ಕಾಂಗ್ರೆಸ್ ಕಚೇರಿಯಲ್ಲಿ ಅಕಾಡೆಮಿ ಅಧ್ಯಕ್ಷರು ವರದಿ ಒಪ್ಪಿಸುವುದು – ಅರ್ವೆಲ್ ಮಾತನ್ನು ನೆನಪಿಸುತ್ತದೆ

Date:

‘ದ್ವಂದಾಲೋಚನೆ ಎಂದರೆ ಏಕಕಾಲದಲ್ಲಿ ಮನಸ್ಸಿನಲ್ಲಿ ಎರಡು ತದ್ವಿರುದ್ಧ ನಂಬಿಕೆಗಳನ್ನು ಇಟ್ಟುಕೊಳ್ಳುವುದು ಮತ್ತು ಅವುಗಳನ್ನು ಸ್ವೀಕರಿಸುವುದು. ಬುದ್ಧಿಜೀವಿಗೆ ಯಾವ ದಿಕ್ಕಿನಲ್ಲಿ ತನ್ನ ಸ್ಮರಣೆಯನ್ನು ಬದಲಿಸಬೇಕೆಂದು ಗೊತ್ತಿರುತ್ತದೆ. ಅದ್ದರಿಂದ ವಾಸ್ತವದೊಡನೆ ತಾನು ಆಟವಾಡುತ್ತಿರುವುದಾಗಿಯೂ ಅವನಿಗೆ ತಿಳಿದಿರುತ್ತದೆ’ ಎಂದು ಬರೆಯುತ್ತಾನೆ ಅರ್ವೆಲ್. ಕರ್ನಾಟಕದ ಸಾಹಿತ್ಯ, ಸಾಂಸ್ಕೃತಿಕ ಲೋಕದ ವಿದ್ವಾಂಸರು ಇದಕ್ಕೆ ಉತ್ತಮ ಉದಾಹರಣೆಯಾಗಿದ್ದಾರೆ.

- Advertisement -

ಈ ಅಕಾಡೆಮಿ, ಪ್ರಾಧಿಕಾರದ ಅಧ್ಯಕ್ಷರು ಇಂದು ಕಾಂಗ್ರೆಸ್‌ನ ಕಚೇರಿಯಲ್ಲಿ ಕಾಂಗ್ರೆಸ್ ಮಂತ್ರಿಗಳು, ಮುಖಂಡರ ಮುಂದೆ ಎದ್ದು ನಿಂತು ವರದಿ ಒಪ್ಪಿಸುವುದನ್ನು ನೋಡಿದಾಗ ಅರ್ವೆಲ್‌ನ ಮೇಲಿನ ಮಾತುಗಳು ಪದೇ ಪದೇ ನೆನಪಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಅಧ್ಯಕ್ಷರುಗಳ ಈ ಅನೈತಿಕ ನಡೆಯಿಂದ ಸಾಂಸ್ಕೃತಿಕ ಲೋಕ ಅಧಃಪತನಕ್ಕೆ ತಲುಪಿದೆ. ಅಕಾಡೆಮಿ, ಪ್ರಾಧಿಕಾರ ಎಲ್ಲವೂ ಆಡಳಿತ ಪಕ್ಷದ ಕೃಪಾ ಪೋಷಿತ ಎನ್ನುವುದು ನಿಜವಾದರೂ ಸಹ ನಾನು ಹಾಗೆ ಮಾಡುತ್ತೇನೆ, ಹೀಗೆ ಮಾಡುತ್ತೇನೆ ನೋಡಿ ಎಂದೆಲ್ಲಾ ಬಡಬಡಿಸಿದವರು ಇಂದು ಇಂತಹ ದುರಂತಕ್ಕೆ ತಲುಪಿದ್ದಾರೆ. ಇವರು ಈ ಪ್ರಕ್ರಿಯೆಯನ್ನು ಪ್ರಜ್ಞಾಪೂರ್ವಕವಾಗಿ ನಡೆಸುತ್ತಾರೆ, ಆದರೆ ಬಹಿರಂಗ ಟೀಕೆಗೆ ಒಳಗಾಗಿಲ್ಲ ಎಂದು ಬಿಂಬಿಸಲು ಅಪ್ರಜ್ಞಾಪೂರ್ವಕವಾಗಿರುತ್ತಾರೆ.

ಅರ್ವೆಲ್ ಹೇಳಿದಂತೆ ಮುಂದುವರಿದು ಸುಳ್ಳು ಹೇಳುತ್ತಾ ಅದನ್ನು ನಂಬಿಸುವುದು, ಮುಜುಗರದ ಸಂಗತಿಗಳನ್ನು ಮರೆಸುವುದು ಮುಂದುವರಿಸುತ್ತಾರೆ. ಈ ರೀತಿಯ ವರ್ತನೆಯಿಂದ ಸಾಂಸ್ಕೃತಿಕ ಪ್ರತಿರೋಧ ಮತ್ತು ಕಟ್ಟುವಿಕೆಯನ್ನು ಸಂಪೂರ್ಣವಾಗಿ ಧ್ವಂಸಗೊಳಿಸಲಾಗುತ್ತದೆ

ಅಕಾಡೆಮಿ, ಪ್ರಾಧಿಕಾರ ಗಳನ್ನು ಕಾಂಗ್ರೆಸ್ ಪಕ್ಷದ ಶಾಖೆಗಳು ಎಂಬಂತೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಈ ವಿದ್ವಾಂಸರಿಗೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲು ಪ್ರಯತ್ನಿಸಬೇಕು ಎಂದು ಕರೆ ಕೊಟ್ಟಿದ್ದಾರೆ. ಅಲ್ಲಿದ್ದವರು ಇದನ್ನು ಕೇಳಿಕೊಂಡು ತಲೆದೂಗಿದರೇ? ಮೌನ ಸಮ್ಮತಿ ವ್ಯಕ್ತಪಡಿಸಿದರೇ?

ವ್ಯವಸ್ಥೆಯ ಅಸಮಾನತೆ ಮತ್ತು ತಾರತಮ್ಯ ಧೋರಣೆ ವಿರುದ್ಧ ನಿರಂತರವಾಗಿ ಮಾತನಾಡಬೇಕಾದ ಸಂದರ್ಭದಲ್ಲಿ ಪ್ರಗತಿಪರ ಲೇಖಕರು ಯಾವ ಮೇಲ್ಪಂಕ್ತಿ ಹಾಕಿ ಕೊಡುತ್ತಿದ್ದಾರೆ? ಸರ್ವವೂ ಅನುಕೂಲಕರ ಸ್ಥಿತಿಯಲ್ಲಿ ರಬೇಕೆಂದು ಬಯಸುವ ಮನಸ್ಥಿತಿ ಇಲ್ಲಿ ಕಂಡುಬರುತ್ತದೆ. ಇಲ್ಲದೇ ಹೋದರೆ ‘ಸ್ವಾಮಿ ನಾವು ವಿದ್ವಾಂಸರು ಸ್ವತಂತ್ರ ವ್ಯಕ್ತಿತ್ವ ಉಳ್ಳವರು, ನಿಮ್ಮ ಪಕ್ಷದ ಕಚೇರಿಯ ನಡೆಸುವ ಸಭೆಗೆ ಬರುವುದಿಲ್ಲ’ ಎಂದು ದಿಟ್ಟತನದಿಂದ ಮಾತನಾಡುತ್ತಿದ್ದರು. ಸತ್ಯದ ನಿಲುವನ್ನು ಅರಿಯದೇ ಹೋದರೆ ಅವರು ಯಾವುದೇ ಬಗೆಯ ಚಲನಶೀಲತೆ, ಕ್ರಿಯಾಶೀಲತೆಯ ಸಾಂಸ್ಕೃತಿಕ ಲೋಕವನ್ನು ಕಟ್ಟಲಾರರು.

ಪೋಸ್ಟ್ ಹಂಚಿಕೊಳ್ಳಿ:

ಬಿ. ಶ್ರೀಪಾದ ಭಟ್
ಬಿ. ಶ್ರೀಪಾದ ಭಟ್
ಶಿಕ್ಷಣ ತಜ್ಞರಾದ ಶ್ರೀಪಾದ ಭಟ್ ಅವರು, ಮೂಲತಃ  ವಿಜಯನಗರ ಜಿಲ್ಲೆಯವರು. ದಲಿತ ಮತ್ತು ಪ್ರಗತಿಪರ ಚಳವಳಿಗಳಲ್ಲಿ ಸಕ್ರಿಯರಾಗಿರುವ ಇವರು, 'ಹಿಂದುತ್ವ ರಾಜಕಾರಣ - ಅಂದು ಇಂದು ಮುಂದು', 'ಬಿಸಿಲು, ಬಯಲು, ನೆಳಲು - ಹೊಸ ಅಲೆ ಸಿನಿಮಾ ಕುರಿತಾದ ಕಥನ', 'ಕಣ್ಕಟ್ಟು', 'ಸಾವಿತ್ರಿಬಾಯಿ ಫುಲೆ ಬದುಕು ಬರಹ' ಮೊದಲಾದ ಕೃತಿಗಳನ್ನು ಬರೆದಿದ್ದಾರೆ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...