ಆಪ್, ಕಾಂಗ್ರೆಸ್ ನಿರ್ಧಾರದಿಂದ ಬಿಜೆಪಿಗೆ ಲಾಭ: ಸಚಿವ ಚಲುವರಾಯಸ್ವಾಮಿ

Date:

ಆಪ್, ಕಾಂಗ್ರೆಸ್ ನಿರ್ಧಾರದಿಂದ ಬಿಜೆಪಿ ಲಾಭ ಪಡೆದಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

- Advertisement -

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಂಪಾದನೆ ವಿಚಾರವಾಗಿ, ದೆಹಲಿ ಫಲಿತಾಂಶದಲ್ಲಿ ವಿಶೇಷ ಏನಿಲ್ಲ. ಕೇಜ್ರಿವಾಲ್ ಇಂಡಿಯಾ ಒಕ್ಕೂಟದ ಜೊತೆ ಹೋಗಿದ್ದರೆ ಬಿಜೆಪಿಗೆ ಗೆಲ್ಲುವ ಅವಕಾಶ ಇರಲಿಲ್ಲ. ಆದರೆ ಕೇಜ್ರಿವಾಲ್ ಸ್ವಲ್ಪ ದುಡುಕಿ ನಿರ್ಧಾರ ಮಾಡಿದರು. ಹೀಗಾಗಿ ಆಪ್, ಕಾಂಗ್ರೆಸ್ ನಿರ್ಧಾರದಿಂದ ಬಿಜೆಪಿ ಲಾಭ ಪಡೆದಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಳೆದ ಬಾರಿಯೂ ಕೃಷಿ ಇಲಾಖೆಗೆ ಹೊಸ ಕಾರ್ಯಕ್ರಮಗಳ ಮೂಲಕ ಉತ್ತೇಜನ ನೀಡಿದ್ದರು. ಈ ಬಾರಿಯೂ ಉತ್ತಮ ಕಾರ್ಯಕ್ರಮಗಳು ಸಿಗುವ ನಿರೀಕ್ಷೆ ಇದೆ. ಇನ್ನೂ ಸಚಿವಾಕಾಂಕ್ಷಿಗಳಿಗೆ ನಿಗಮ ಮಂಡಳಿ ನೀಡಿ ಸಮಾಧಾನಪಡಿಸಿರುವ ವಿಚಾರವಾಗಿ ಮಾತನಾಡಿದ ಸಚಿವರು, ಸಚಿವಾಕಾಂಕ್ಷಿಗಳಿಗೆ ಮುಂದಿನ ದಿನಗಳಲ್ಲಿ ಅವಕಾಶ ಸಿಗಲಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹುದ್ದೆ ಒಳ್ಳೆಯ ಹುದ್ದೆಯಾಗಿದ್ದು, ರಾಜ್ಯಾದ್ಯಂತ ಕೆಲಸ ಮಾಡಲು ಉತ್ತಮ ಅವಕಾಶವಿದೆ. ನರೇಂದ್ರ ಸ್ವಾಮಿಯವರು ಎಂಜಿನಿಯರ್ ಆಗಿದ್ದರಿಂದ ಅವಕಾಶ ಸಿಕ್ಕಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಪಾರದರ್ಶಕತೆ ನಗೆಪಾಟಲಿಗೀಡಾಯಿತೇ?

ಮಂಡ್ಯ ಮಿಮ್ಸ್ ಸಮಸ್ಯೆಯ ಆಗರ
ಮಿಮ್ಸ್‌ನಲ್ಲಿ ತುಂಬಾ ಸಮಸ್ಯೆ ಇದೆ. ಹೀಗಾಗಿ ಜಿಲ್ಲಾಧಿಕಾರಿ ಮೂಲಕ ಸಮಸ್ಯೆಗಳ ಪಟ್ಟಿ ಮಾಡಿಸಲಾಗಿದೆ. ಮಿಮ್ಸ್‌ಗೆ ಮೇಜರ್ ಸರ್ಜರಿ ಆಗಬೇಕು. ವೈದ್ಯಕೀಯ ಶಿಕ್ಷಣ ಸಚಿವರ ಜೊತೆ ಶೀಘ್ರವೇ ಸಭೆ ನಡೆಸುತ್ತೇನೆ ಎಂದು ತಿಳಿಸಿದರು.

ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, 27 ವರ್ಷಗಳ ಬಳಿಕ ಬಿಜೆಪಿ ಅಧಿಕಾರಕ್ಕೇರಿದೆ. ಆದರೆ ಕಳೆದ 11 ವರ್ಷಗಳಿಂದ ಅಧಿಕಾರದಲ್ಲಿದ್ದ ಆಪ್ ಸೋಲು ಕಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...