ಎಎಪಿ ಪ್ರತಿಭಟನೆಗೆ ಅನುಮತಿ ನಿರಾಕರಣೆ; ಹಲವರ ಬಂಧನ

Date:

ಮದ್ಯ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಆಮ್ ಆದ್ಮಿ ಪಕ್ಷದ (ಎಎಪಿ) ಸದಸ್ಯರಲ್ಲಿ ಪಂಜಾಬ್ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಮತ್ತು ಸೋಮನಾಥ್ ಭಾರ್ತಿ ಸೇರಿದಂತೆ ಹಲವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಹಿಳೆಯರು ಸೇರಿದಂತೆ ಹಲವಾರು ಎಎಪಿ ನಾಯಕರು ಮತ್ತು ಕಾರ್ಯಕರ್ತರನ್ನು ಬಸ್‌ಗಳಿಗೆ ತಳ್ಳಿ, ಎಳೆದೊಯ್ದಿರುವ ಪೊಲೀಸರು, ವಿವಿಧ ಪೊಲೀಸ್ ಠಾಣೆಗಳಿಗೆ ಕರೆದೊಯ್ದಿದ್ದಾರೆ.

“ಪ್ರಧಾನಿ ನಿವಾಸಕ್ಕೆ ಹೋಗುವ ರಸ್ತೆಗಳಲ್ಲಿ ದೆಹಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ. ಭದ್ರತಾ ಕಾರಣಗಳಿಂದಾಗಿ, ಕೆಲವು ಮೆಟ್ರೋ ನಿಲ್ದಾಣಗಳನ್ನೂ ಕೂಡ ಇಂದು ಮುಚ್ಚಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಎಎಪಿ ಸದಸ್ಯರು ಪ್ರತಿಭಟನೆ ನಡೆಸಲು ಯಾವುದೇ ಅನುಮತಿ ಇಲ್ಲ. ಆದರೆ ಪಟೇಲ್ ಚೌಕ್ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನಾಕಾರರು ಒಟ್ಟುಗೂಡುತ್ತಾರೆಂಬ ಮಾಹಿತಿ ನಮಗೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ನಾವು ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಿದ್ದೇವೆ” ಎಂದು ನವದೆಹಲಿಯ ಉಪ ಪೊಲೀಸ್ ಆಯುಕ್ತ ದೇವೇಶ್ ಕುಮಾರ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜೈಲಿನಿಂದಲೇ ಅರವಿಂದ್ ಕೇಜ್ರಿವಾಲ್ ಅವರ 2ನೇ ಆದೇಶ

ಆಮ್ ಆದ್ಮಿ ಪಕ್ಷವು ಇಂದು ಪ್ರಧಾನಿ ನರೇಂದ್ರ ಮೋದಿಯವರ ನಿವಾಸಕ್ಕೆ ಘೇರಾವ್‌ಗೆ ಕರೆ ನೀಡಿದ್ದರೆ, ಕೇಜ್ರಿವಾಲ್ ಅವರ ಮುಖ್ಯಮಂತ್ರಿ ಸ್ಥಾನದ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮೆಗಾ ಮೆರವಣಿಗೆ ನಡೆಸುತ್ತಿದೆ. ಆದರೆ ಕೇಜ್ರಿವಾಲ್ ಅವರು ದೆಹಲಿಯ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೆಂದು ಎಎಪಿ ಒತ್ತಾಯಿಸುತ್ತುದ್ದು, ಅವರು ಜೈಲಿನಿಂದಲೇ ಕಾರ್ಯನಿರ್ವಹಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ ಮನೆಯ ಯಜಮಾನಿಗೆ ರೂ. 1 ಲಕ್ಷ ಜಮೆ, ರೈತರ ಸಾಲ ಮನ್ನಾ: ಸಿಎಂ ಸಿದ್ದರಾಮಯ್ಯ

"ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ....

ಮೋದಿ ಸುಳ್ಳುಗಳು: ಭಾಗ 2 | ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಮೋದಿ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆಯೇ?

ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ...

ಪ್ರಚಾರದ ಸಾಲು ಬದಲಿಸಲು ಹೇಳಿದ ಚುನಾವಣಾ ಆಯೋಗ; ಎಎಪಿ ಆಕ್ರೋಶ

ಲೋಕಸಭಾ ಚುನಾವಣೆಯ ಪ್ರಚಾರದ ಹಾಡಿನ ಸಾಲುಗಳನ್ನು ಮಾರ್ಪಡಿಸುವಂತೆ ಎಎಪಿ ಪಕ್ಷಕ್ಕೆ ಚುನಾವಣಾ...

ಹಾಸನ ಪೆನ್‌ಡ್ರೈವ್ ಪ್ರಕರಣ | ಎಸ್‌ಐಟಿ ತಂಡದ ಮುಖ್ಯಸ್ಥರಾಗಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇಮಕ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ವಿಶೇಷ ತನಿಖಾ...