ಎಎಪಿ ನಾಯಕ ಸತ್ಯೇಂದ್ರ ಜೈನ್ ಜಾಮೀನು ಅರ್ಜಿ ವಜಾ; ತಕ್ಷಣ ಶರಣಾಗಲು ಸುಪ್ರೀಂ ಸೂಚನೆ

Date:

ಎಎಪಿ ನಾಯಕ ಮತ್ತು ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್‌ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿದೆ. ತಕ್ಷಣವೇ ಶರಣಾಗುವಂತೆ ಸೂಚನೆ ನೀಡಿದೆ.

- Advertisement -

ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಜೈನ್ ಅವರು ಆರೋಗ್ಯದ ಕಾರಣ ನೀಡಿ ಜನವರಿ 17ರಂದು ಜಾಮೀನು ವಿಸ್ತರಣೆ ಪಡೆದಿದ್ದರು. ಇದೀಗ, ಮಧ್ಯಂತರ ಜಾಮೀನನ್ನು ರದ್ದುಗೊಳಿಸಿರವು ಸುಪ್ರೀಂ ಕೋರ್ಟ್‌, ತಕ್ಷಣವೇ ಶರಣಾಗುವಂತೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಮತ್ತು ನ್ಯಾಯಮೂರ್ತಿ ಪಂಕಜ್ ಮಿಥಾಲ್ ಅವರಿದ್ದ ಪೀಠವು ಜಾಮೀನು ಅರ್ಜಿಯ ವಿಚಾರಣೆ ನಡೆಸಿದೆ. ಜೈನ್ ಅವರು ಅಸ್ವಸ್ಥರಾಗಿದ್ದಾರೆ. ಅವರಿಗೆ ಶರಣಾಗಲು ಕನಿಷ್ಠ ಒಂದು ವಾರ ಸಮಯ ನೀಡಬೇಕೆಂದು ಜೈನ್ ಪರ ವಕೀಲರು ಮನವಿ ಮಾಡಿದರು. ಆದರೆ, ಅವರ ಮನವಿಯನ್ನು ತಿರಸ್ಕರಿಸಿದ ಪೀಠ, ತಕ್ಷಣವೇ ಶರಣಾಗುವಂತೆ ಹೇಳಿದೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧನಕೊಳ್ಳಲಾಗಿದ್ದ ಜೈನ್ ಅವರು 2023ರ ಮೇ 26ರಂದು ಮಧ್ಯಂತರ ಜಾಮೀನು ಪಡೆದಿದ್ದರು. ಬಳಿಕ, ಡಿಸೆಂಬರ್ 14ರಂದು ಜಾಮೀನನ್ನು ಜನವರಿ 8 ರವರೆಗೆ ವಿಸ್ತರಿಸಲಾಗಿತ್ತು.

ಜನವರಿ 17 ರಂದು, ಜೈನ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಮತ್ತು ಅವರ ಆರೋಗ್ಯ ಹದಗೆಡುತ್ತಿರುವ ಕಾರಣ ಅವರಿಗೆ ನಿಯಮಿತ ಜಾಮೀನು ನೀಡುವಂತೆ ಜೈನ್ ಅವರ ವಕೀಲರು ಮನವಿ ಮಾಡಿದ್ದರು. ಅಂದಿನಿಂದ ಈ ವರೆಗೆ ಅವರಿಗೆ ಜಾಮೀನು ವಿಸ್ತರಿಸಲಾಗಿತ್ತು.

ಪ್ರಾಸಿಕ್ಯೂಷನ್ ಪ್ರಕಾರ, ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಅಕ್ರಮವಾಗಿ ಚರ ಆಸ್ತಿಗಳನ್ನು ಗಳಿಸಿದ್ದಾರೆ ಎಂಬ ಆರೋಪಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ್ದ ದೂರಿನ ಆಧಾರದ ಮೇಲೆ ಇಡಿ ಜೈನ್ ವಿರುದ್ಧ ಪ್ರಕರಣ ದಾಖಲಿಸಿದೆ. ತಾವು ನಿರಪರಾಧಿ ಎಂದು ಪ್ರತಿಪಾದಿಸಿರುವ ಜೈನ್, ಈ ಪ್ರಕರಣದಲ್ಲಿ ಯಾವುದೇ ರೀತಿಯ ತಪ್ಪು ಮಾಡಿಲ್ಲ ಎಂದು ವಾದಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...