂ ಬಗರ್ ಹುಕುಂ ಸಮಿತಿ ಸಚಿಸಿಲ್ಲವೇ..? ಎಂದು ಮರುಪ್ರಶ್ನೆ ಹಾಕಿದರು.

ಶಾಸಕರ ಅನುಮಾನಗಳಿಗೆ ಸಮಂಜಸ ಉತ್ತರದ ಮೂಲಕ ತೆರೆ ಎಳೆಯಲು ಮುಂದಾದ ಸಚಿವರು, “ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಸಮಿತಿ ರಚನೆ ಆಗಿಲ್ಲ, ಆಗಬೇಕು ಎಂದು ಒಪ್ಪಿಕೊಳ್ಳುತ್ತೇನೆ. ಅಲ್ಲದೆ, ಆದಷ್ಟು ಶೀಘ್ರದಲ್ಲಿ ಅವರ ಕ್ಷೇತ್ರದಲ್ಲಿ ಸಮಿತಿ ರಚನೆಗೆ ಸಂಬಂಧಿಸಿ ಕ್ರಮ ತೆಗೆದುಕೊಳ್ಳಲು ನಾನು ಬದ್ಧನಾಗಿದ್ದೇನೆ. ಆದರೆ, ರಾಜ್ಯಾದ್ಯಂತ ಎಲ್ಲೂ ಬಗರ್ ಹುಕುಂ ಸಮಿತಿಯೇ ರಚನೆಯಾಗಿಲ್ಲ ಎಂದು ಆಧಾರವಿಲ್ಲದೆ ಹೇಳುವುದು ಸರಿಯಲ್ಲ. ರಾಜ್ಯಾದ್ಯಂತ ದಾಖಲೆಯ 185 ಸಮಿತಿ ರಚನೆ ಆಗಿದೆ. ಆರ್‌ಟಿಐನಲ್ಲಿ ಪ್ರಶ್ನೆ ಕೇಳಿದರೂ ಸೂಕ್ತ ಮಾಹಿತಿ ನೀಡುತ್ತೇನೆ” ಎಂದು ಸವಾಲೆಸೆದರು.

ಮುಂದುವರೆದು, “ಬೀದರ್ ಜಿಲ್ಲೆಯ ನಾಲ್ಕು ತಾಲೂಕುಗಳಷ್ಟೇ ಅಲ್ಲ, ಏಳೂ ತಾಲೂಕುಗಳಲ್ಲೂ ಬಗರ್ ಹುಕುಂ ಸಮಿತಿ ರಚಿಸಲಾಗಿಲ್ಲ. ಅಲ್ಲದೆ, ರಾಜ್ಯದ ಇನ್ನೂ 13 ಕ್ಷೇತ್ರಗಳಲ್ಲಿ ಸಮಿತಿ ರಚನೆ ಕೆಲಸ ಬಾಕಿ ಇದೆ. ಈ ಸಂಬಂಧ ನಾನು ಅವರಿವರ ಮೇಲೆ ಸಬೂಬು ಹೇಳುವುದಿಲ್ಲ. ಏಕೆಂದರೆ ಇದು ನನ್ನ ಜವಾಬ್ದಾರಿ. ಹೀಗಾಗಿ ಬೀದರ್ ದಕ್ಷಿಣ ಸೇರಿದಂತೆ ಬಗರ್ ಹುಕುಂ ಸಮಿತಿ ರಚನೆಗೆ ಬಾಕಿ ಇರುವ ಎಲ್ಲಾ ಕ್ಷೇತ್ರದಲ್ಲೂ ಮುಂದಿನ ಹತ್ತು ದಿನಗಳಲ್ಲಿ ಸಮಿತಿ ರಚಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲು ನಾನು ಬದ್ಧನಾಗಿದ್ದೇನೆ” ಎಂದು ಉತ್ತರಿಸಿದರು.

ಅರ್ಜಿ ವಿಲೇಯಾಗದೆ ರೈತರಿಗೆ ತೊಂದರೆ ಸಲ್ಲ..!

ಬಗರ್ ಹುಕುಂ ಯೋಜನೆಯ ಅಡಿ ಸಲ್ಲಿಸಲಾಗಿರುವ ನಮೂನೆ 53 ಹಾಗೂ ನಮೂನೆ 57 ಅರ್ಜಿ ವಿಲೇವಾರಿಯಾಗದೆ ಅಧಿಕಾರಿಗಳು ರೈತರಿಗೆ ತೊಂದರೆ ನೀಡುವುದು ಅಥವಾ ಒಕ್ಕಲೆಬ್ಬಿಸುವಂತಿಲ್ಲ. ರಾಜ್ಯದಲ್ಲಿ ಇಂತಹ ಯಾವುದೇ ಪ್ರಕರಣ ಕಂಡು ಬಂದರೆ ನನ್ನ ಗಮನಕ್ಕೆ ತನ್ನಿ ಎಂದು ಸಚಿವ ಕೃಷ್ಣ ಬೈರೇಗೌಡ ಸದನಕ್ಕೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೆಟ್ರೋಲ್ ಹಾಕಿಸುವ ಮುನ್ನ ಎಚ್ಚರ: ಶೇ 85ಕ್ಕೂ ಹೆಚ್ಚು ಬಂಕ್‌ಗಳಲ್ಲಿ ಇಂಧನ ಕಡಿತ; ರಾಜ್ಯ ಸರ್ಕಾರದ ತಪಾಸಣೆಯಲ್ಲಿ ಬಟಾಬಯಲು

ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಇಂಧನ ವಿತರಿಸುವ ಶೇ 85ಕ್ಕೂ...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ...

ಸಿಜೆಪಿಯಿಂದ ‘ಆದಿವಾಸಿ ಸ್ಕೂಲ್ ಠೀಕ್ ಕರೋ’ ಅಭಿಯಾನ: ಸೆ.17ರಿಂದ ಶಾಲೆಗಳ ಪರಿಶೀಲನೆ

ದೇಶದ ಅರಣ್ಯ ಮತ್ತು ಮೂಲನಿವಾಸಿ ಪ್ರದೇಶಗಳ ಶಾಲೆಗಳಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಮತ್ತು...