ಲೋಕಸಭಾ ಚುನಾವಣೆಗೆ ಮುನ್ನ ಎಎಪಿ ನಾಯಕ, ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮಂಗಳವಾರ ಪಂಜಾಬ್‌ಗೆ ಭೇಟಿ ನೀಡಿ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಪಕ್ಷದ ಶಾಸಕರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿರುವ ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅನುಪಸ್ಥಿತಿಯಲ್ಲಿ, ಸಿಂಗ್ ಮತ್ತು ಮಾನ್ ಅವರು ಪಕ್ಷದ ಚುನಾವಣಾ ಪ್ರಚಾರವನ್ನು ಮುನ್ನಡೆಸುವ ದೊಡ್ಡ ಜವಾಬ್ದಾರಿಯನ್ನು ಹೊತ್ತಿರುವುದಾಗಿ ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಚುನಾವಣೆ ಬಳಿಕ ವಿಪಕ್ಷಗಳನ್ನು ಜೈಲು ಪಾಲಾಗಿಸುವುದೇ ಮೋದಿ ಗ್ಯಾರಂಟಿ: ಮಮತಾ ಬ್ಯಾನರ್ಜಿ
ಸಿಂಗ್ ಇಂದು ಪಂಜಾಬ್‌ಗೆ ಭೇಟಿ ನೀಡಲಿದ್ದಾರೆ. ಅವರು ಮಾನ್ ಅವರ ನಿವಾಸಕ್ಕೆ ಹೋಗಲಿದ್ದಾರೆ. ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸಿಂಗ್ ಮತ್ತು ಮಾನ್ ಎಎಪಿ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆಂದು ವರದಿಯಾಗಿದೆ.