ಎಸಿ ಕೋರ್ಟ್‌ಗಳಲ್ಲಿ ನ್ಯಾಯಬದ್ಧ ಪ್ರಕರಣಗಳನ್ನು ಮಾತ್ರ ಸ್ವೀಕರಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣಬೈರೇಗೌಡ ತಾಕೀತು

Date:

“ಜನರ ನ್ಯಾಯಬದ್ಧ ಹಕ್ಕುಗಳನ್ನು ಅಧಿಕಾರಿಗಳು ಮೊಟಕುಗೊಳಿಸಲು ಸಾಧ್ಯವಿಲ್ಲ. ಹಾಗೆಂದು ಎಲ್ಲ ಪ್ರಕರಣಗಳನ್ನೂ ಮನಸೋ ಇಚ್ಚೆ ಸ್ವೀಕರಿಸುವುದೂ ಸರಿಯಲ್ಲ” ಎಂದು ಉಪ ವಿಭಾಗಾಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಕಿವಿಮಾತು ಹೇಳಿದರು.

- Advertisement -

ಶನಿವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಉಪ ವಿಭಾಗಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ಕೆಲ ಅಧಿಕಾರಿಗಳು ಕಾನೂನು ಮೀರಿ ತಮ್ಮ ವ್ಯಾಪ್ತಿಗೆ ಬರದ ಸಿವಿಲ್ ಮೊಕದ್ದಮೆಗಳನ್ನೂ ದಾಖಲಿಸಿಕೊಳ್ಳುತ್ತಿರುವುದು ಕಂಡುಬಂದಿದೆ. ಇದು ಸರಿಯಲ್ಲ. ಸಾರ್ವಜನಿಕರಿಗೆ ತಮ್ಮ ಸಿವಿಲ್ ಮೊಕದ್ದಮೆಗಳು ಎಸಿ ನ್ಯಾಯಾಲಯದಲ್ಲೇ ಮುಕ್ತಾಯವಾಗಲಿ ಎಂಬ ಅಭಿಲಾಷೆ ಇರುತ್ತದೆ. ನಾಗರಿಕರಿಗೆ ಕಾನೂನು ರೀತಿ ನೀಡಲಾದ ಹಕ್ಕನ್ನು ಯಾರೂ ಮೊಟಕುಗೊಳಿಸುವುದು ಸಾಧ್ಯವಿಲ್ಲ. ಆದರೆ ಸಿವಿಲ್ ನ್ಯಾಯಾಲಯಗಳಲ್ಲಿ ವಿಚಾರಣೆಗೊಳಪಡಬೇಕಾದ ಪ್ರಕರಣಗಳನ್ನು ನಿಯಮ ಮೀರಿ ದಾಖಲಿಸಿಕೊಳ್ಳಲು ನಿಮಗೆ ಅಧಿಕಾರ ಕೊಟ್ಟವರು ಯಾರು” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಬಹುತೇಕ ಎಲ್ಲಾ ಅಧಿಕಾರಿಗಳೂ ತುಂಬಾ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಎಲ್ಲಿಗೇ ಹೋದ್ರೂ ಜನ ಇಲಾಖೆಯಲ್ಲಿ ಆಗುತ್ತಿರುವ ಒಳ್ಳೆಯ ಜನಸ್ನೇಹಿ ಕೆಲಸದ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಆದರೆ, ಯಾರೋ ಕೆಲ ಅಧಿಕಾರಿಗಳಿಂದ ಉತ್ತಮ ಕೆಲಸ ಮಾಡುತ್ತಿರುವವರಿಗೂ ಕೆಟ್ಟ ಹೆಸರು ಕೂಡ ಬರುತ್ತಿದೆ. ಅಂತಹ ಬೇಜವಾಬ್ದಾರಿ ಅಧಿಕಾರಿಗಳನ್ನು ಸರಿ ದಾರಿಗೆ ತರುವುದು ಹೇಗೆ ಎಂಬುದು ಕೂಡ ನಮಗೆ ಗೊತ್ತಿದೆ” ಎಂದೂ ಸಚಿವರು ಎಚ್ಚರಿಕೆ ನೀಡಿದರು.

ಕೆಲವು ಉಪ ವಿಭಾಗಾಧಿಕಾರಿಗಳು ತಮ್ಮ ನ್ಯಾಯಾಲಯದಲ್ಲಿರುವ ಪ್ರಕರಣಗಳಿಗೆ ಸಂಬಂಧಿಸಿ ಕಾನೂನು ಮೀರಿ ಆದೇಶ ಹೊರಡಿಸಿರುವುದು ಕಂಡುಬಂದಿದೆ ಎಂದು ಸಭೆಯಲ್ಲಿ ಅಸಮಾಧಾನ ಹೊರಹಾಕಿದ ಸಚಿವರು, “ಎಸಿಗಳು ನ್ಯಾಯಾಲಯದ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊರಡಿಸಿರುವ ಆದೇಶಗಳು ನ್ಯಾಯ ಸಮ್ಮತವಾಗಿಲ್ಲ. ರಾಜ್ಯದ ಐದು ಜಿಲ್ಲೆಗಳ ಎಸಿಗಳು ಅಧಿಕಾರ ಮೀರಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ವಿಚಾರಣೆಗೆ ಸೂಚಿಸಲಾಗಿದ್ದು, ವರದಿ ಕೈಸೇರಿದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳು ಕಾನೂನು ಮೀರಿ ವರ್ತಿಸಿದರೆ ನಾವೂ ಸಹ ಏನೂ ಮಾಡಲಾಗುವುದಿಲ್ಲ. ನಾಳೆ ನೀವುಗಳು ಕೋರ್ಟ್ ಮೊರೆ ಹೋದರೆ ನಾವೂ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಲೂ ಸಿದ್ದರಿದ್ದೇವೆ” ಎಂದು ಎಚ್ಚರಿಸಿದರು.

“ಮುಂದಿನ ದಿನಗಳಲ್ಲಿ ಉಪ ವಿಭಾಗಾಧಿಕಾರಿಗಳು ತಮ್ಮ ಆದೇಶ ಪ್ರತಿಯಲ್ಲಿ ಎಲ್ಲಾ ಪ್ರಕರಣಗಳನ್ನೂ ಯಾವ ಕಾಯ್ದೆ ಮತ್ತು ಸೆಕ್ಷನ್ ಅಡಿಯಲ್ಲಿ ಆರ್ಡರ್ ಮಾಡಲಾಗಿದೆ? ಅದನ್ನು ಮಾಡೋಕೆ ಕಾನೂನಲ್ಲಿ ತಮಗೆ ಅಧಿಕಾರ ಇದೆಯಾ? ಎಂಬ ಮಾಹಿತಿಯನ್ನೂ ಸ್ಪಷ್ಟವಾಗಿ ನಮೂದಿಸಬೇಕು” ಎಂದು ಸೂಚಿಸಿದರು.

ಎಸಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಎರಡು ತಿಂಗಳಲ್ಲಿ ಮುಗಿಸಬೇಕು ಎಂದು ಗುರಿ ನಿಗದಿಪಡಿಸಿದರೆ, ಆರು ತಿಂಗಳಾದರೂ ಗುರಿ ಮುಟ್ಟಲು ಸಾಧ್ಯವಾಗದೆ ಇರುವುದು ಸರಿಯಲ್ಲ. ಹೀಗಾಗಿ ಶೀಘ್ರ ಎಲ್ಲಾ ಬಾಕಿ ಪ್ರಕರಣಗಳನ್ನೂ ಇತ್ಯರ್ಥಗೊಳಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

WhatsApp Image 2025 08 16 at 11.36.31 AM 1

ಎಸಿ ನ್ಯಾಯಾಲಯಗಳಲ್ಲಿ ಆರು ತಿಂಗಳ ಅವಧಿ ಮೀರಿದ 18,000 ಪ್ರಕರಣಗಳು ಬಾಕಿ ಇವೆ. ಒಂದು ವರ್ಷ ಮೀರಿದ 14,000 ಹಾಗೂ ಐದು ವರ್ಷಕ್ಕೂ ಮೇಲ್ಪಟ್ಟ 4,000 ಪ್ರಕರಣಗಳು ಬಾಕಿ ಇವೆ. ಈ ಪ್ರಕರಣಗಳನ್ನು ಏನಾದರೂ ಮಾಡಿ ನ್ಯಾಯಬದ್ಧ ಇತ್ಯರ್ಥಕ್ಕೆ ಒಳಪಡಿಸಲೇಬೇಕು. ಅಲ್ಲದೆ, ನಾಲ್ಕು ತಿಂಗಳಿಗಿಂತ ಅಧಿಕ ಅವಧಿಗೆ ಎಸಿ ನ್ಯಾಯಾಲಯದಲ್ಲಿ ಯಾವ ಪ್ರಕರಣಗಳನ್ನೂ ಉಳಿಸಿಕೊಳ್ಳಬಾರದು ಎಂದು ಅವರು ತಾಕೀತು ಮಾಡಿದರು.

ಮೊಬೈಲ್‌ನಲ್ಲಿ ತಲ್ಲೀನರಾಗಿದ್ದ ಚಿಕ್ಕಮಗಳೂರು ಎಸಿ: ತರಾಟೆಗೆ ತೆಗೆದುಕೊಂಡ ಸಚಿವರು

ಸಭೆ ಆರಂಭವಾಗುತ್ತಿದ್ದಂತೆ ಚಿಕ್ಕಮಗಳೂರು ಎಸಿ ಸುದರ್ಶನ ಅವರನ್ನು ಸಚಿವ ಕೃಷ್ಣ ಬೈರೇಗೌಡ ಅವರು ತರಾಟೆಗೆ ತೆಗೆದುಕೊಂಡರು.

ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಆರಂಭಿಸುತ್ತಿದ್ದಂತೆ ಉಪ ವಿಭಾಗಾಧಿಕಾರಿಗಳಾದ ಸುದರ್ಶನ್ ಮೊಬೈಲ್‌ನಲ್ಲಿ ಮಾತನಾಡುತ್ತಾ ತಲ್ಲೀನರಾಗಿದ್ದರು. ಈ ವೇಳೆ ಅಧಿಕಾರಿ ವರ್ತನೆ ವಿರುದ್ಧ ಬೇಸರ ಹೊರಹಾಕಿದ ಸಚಿವರು, “ಸ್ವಾಮಿ, ನೀವು ನನಗೆ ಗೌರವ ನೀಡುವ ಅವಶ್ಯಕತೆ ಇಲ್ಲ. ಕನಿಷ್ಠ ನನ್ನ ಕುರ್ಚಿಗಾದರೂ ಗೌರವ ನೀಡಿ. ನಾನು ನನ್ನ ಸ್ವಂತ ಕೆಲಸಕ್ಕಾಗಿ ಸಭೆ ನಡೆಸುತ್ತಿಲ್ಲ. ಇಲಾಖೆಯನ್ನು ಜನಸ್ನೇಹಿಗೊಳಿಸುವ ಸಂಬಂಧ ಈ ಸಭೆ ನಡೆಸಲಾಗುತ್ತಿದ್ದು ಅದಕ್ಕಾದರೂ ಚೂರು ಗೌರವ ಇರಲಿ” ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಬೆಂಗಳೂರು | ಮನೆಗಳ್ಳತನ : ಓರ್ವ ಮಹಿಳೆ ಸಹಿತ ಆರು ಮಂದಿ ಆರೋಪಿಗಳ ಬಂಧನ

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಹಾಗೂ ಸಂಬಂಧಿತ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...