ಗುಂಡು ತಗುಲಿ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾವು; ಆತ್ಮಹತ್ಯೆಯೋ? ಕೊಲೆಯೋ? ಕಾರಣ ಅಸ್ಪಷ್ಟ!

Date:

Advertisements

ಪಂಜಾಬ್‌ನ ಲೂಧಿಯಾನ ಪಶ್ಚಿಮ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಶಾಸಕ ಗುರುಪ್ರೀತ್ ಗೋಗಿ ಬಸ್ಸಿ (58) ಶುಕ್ರವಾರ ತಡರಾತ್ರಿ ಗುಂಡು ತಗುಲಿ ಮೃತಪಟ್ಟಿದ್ದಾರೆ.

ಶಾಸಕರ ತಲೆಗೆ ಗುಂಡು ತಗುಲಿದ ನಂತರ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರು ಗುರುಪ್ರೀತ್ ಗೋಗಿ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಜಸ್ಕರ್ ಸಿಂಗ್ ತೇಜ ತಿಳಿಸಿದ್ದಾರೆ.

ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಶಾಸಕರಿಗೆ ಗುಂಡು ತಗುಲಿದ ಸುದ್ದಿ ತಿಳಿಯುತ್ತಿದ್ದಂತೆ ಕಮಿಷನರ್ ಚಹಾಲ್ ಕೂಡ ಆಸ್ಪತ್ರೆಗೆ ಬಂದರು. ಶಾಸಕ ಗೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಗುಂಡಿನ ದಾಳಿಯಿಂದ ಸಾವನ್ನಪ್ಪಿದ್ದಾರೆಯೇ ಎಂಬುದನ್ನು ಶವಪರೀಕ್ಷೆ ವರದಿಯಿಂದ ದೃಢಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Advertisements

“ಈ ಘಟನೆಯು ಮಧ್ಯರಾತ್ರಿಯ ಸುಮಾರಿಗೆ ಸಂಭವಿಸಿದೆ ಮತ್ತು ಅವರನ್ನು ಡಿಎಂಸಿ ಆಸ್ಪತ್ರೆಗೆ ಕರೆತಂದಾಗ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು” ಎಂದು ಪೊಲೀಸ್ ಉಪ ಆಯುಕ್ತ (ಡಿಸಿಪಿ) ಜಸ್ಕರನ್ ಸಿಂಗ್ ತೇಜಾ ಹೇಳಿದ್ದಾರೆ.

ಮೃತರ ಪತ್ನಿ ಡಾ ಸುಖಚೈನ್ ಕೌರ್ ಗೋಗಿ ಅವರು ಗುಂಡಿನ ಸದ್ದು ಕೇಳಿ ಸ್ಥಳಕ್ಕೆ ಧಾವಿಸಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಪತಿಯನ್ನು ಪತ್ತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭದ್ರತಾ ಸಿಬ್ಬಂದಿಯ ಸಹಾಯದಿಂದ ಕುಟುಂಬದವರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

“ಶಾಸಕರು ದಿನನಿತ್ಯದ ಕಾರ್ಯಕ್ರಮಗಳನ್ನು ಮುಗಿಸಿ ಘುಮರ್ ಮಂಡಿಯಲ್ಲಿರುವ ತಮ್ಮ ಮನೆಗೆ ಮರಳಿದರು. ಅವರು ತಮ್ಮ ಕೊನೆಯ ಕ್ಷಣಗಳಲ್ಲಿ ತಮ್ಮ ಕುಟುಂಬದೊಂದಿಗೆ ಇದ್ದರು. ಗೋಗಿ ಅವರು ಪತ್ನಿ, ಒಬ್ಬ ಮಗ ಮತ್ತು ಮಗಳನ್ನು ಅಗಲಿದ್ದಾರೆ” ಎಂದು ಎಎಪಿ ಜಿಲ್ಲಾ ಕಾರ್ಯದರ್ಶಿ ಪರಮವೀರ್ ಸಿಂಗ್ ತಿಳಿಸಿದ್ದಾರೆ.

ಸಾವಿಗೂ ಮುನ್ನ ಶುಕ್ರವಾರ ಪ್ರಾಚಿನ್ ಶೀಟ್ಲಾ ಮಾತಾ ಮಂದಿರಕ್ಕೆ ಭೇಟಿ ನೀಡಿ, ಎರಡು ದಿನಗಳ ಹಿಂದೆ ದೇವಸ್ಥಾನದಿಂದ ಬೆಳ್ಳಿ ಕಳ್ಳತನ ಮಾಡಿರುವ ಕಳ್ಳರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭಕ್ತರಿಗೆ ಭರವಸೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X