ಎನ್‌ಇಪಿ ರದ್ದು | ಸರ್ಕಾರಿ ಶಾಲೆ ಮುಚ್ಚಲು ಸರ್ಕಾರದಿಂದ ಹುನ್ನಾರ : ಮಾಜಿ ಸಚಿವ ನಾಗೇಶ್ ಆರೋಪ

Date:

  • ‘ಈ ಸರ್ಕಾರದಲ್ಲಿ ಶಿಕ್ಷಣ ಸಚಿವರು ಯಾರು ಅನ್ನೋದೇ ಗೊತ್ತಾಗುತ್ತಿಲ್ಲ’ ಎಂದ ಮಾಜಿ ಶಿಕ್ಷಣ ಸಚಿವ
  • ಸಿದ್ದರಾಮಯ್ಯನವರಿಗೆ ಆಸಕ್ತಿ ಇಲ್ಲ ಎಂದು ಪಠ್ಯ ಪರಿಷ್ಕರಣೆ ಮಾಡುತ್ತಿದ್ದಾರೆಎಂದ ಬಿ ಸಿ ನಾಗೇಶ್

ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ರದ್ದು ಮಾಡಲು ಮುಂದಾಗಿರುವ ಕಾಂಗ್ರೆಸ್​ ಸರ್ಕಾರದ ನಿರ್ಧಾರಕ್ಕೆ ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ ಆಕ್ರೋಶ ವ್ಯಕ್ತಪಡಿಸಿದ್ದು, ‘ಬಹುತೇಕ ರಾಜಕಾರಣಿಗಳು, ಅಧಿಕಾರಿಗಳು ಶಾಲೆ ನಡೆಸುತ್ತಿದ್ದಾರೆ. ಹಾಗಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚಿಸಲು ಷಡ್ಯಂತ್ರ ನಡೆಸಿದ್ದಾರೆ’ ಎಂದು ಆರೋಪಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಪರಮೇಶ್ವರ್, ಎಸ್​​.ಎಸ್​.ಮಲ್ಲಿಕಾರ್ಜುನ, ಎಂ.ಬಿ.ಪಾಟೀಲ್ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದಾರೆ. ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ದೊಡ್ಡ ಹುನ್ನಾರ ಮಾಡಿದೆ. ಸಿದ್ದರಾಮಯ್ಯ ಎನ್​ಇಪಿ ತೆಗೆದುಹಾಕುವ ಮೊದಲು ಜನರ ಮುಂದಿಡಲಿ. ಅದರಲ್ಲಿ ಏನೆಲ್ಲ ಲೋಪದೋಷಗಳಿವೆ ಎಂದು ಬಹಿರಂಗಪಡಿಸಬೇಕು. ಖಾಸಗಿ ಸಂಸ್ಥೆಗಳ ಒತ್ತಡಕ್ಕೆ ಮಣಿದು ಈ ರೀತಿ ನಡೆದುಕೊಳ್ಳಬಾರದು’ ಎಂದು ಹೇಳಿದರು.

‘ಎನ್‌ಇಪಿ ರದ್ದು ಮಾಡುವುದು ಒಪ್ಪುವಂತದ್ದಲ್ಲ. ಮಂತ್ರಿಗಳ ಹೇಳಿಕೆಗಳನ್ನ ಗಮನಿಸುತ್ತಿದ್ದೇನೆ. ಅವರು ಹೇಳ್ತಾರೆ, ಮುಖ್ಯಮಂತ್ರಿಗಳಿಗೆ ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಆಸಕ್ತಿ ಇದೆ. ಹಾಗಾಗಿ ಪರಿಷ್ಕರಣೆ ಮಾಡ್ತಾ ಇದ್ದೇವೆ ಎಂದು. ಅಂದರೆ ಇವರು ಮಕ್ಕಳಿಗೋಸ್ಕರ ಶಿಕ್ಷಣ ನೀಡುತ್ತಿಲ್ಲ. ಸಿದ್ದರಾಮಯ್ಯನವರಿಗೆ ಆಸಕ್ತಿ ಇಲ್ಲ ಎಂದು ಪಠ್ಯ ಪರಿಷ್ಕರಣೆ ಮಾಡುತ್ತಿದ್ದಾರೆ’ ಎಂದು ಕಿಡಿಕಾರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

‘ಕಾಂಗ್ರೆಸ್‌ನ ಸಂಶೋಧನಾ ತಂಡದಿಂದ ಬಂದ ಪಠ್ಯವನ್ನು ಸೇರಿಸುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕೂಡ ರಾಜಕೀಯಗೊಳಿಸುತ್ತಿರುವ ಸರ್ಕಾರ ಯಾವುದಾದರೂ ಇದ್ದರೆ ಈ ಕೆಟ್ಟ ಸರ್ಕಾರ ಮಾತ್ರ’ ಎಂದ ಬಿ ಸಿ ನಾಗೇಶ್, ‘ಎನ್‌ಇಪಿ ಬೇಡ ಎನ್ನುವ ಕಾಂಗ್ರೆಸ್ ಮುಖಂಡರುಗಳ ಮಕ್ಕಳು ಹಾಗೂ ಮೊಮ್ಮಕ್ಕಳು ಯಾವ ಶಾಲೆಯಲ್ಲಿ ಓದುತ್ತಿದ್ದಾರೆ’ ಎಂದು ಪ್ರಶ್ನಿಸಿದರು.

‘ಉಳ್ಳವರ ಮಕ್ಕಳು ಸಿಬಿಎಸ್‌ಸಿಯಲ್ಲಿ ಓದಬಹುದು. ಆದರೆ ಬಡಮಕ್ಕಳು ಮಾತ್ರ ಸ್ಟೇಟ್ ಸಿಲೆಬಸ್‌ನಲ್ಲಿ ಓದಬೇಕಾ? ಬಹುತೇಕ ಖಾಸಗಿ ಶಾಲೆಗಳು ರಾಜಕಾರಣಿಗಳ ಒಡೆತನದ್ದಾಗಿದೆ. ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರ ಇದರ ಹಿಂದಿದೆ’ ಎಂದು ಆರೋಪಿಸಿದರು.

‘ಈ ಸರ್ಕಾರದಲ್ಲಿ ಶಿಕ್ಷಣ ಸಚಿವರು ಯಾರು ಅನ್ನೋದೇ ಗೊತ್ತಾಗುತ್ತಿಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಮಧು ಬಂಗಾರಪ್ಪ ಅವರಲ್ಲಿ ಯಾರು ಶಿಕ್ಷಣ ಸಚಿವರು. ಸರಕಾರದ ಹಿಂದಿರುವ ಬುದ್ಧಿಜೀವಿಗಳು ಶಿಕ್ಷಣ ಸಚಿವರೇ ಎಂದು ಮಾಜಿ ಸಚಿವ ಬಿ ಸಿ ನಾಗೇಶ್‌ ಪ್ರಶ್ನಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ತನ್ನ ಮೂಗಿನ ನೇರದ ಹಿಂದೂ ದೇಶ ನಿರ್ಮಾಣ ಮಾಡುವುದು ಅಸಾಧ್ಯ: ಸಿಎಂ ಸಿದ್ದರಾಮಯ್ಯ

"ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಭಾರತ ಬಹುತ್ವದ ದೇಶ. ಈ ಬಹುತ್ವದ ದೇಶವನ್ನು ನಾಶ...

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವು

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಸಿಎಂ ಬಿ ಎಸ್...

ಹರಿಯಾಣದಲ್ಲಿ ಬಿಜೆಪಿ ವಿರೋಧಿ ಅಲೆ | ಬಿಜೆಪಿಗೆಷ್ಟು ನಷ್ಟ – ಕಾಂಗ್ರೆಸ್‌ಗೆ ಎಷ್ಟು ಲಾಭ?

ಹರಿಯಾಣದ ಎಲ್ಲ 10 ಲೋಕಸಭಾ ಕ್ಷೇತ್ರಗಳಿಗೆ ಮೇ 25ರಂದು ಮತದಾನ ಮುಗಿದಿದೆ....

ಜವಾಹರಲಾಲ್‌ ನೆಹರೂ ಪುಣ್ಯತಿಥಿ | ಪುಷ್ಪ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರೂ...