ಸಂವಿಧಾನದ 370 ನೇ ವಿಧಿಯಡಿ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನದ ರದ್ದತಿಯನ್ನು ಪ್ರಶ್ನಿಸುವ ಅರ್ಜಿಗಳ ಮೇಲಿನ ಸುಪ್ರೀಂ ಕೋರ್ಟ್ ತೀರ್ಪನ್ನು “ದುಃಖದಾಯಕ ಮತ್ತು ದುರದೃಷ್ಟಕರ” ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್ ಸೋಮವಾರ ಶ್ರೀನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
‘ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಪೀಠ ನೀಡಿದ ತೀರ್ಪಿನಿಂದ ಈ ಭಾಗದ ಜನರು ಸಂತುಷ್ಟರಾಗಿಲ್ಲ. ಆದರೆ ನಾವು ತೀರ್ಪನ್ನು ಒಪ್ಪಿಕೊಳ್ಳಬೇಕು’ ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.
ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ ಮತ್ತು ಮುಂದಿನ ವರ್ಷ ಸೆಪ್ಟೆಂಬರ್ 30 ರೊಳಗೆ ವಿಧಾನಸಭೆಗೆ ಚುನಾವಣೆ ನಡೆಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದೆ.
ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಗೃಹಬಂಧನ ಆರೋಪ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯ ಕುರಿತು ಸುಪ್ರಿಂ ಕೋರ್ಟ್ ತೀರ್ಪು ನೀಡುವ ಮೊದಲು ಮೊದಲು ತಮ್ಮನ್ನು ಪೊಲೀಸರು ಗೃಹಬಂಧನದಲ್ಲಿ ಇರಿಸಿದ್ದರು ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನಾಯಕ ಒಮರ್ ಅಬ್ದುಲ್ಲಾ ಆರೋಪಿಸಿದ್ದಾರೆ.
ಎನ್‌ಸಿ ವಕ್ತಾರ ಸಾರಾ ಹಯಾತ್ ಶಾ ಅವರು ಅಬ್ದುಲ್ಲಾ ನಿವಾಸದ ಹಸಿರು ಬಣ್ಣದ ಗೇಟ್‌ನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
Early this morning, JKNC VP @OmarAbdullah was locked up inside his house. What a shame! pic.twitter.com/tZRQnDIcn1
— JKNC (@JKNC_) December 11, 2023
ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಪಿಡಿಪಿ ಹೇಳಿದ ನಂತರ ಒಮರ್ ಅಬ್ದುಲ್ಲಾ ಹೀಗೆ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸುವ ಮುನ್ನವೇ, ಪೊಲೀಸರು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರ ನಿವಾಸದ ಬಾಗಿಲುಗಳನ್ನು ಮುಚ್ಚಿದ್ದಾರೆ ಮತ್ತು ಅವರನ್ನು ಅಕ್ರಮ ಗೃಹಬಂಧನದಲ್ಲಿ ಇರಿಸಿದ್ದಾರೆ” ಎಂದು ಪಿಡಿಪಿ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ.
Even before Supreme Court judgement is pronounced, Police has sealed the doors of the residence of PDP President @MehboobaMufti and put her under illegal house arrest. pic.twitter.com/Ts2T7yFMrE
— J&K PDP (@jkpdp) December 11, 2023
ಆದಾಗ್ಯೂ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂಬ ಹೇಳಿಕೆಯನ್ನು ನಿರಾಕರಿಸಿದ್ದಾರೆ ಮತ್ತು ಅದನ್ನು “ಆಧಾರರಹಿತ” ಎಂದಿದ್ದಾರೆ.
‘ಇದು ಸಂಪೂರ್ಣವಾಗಿ ಆಧಾರರಹಿತವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಕಾರಣಗಳಿಂದ ಯಾರನ್ನೂ ಗೃಹಬಂಧನದಲ್ಲಿ ಇರಿಸಲಾಗಿಲ್ಲ ಅಥವಾ ಬಂಧಿಸಲಾಗಿಲ್ಲ. ಇದು ವದಂತಿಗಳನ್ನು ಹರಡುವ ಪ್ರಯತ್ನವಾಗಿದೆ’ ಎಂದು ಅವರು ಹೇಳಿದ್ದಾರೆ.
#WATCH | On reports of J&K leaders put under house arrest ahead of SC verdict on abrogation of Art 370, LG Manoj Sinha says, "This is totally baseless. No one has been put under house arrest or arrested due to political reasons in J&K. It is an attempt to spread rumours." pic.twitter.com/CHvRh28Pu1
— ANI (@ANI) December 11, 2023