ಬೆಂಗಳೂರು ಅಭಿವೃದ್ಧಿಗೆ ಪ್ರತ್ಯೇಕ ಸಮಿತಿ ರಚನೆ: ಡಿಸಿಎಂ ಡಿ ಕೆ ಶಿವಕುಮಾರ್

Date:

  • ಬ್ರಾಂಡ್ ಬೆಂಗಳೂರು ಅನ್ನು ಬೆಟರ್ ಬೆಂಗಳೂರಾಗಿ ರೂಪಿಸಲು ಕ್ರಮ
  • ಬೆಂಗಳೂರು ಶಾಸಕ, ಸಂಸದರ ಸಭೆ ಅಭಿಪ್ರಾಯ, ಸಲಹೆ ಪಡೆದ ಡಿಸಿಎಂ

ಬೆಂಗಳೂರು ಅಭಿವೃದ್ಧಿಯಲ್ಲಿ ನೇರವಾಗಿ ಮತ್ತು ಪರೋಕ್ಷವಾಗಿ ಪಾಲುದಾರರಾಗಿರುವ ಎಲ್ಲರನ್ನೂ ಒಳಗೊಂಡು ಪ್ರತ್ಯೇಕ ವಿಷಯಗಳ ಮೇಲೆ ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ಇಂದು (ಜೂನ್5) ಹಮ್ಮಿಕೊಂಡಿದ್ದ ಬೆಂಗಳೂರು ಶಾಸಕ, ಸಂಸದರ ಸಭೆ ಬಳಿಕ ಮಾತನಾಡಿ ಅವರು ʼಬ್ರಾಂಡ್ ಬೆಂಗಳೂರುʼ ಅನ್ನು ʼಬೆಟರ್ ಬೆಂಗಳೂರಾಗಿʼ ರೂಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಇಂದಿನ ಸಭೆಯಲ್ಲಿ ನಗರಾಭಿವೃದ್ದಿ ನಿಟ್ಟಿನಲ್ಲಿ ಜನಪ್ರತಿನಿಧಿಗಳಿಂದ ಸಲಹೆ ಮತ್ತು ಸಮಸ್ಯೆಗಳ ಕುರಿತು ಮಾಹಿತಿ ಪಡೆಯಲಾಯಿತು ಎಂದು ಡಿಕೆಶಿ ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೆಂಗಳೂರಿನ ಕುಡಿಯುವ ನೀರು, ಕಸ ನಿರ್ವಹಣೆ, ಟ್ರಾಫಿಕ್ ಮಾಸ್ಟರ್ ಪ್ಲಾನ್ ಬಗ್ಗೆ ಆರಂಭದಲ್ಲಿ ಚರ್ಚಿಸಿದ ಸಭೆ ಬಳಿಕ ಮಳೆಗಾಲದ ಸಂದರ್ಭದಲ್ಲಿ ತಲೆದೋರುವ ಮುಖ್ಯ ಸಮಸ್ಯೆಗಳಿಗೆ ಕಾರಣವಾಗಿರುವ ಒತ್ತುವರಿ ಹಾಗೂ ರಾಜಕಾಲುವೆ ನಿರ್ವಹಣೆ ಕುರಿತು ಸಮಗ್ರವಾಗಿ ಸಮಾಲೋಚನೆ ನಡೆಸಿತು.

ಬೆಂಗಳೂರು ಅಭಿವೃದ್ದಿ ಸಲುವಾಗಿ ಎಸ್ ಎಂ ಕೃಷ್ಣ ಕಾಲದ ರೀತಿಯಲ್ಲಿ ಬೆಂಗಳೂರಿನ ಸ್ಟೇಕ್ ಹೋಲ್ಡರ್ ಗಳನ್ನು ಭೇಟಿ ಮಾಡಿ ವಿಷನ್ ಬೆಂಗಳೂರು ಮತ್ತು ಗ್ಲೋಬಲ್ ಬೆಂಗಳೂರು ಅಡ್ವೈಸರಿ ಕಮಿಟಿ ರಚಿಸಲು ಯೋಜಿಸಲಾಗಿದೆ ಎಂದು ಶಿವಕುಮಾರ್ ತಿಳಿಸಿದರು.

ಬಡಾವಣೆಗಳ ನಿರ್ವಹಣೆ ವಿಚಾರದಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಡಿಸಿಎಂ ಸಭೆಗೆ ಮಾಹಿತಿ ನೀಡಿದರು.

ಅದರಂತೆ ವಾರ್ಡಿಗೊಂದು ಪ್ರತ್ಯೇಕ ಕಡತ ಮಾಡಿ ಲೆಕ್ಕಾಚಾರ ಇಡಬೇಕು, ವಾರ್ಡ್ ವಾರು ಅಭಿವೃದ್ಧಿ ಕಾರ್ಯಗಳ ಆರಂಭ, ಮಧ್ಯಂತರ ಮತ್ತು ಪೂರ್ಣಗೊಂಡ ವಿಡಿಯೊ ಮತ್ತು ಛಾಯಾಚಿತ್ರಗಳನ್ನು ಕಡತದಲ್ಲಿ ಮಂಡಿಸಬೇಕು, ಅಕೌಂಟಬಿಲಿಟಿ ಮತ್ತು ಟ್ರಾನ್ಸಫರೆನ್ಸಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದವರು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಬೆಂಗಳೂರು ಶಾಸಕ ಸಂಸದರೊಂದಿಗೆ ಡಿಸಿಎಂ ಸಭೆ: ಒಂದು ಗಂಟೆ ತಡವಾಗಿದ್ದಕ್ಕೆ ಬಿಜೆಪಿ ಆಕ್ರೋಶ

ಕಸ ನಿರ್ವಹಣೆಯ ಲೆಕ್ಕ ಪಕ್ಕಾ ಇರಬೇಕು, ಎಲ್ಲಿಂದ ಎಲ್ಲಿಗೆ ಸಾಗಿಸಲಾಯಿತು ಎನ್ನುವುದು ಲೆಕ್ಕವಿರಬೇಕು, ಆ ಮೂಲಕ ಕಸದ ಸಮಸ್ಯೆ ಪರಿಹಾರಕ್ಕೆ ಎಲ್ಲರೂ ಕೈ ಜೋಡಿಸಬೇಕು, ಹೀಗಾದಲ್ಲಿ ಸ್ವಚ್ಛ ಬೆಂಗಳೂರಿನ ಕನಸು ನನಸಾಗಲಿದೆ ಎಂದು ಶಿವಕುಮಾರ್ ಹೇಳಿದರು.

ಒಂದೂವರೆ ಕೋಟಿ ಜನಸಂಖ್ಯೆ ಇರುವ ಈ ಬೆಂಗಳೂರು ಎಲ್ಲರಿಂದಲೂ ಬೆಳೆದಿದೆ. ಬೆಂಗಳೂರು ಇತಿಹಾಸವನ್ನು ಮರು ಸೃಷ್ಟಿಸುವ ಅಗತ್ಯವಿದೆ. ಮಳೆ ಬಂದ್ರೆ ಹೇಗೆ ನಿರ್ವಹಣೆ ಮಾಡಬೇಕು ಎಂಬುವುದರ ಬಗ್ಗೆ ವಿಸ್ತಾರವಾಗಿ ಚರ್ಚಿಸಲಾಗಿದೆ.

ಹಾಗೆಯೇ ಮಳೆ ಬಂದ ಸಂದರ್ಭದಲ್ಲಿ ಬಾಟಲ್ ನೆಕ್ ಗಳನ್ನು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಲಾಗುವುದು, ವಿಡಿಯೋ ಕ್ಯಾಮೆರಾಗಳನ್ನು ಹಾಕಲು ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಎಲ್ಲರಿಂದ ಬಂದಿರುವ ಸಲಹೆ ಸೂಚನೆಗಳನ್ನು ಪಡೆದು ಕಾಲಕಾಲಕ್ಕೆ ಸಭೆ ನಡೆಸಿ ಅವುಗಳ ಅನುಷ್ಠಾನ ಮಾಡಿ ನವ ಬೆಂಗಳೂರು ರೂಪಿಸಲಾಗುವುದು ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂದುತ್ವ | ಭಾರತೀಯ ಸಮಾಜವನ್ನು ಒಳಗಿನಿಂದಲೇ ವಂಚಿಸುವ ‘ಗೋಮುಖ ವ್ಯಾಘ್ರ’

ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಭಾರತದ ಅತಿದೊಡ್ಡ ರಾಜಕೀಯ ಶಕ್ತಿಯಾಗಿದೆ. ಆದರೆ,...

ಸಂತ್ರಸ್ತೆ ಅಪಹರಣ ಪ್ರಕರಣ | ಮೇ 31ಕ್ಕೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ತೀರ್ಪು

ಕೆ ಆರ್‌ ನಗರ ಮಹಿಳೆ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ...

ಚಂದ್ರಶೇಖರ್‌ ಆತ್ಮಹತ್ಯೆ | ಸರ್ಕಾರದ ಖಜಾನೆಯನ್ನೇ ಲೂಟಿ ಮಾಡಿದ ಹಗರಣವಿದು: ಗೋವಿಂದ ಕಾರಜೋಳ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಇಲಾಖಾ ಸಚಿವ ನಾಗೇಂದ್ರ ಅವರು...