ಕೇಜ್ರಿವಾಲ್ ಬಂಧನ ಖಂಡಿಸಿ ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕಲು ಎಎಪಿ ಸಜ್ಜು; ಹೆಚ್ಚಿದ ಭದ್ರತೆ

Date:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಬಂಧನ ಖಂಡಿಸಿ ಆಮ್‌ ಆದ್ಮಿ ಪಕ್ಷ (ಎಎಪಿ) ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಮುತ್ತಿಗೆ ಹಾಕಲು ಸಜ್ಜಾಗಿದೆ. ಈ ನಡುವೆ ಬಿಜೆಪಿ ಕೂಡ ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ಮುಂದಾಗಿದೆ.

ಎಲ್ಲ ಎಎಪಿ ಸಂಸದರು ಮತ್ತು ಪದಾಧಿಕಾರಿಗಳು ಇಂದು ಎಎಪಿಯ ದೆಹಲಿಯಲ್ಲಿರುವ ಪ್ರಧಾನ ಕಚೇರಿ ಬಳಿ ಸೇರಲಿದ್ದು, ಅಲ್ಲಿಂದ ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ಹೀಗಾಗಿ, ದೆಹಲಿ ಪೊಲೀಸರು ಪ್ರಧಾನಿ ನಿವಾಸದ ಬಳಿ ಭದ್ರತೆ ಹೆಚ್ಚಿಸಿದ್ದಾರೆ.

“ಸೆಕ್ಷನ್ 144 ಜಾರಿ ಮಾಡಲಾಗಿದೆ. ಪ್ರತಿಭಟನೆ ನಡೆಸಲು ಯಾವುದೇ ಅವಕಾಶವಿಲ್ಲ. ಪ್ರಧಾನಿ ಕಚೇರಿ ಪ್ರದೇಶದಲ್ಲಿ ಸೇರಿರುವವರು ಐದು ನಿಮಿಷಗಳಲ್ಲಿ ಜಾಗವನ್ನು ತೆರವುಗೊಳಿಸಬೇಕು” ಎಂದು ಎಎಪಿ ಪ್ರತಿಭಟನಾಕಾರರಿಗೆ ದೆಹಲಿ ಪೊಲೀಸರು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇನ್ನು ಪಟೇಲ್ ಚೌಕ್ ಮೆಟ್ರೋ ನಿಲ್ದಾಣದಲ್ಲಿಯೂ ಭದ್ರತೆ ಹೆಚ್ಚಿಸಲಾಗಿದೆ. ಮೂರು ಮೆಟ್ರೋ ನಿಲ್ದಾಣಗಳ ಬಾಗಿಲನ್ನು ಮುಚ್ಚಲಾಗಿದೆ. ಲೋಕ ಕಲ್ಯಾಣ ಮಾರ್ಗ ಮೆಟ್ರೋ ನಿಲ್ದಾಣದಲ್ಲಿ ಭದ್ರತೆಯ ಕಾರಣವನ್ನು ನೀಡಿ ಪೊಲೀಸರು ಹೊರಹೋಗುವ ಗೇಟ್‌ಗಳನ್ನು ಮುಚ್ಚಿದ್ದಾರೆ. ಪಟೇಲ್ ಚೌಕ್ ಮತ್ತು ಸೆಂಟ್ರಲ್ ಸೆಕ್ರೆಟೇರಿಯೇಟ್ ಮೆಟ್ರೋ ನಿಲ್ದಾಣದಲ್ಲಿ ಒಳಹೋಗುವ ಮತ್ತು ಹೊರಬರುವ ಎರಡೂ ಗೇಟ್‌ಗಳನ್ನು ಮುಚ್ಚಲಾಗಿದೆ.

ದೆಹಲಿ ಅಬಕಾರಿ ನಿಯಮ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ರೂಸ್ ಅವೆನ್ಯೂ ಕೋರ್ಟ್ ಕೇಜ್ರಿವಾಲ್ ಅವರನ್ನು ಮಾರ್ಚ್ 28 ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧ್ವನಿ ಬದಲಾಯಿಸುವ ಆ್ಯಪ್ ಬಳಸಿ 7 ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

30 ವರ್ಷದ ವ್ಯಕ್ತಿಯೊಬ್ಬ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಳಸಿ, ಶಿಕ್ಷಕಿಯಾಗಿ...

ಮೊದಲ ಬಾರಿಗೆ ಮತ ಚಲಾಯಿಸಿದ ಹಣಕಾಸು ಆಯೋಗದ ಮುಖ್ಯಸ್ಥ ಅರವಿಂದ್ ಪನಗಾರಿಯಾ

ಹದಿನಾರನೇ ಹಣಕಾಸು ಆಯೋಗದ ಅಧ್ಯಕ್ಷ, 71 ವರ್ಷ ವಯಸ್ಸಿನ ಅರವಿಂದ್ ಪನಗಾರಿಯಾ...

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...

ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 6 ನವಜಾತ ಶಿಶುಗಳು ಸಾವು

ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 6 ನವಜಾತ...