ದೆಹಲಿ ಮಾಜಿ ಸಿಎಂ ಆತಿಶಿ ಬಂಧಿಸಲಾಗಿದೆ ಎಂದ ಎಎಪಿ: ಪೊಲೀಸರ ನಕಾರ

Date:

ದೆಹಲಿಯ ಕಲ್ಕಾಜಿಯ ಭೂಮಿಹೀನ್ ಶಿಬಿರದ ನಿವಾಸಿಗಳನ್ನು ಭೇಟಿ ಮಾಡಲು ಹೋದಾಗ ದೆಹಲಿ ಮಾಜಿ ಮುಖ್ಯಮಂತ್ರಿ, ಆಮ್‌ ಆದ್ಮಿ ಪಕ್ಷದ ನಾಯಕಿ ಆತಿಶಿ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಎಪಿ ಹೇಳಿಕೊಂಡಿದೆ. ಆದರೆ ಪೊಲೀಸರು ಮಾತ್ರ ಇದನ್ನು ನಿರಾಕರಿಸಿದ್ದಾರೆ.

- Advertisement -

ಜುಗ್ಗಿ-ಜೋಪ್ರಿ ಶಿಬಿರದಲ್ಲಿರುವ ಮನೆಗಳಿಗೆ ದೆಹಲಿ ಅಭಿವೃದ್ಧಿ ಪ್ರಾಧಿಕಾರವು ನೋಟಿಸ್ ಅಂಟಿಸಿದೆ. ಈ ಮನೆಯು ಅತಿಕ್ರಮಣವಾಗಿದ್ದು ಮೂರು ದಿನಗಳಲ್ಲಿ ಮನೆ ಖಾಲಿ ಮಾಡಬೇಕು. ಇಲ್ಲವಾದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನೋಟಿಸ್‌ನಲ್ಲಿ ಎಚ್ಚರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಇದನ್ನು ಓದಿದ್ದೀರಾ? ‘ದೆಹಲಿ ಸಿಎಂ ಆತಿಶಿ ಬಂಧನಕ್ಕೆ ಸಿದ್ಧತೆ!’

ಜೂನ್ ಮತ್ತು ಜುಲೈ 2023ರಲ್ಲಿ, ಈ ವರ್ಷ ಮೇ ತಿಂಗಳಲ್ಲಿ ಮೂರು ಬಾರಿ ನೆಲಸಮ ಕಾರ್ಯಾಚರಣೆ ಮಾಡಲಾಗಿದೆ. ಇಲ್ಲಿ ನೆಲೆಸಿರುವವರು ಹೆಚ್ಚಿನವರು ವಲಸೆ ಕಾರ್ಮಿಕರು ಆಗಿದ್ದಾರೆ, ಅವರಿಗೆ ಶಿಬಿರ ಇದಾಗಿದೆ. ಇವರನ್ನು ಭೇಟಿ ಮಾಡಲು ಹೋದಾಗ ಆತಿಶಿ ಬಂಧನ ನಡೆದಿದೆ ಎನ್ನಲಾಗಿದೆ. ಆದರೆ ಪೊಲೀಸರು ಮಾತ್ರ ನಾವು ಬಂಧಿಸಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿರುವ ಆತಿಶಿ, “ನಾಳೆ, ಬಿಜೆಪಿ ಭೂಮಿಹೀನರ ಶಿಬಿರದ ಮೇಲೆ ಬುಲ್ಡೋಜರ್‌ಗಳನ್ನು ಓಡಿಸಲಿದೆ. ಇಂದು, ಅಲ್ಲಿನ ಕೊಳೆಗೇರಿ ನಿವಾಸಿಗಳು ಪ್ರತಿಭಟನೆ ನಡೆಸಲು ಯೋಜಿಸುತ್ತಿದ್ದರು. ಆದ್ದರಿಂದ ಬಿಜೆಪಿ ಸರ್ಕಾರ ಸಾವಿರಾರು ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಿದೆ” ಆರೋಪಿಸಿದ್ದಾರೆ.

“ರೇಖಾ ಗುಪ್ತಾ ಅವರೇ ಯಾವುದೇ ಕೊಳೆಗೇರಿಗಳನ್ನು ಕೆಡವಲಾಗುವುದಿಲ್ಲ ಎಂದು ನೀವು ಹೇಳಿದ್ದೀರಿ ಅಲ್ಲವೇ? ಹಾಗಾದರೆ ಇಷ್ಟೊಂದು ಬೃಹತ್ ಪೊಲೀಸ್ ಮತ್ತು ಸಿಆರ್‌ಪಿಎಫ್‌ ಪಡೆ ಏಕೆ ನಿಯೋಜಿಸಲಾಗಿದೆ” ಆತಿಶಿ ದೆಹಲಿ ಸಿಎಂ ರೇಖಾ ಅವರನ್ನು ಪ್ರಶ್ನಿಸಿದ್ದಾರೆ.

ಆದರೆ ರೇಖಾ ಮಾತ್ರ ನ್ಯಾಯಾಲಯಗಳು ಹೊರಡಿಸಿದ ಆದೇಶವನ್ನು ಅಧಿಕಾರಿಗಳು ವಿರೋಧಿಸಲು ಸಾಧ್ಯವಿಲ್ಲ. ಸ್ಥಳಾಂತರಗೊಂಡ ನಿವಾಸಿಗಳಿಗೆ ವಸತಿ ಒದಗಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಪಿಎಫ್‌ಒ ವೇತನ ಮಿತಿ 25,000 ರೂಪಾಯಿಗೆ ಏರಿಕೆ: ಕೇಂದ್ರ ಸಂಪುಟ ಒಪ್ಪಿಗೆ

ಸಂಘಟಿತ ವಲಯದ ಲಕ್ಷಾಂತರ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಭಾರಿ ಸಿಹಿ ಸುದ್ದಿ...

ಸಿಜೆಪಿಯಿಂದ ‘ಆದಿವಾಸಿ ಸ್ಕೂಲ್ ಠೀಕ್ ಕರೋ’ ಅಭಿಯಾನ: ಸೆ.17ರಿಂದ ಶಾಲೆಗಳ ಪರಿಶೀಲನೆ

ದೇಶದ ಅರಣ್ಯ ಮತ್ತು ಮೂಲನಿವಾಸಿ ಪ್ರದೇಶಗಳ ಶಾಲೆಗಳಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಮತ್ತು...