ದೆಹಲಿ ವಿಧಾನಸಭೆ ಚುನಾವಣೆ | 15 ಗ್ಯಾರಂಟಿಗಳನ್ನು ಒಳಗೊಂಡ ಎಎಪಿ ಪ್ರಣಾಳಿಕೆ ಬಿಡುಗಡೆ

Date:

ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಎಎಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಪ್ರಣಾಳಿಕೆಯಲ್ಲಿ ಒಟ್ಟು 15 ಗ್ಯಾರಂಟಿಗಳನ್ನು ಪ್ರಸ್ತಾಪಿಸಿದ್ದಾರೆ.

- Advertisement -

ಯುವಕರಿಗೆ ಉದ್ಯೋಗ ಖಾತರಿ, ‘ಮಹಿಳಾ ಸಮ್ಮಾನ್ ಯೋಜನೆ’, ವೃದ್ಧರಿಗೆ ಉಚಿತ ಚಿಕಿತ್ಸೆ ನೀಡುವ ಭರವಸೆಯನ್ನು ಎಎಪಿ ನೀಡಿದೆ. ಎಎಪಿ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ, ಮೆಟ್ರೋ ದರದಲ್ಲಿ ಶೇಕಡ 50ರಷ್ಟು ರಿಯಾಯಿತಿ ನೀಡುವುದಾಗಿಯೂ ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ದೆಹಲಿ ಚುನಾವಣೆ | ಎಎಪಿಯ ‘ಅಪ್ರಾಮಾಣಿಕ’ 11 ನಾಯಕರ ಪೋಸ್ಟರ್‌ನಲ್ಲಿ ರಾಹುಲ್ ಗಾಂಧಿ ಚಿತ್ರ

ಪ್ರಣಾಳಿಕೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೇಶದಲ್ಲಿ ಮೊದಲು ನಾವು ‘ಗ್ಯಾರಂಟಿ’ ಎಂಬ ಪದವನ್ನು ಸೃಷ್ಟಿಸಿದೆವು. ನಮ್ಮ ನಂತರ, ಬಿಜೆಪಿ ಅದನ್ನು ನಕಲಿಸಿದೆ. ಆದರೆ ವ್ಯತ್ಯಾಸವೆಂದರೆ, ನಾವು ನಮ್ಮ ಭರವಸೆಗಳನ್ನು ಪೂರೈಸುತ್ತೇವೆ, ಅವರು ಪೂರೈಸುವುದಿಲ್ಲ” ಎಂದು ಹೇಳಿದರು.

ಪ್ರಣಾಳಿಕೆಯಲ್ಲಿ ನಾವು 15 ಗ್ಯಾರಂಟಿಗಳನ್ನು ನೀಡಿದ್ದೇವೆ. ಅದರಲ್ಲಿ ನಮ್ಮ ಮೊದಲ ಗ್ಯಾರಂಟಿ ದೆಹಲಿ ನಿವಾಸಿಗಳಿಗೆ ‘ದೃಢವಾದ’ ಉದ್ಯೋಗ ಸೃಷ್ಟಿಸುವುದು ಎಂದು ತಿಳಿಸಿದರು.

ಮಹಿಳಾ ಸಮ್ಮಾನ್ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಮಾಸಿಕ 2,100 ರೂಪಾಯಿ ಆರ್ಥಿಕ ಸಹಾಯವನ್ನು ನೀಡುವುದು ಎಎಪಿ ಎರಡನೇ ಗ್ಯಾರಂಟಿ ಆಗಿದೆ. ಹಿರಿಯ ನಾಗರಿಕರಿಗೆ, ಸಂಜೀವನಿ ಯೋಜನೆಯಡಿಯಲ್ಲಿ ಉಚಿತ ಆರೋಗ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಇನ್ನು ಬಾಕಿ ಇರುವ ‘ಹೆಚ್ಚುವರಿ’ ನೀರಿನ ಬಿಲ್‌ಗಳನ್ನು ಮನ್ನಾ ಮಾಡುವ ಭರವಸೆಯನ್ನು ಎಎಪಿ ನೀಡಿದೆ.

ಇದನ್ನು ಓದಿದ್ದೀರಾ? ದೆಹಲಿ ಚುನಾವಣೆ | ಚೀನೀ ಸಿಸಿಟಿವಿ ಕ್ಯಾಮೆರಾ ಬಳಕೆ, ಪಂಜಾಬ್ ಆಡಳಿತ ದುರುಪಯೋಗ: ಎಎಪಿ, ಬಿಜೆಪಿ ವಾಕ್ಸಮರ

ರಾಷ್ಟ್ರ ರಾಜಧಾನಿಯ ಪ್ರತಿ ಮನೆಗೆ 24/7 ಶುದ್ಧ ಕುಡಿಯುವ ನೀರಿನ ಪೂರೈಕೆಯಾಗಲಿದೆ ಎಂದು ಎಎಪಿ ಭರವಸೆ ನೀಡಿದೆ. ಕಲುಷಿತ ಯಮುನಾ ನದಿಯನ್ನು ಸ್ವಚ್ಛಗೊಳಿಸುವುದು ಮತ್ತು ದೆಹಲಿಯ ರಸ್ತೆಗಳನ್ನು ವಿಶ್ವ ದರ್ಜೆಯ ರಸ್ತೆಯನ್ನಾಗಿಸುವುದು, ಬಾಬಾಸಾಹೇಬ್ ಅಂಬೇಡ್ಕರ್ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಅಧ್ಯಯನ ಮಾಡಲು ವಿದ್ಯಾರ್ಥಿವೇತನ ನೀಡುವ ಭರವಸೆಯನ್ನು ಕೂಡಾ ಎಎಪಿ ನೀಡಿದೆ.

ಉಚಿತ ಬಸ್ ಪ್ರಯಾಣ ಮತ್ತು ಮೆಟ್ರೋದಲ್ಲಿ ಶೇಕಡ 50ರಷ್ಟು ರಿಯಾಯಿತಿಯನ್ನು ಮಹಿಳೆಯರಿಗೆ ಮಾತ್ರವಲ್ಲ ವಿದ್ಯಾರ್ಥಿಗಳಿಗೂ ನೀಡಲಾಗುವುದು ಎಂದು ಎಎಪಿ ಹೇಳಿದೆ. ಪುರೋಹಿತರು ಮತ್ತು ಗುರುದ್ವಾರ ಗ್ರಂಥಗಳಿಗೆ ಮಾಸಿಕ 18,000 ರೂಪಾಯಿ ಆರ್ಥಿಕ ನೆರವು, ಬಾಡಿಗೆದಾರರಿಗೆ ಉಚಿತ ವಿದ್ಯುತ್ ಮತ್ತು ನೀರಿನ ಪ್ರಯೋಜನ ವಿಸ್ತರಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ.

ಹೆಚ್ಚುವರಿಯಾಗಿ, ದೆಹಲಿಯ ಒಳಚರಂಡಿ ವ್ಯವಸ್ಥೆಯನ್ನು ಸುಧಾರಿಸುವುದು, ಪಡಿತರ ಚೀಟಿಗಳನ್ನು ನೀಡುವುದು, ಆಟೋ ಮತ್ತು ಕ್ಯಾಬ್ ಚಾಲಕರಿಗೆ ಆರ್ಥಿಕ ನೆರವು ನೀಡುವುದು, ಅವರ ಹೆಣ್ಣುಮಕ್ಕಳ ಮದುವೆಗೆ 1 ಲಕ್ಷ ರೂಪಾಯಿ ಮತ್ತು 10 ಲಕ್ಷ ರೂಪಾಯಿ ವಿಮಾ ರಕ್ಷಣೆಯನ್ನು ನೀಡುವ ಭರವಸೆಯನ್ನು ಕೂಡಾ ಎಎಪಿ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...