ಬಿಬಿಎಂಪಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ; ಬಿಎಸ್‍ವೈ ಸಲಹೆ

Date:

  • ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನದಲ್ಲಿ ಬಿಜೆಪಿ ಗೆಲ್ಲಿಸಿ
  • ಐದು ಭರವಸೆ ಕಾರ್ಯರೂಪಕ್ಕೆ ತನ್ನಿ, ಇಲ್ಲ ಅಧಿಕಾರ ಬಿಟ್ಟು ತೊಲಗಿ

ಬಿಬಿಎಂಪಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ, ಬಿಜೆಪಿ ಅಧಿಕಾರ ಪಡೆಯುವಂತೆ ಮಾಡಿ. ನರೇಂದ್ರ ಮೋದಿಯವರು ಬೆಂಗಳೂರಿಗೆ ನೀಡುವ ಕೊಡುಗೆಗಳನ್ನು ಪ್ರಚಾರದಲ್ಲಿ ಸರಿಯಾಗಿ ಬಳಸಿಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಸಲಹೆ ನೀಡಿದರು.

- Advertisement -

ಅರಮನೆ ಮೈದಾನದಲ್ಲಿ ನಡೆದ ಬೆಂಗಳೂರು ಕೇಂದ್ರ ಜಿಲ್ಲಾ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರು ಕೊಟ್ಟ ಗ್ಯಾರಂಟಿಗಳನ್ನು ಜನರು ನಂಬಿದ್ದರು. ಇದರ ಪರಿಣಾಮವಾಗಿ ನಮಗೆ ಹಿನ್ನಡೆ ಆಗಿದೆ. ಕಾಂಗ್ರೆಸ್ಸಿಗರು ನೀಡಿದ ಐದು ಭರವಸೆಗಳನ್ನು ನೂರಕ್ಕೆ ನೂರು ಚಾಚೂತಪ್ಪದೆ ಕಾರ್ಯರೂಪಕ್ಕೆ ತರಬೇಕು; ಇಲ್ಲವೇ ಅಧಿಕಾರ ಬಿಟ್ಟು ತೊಲಗಲಿ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿಧಾನಸಭೆ ಒಳಗೆ ನಮ್ಮ ಶಾಸಕರು ಹೋರಾಡುತ್ತಾರೆ. ಸದನದ ಹೊರಗೆ ನಾವು ಸಾವಿರಾರು ಜನರು ಗಾಂಧಿ ಪ್ರತಿಮೆ ಕೆಳಗೆ ಕುಳಿತು ಅಧಿವೇಶನ ಮುಗಿಯುವವರೆಗೂ ಹೋರಾಟ ಮಾಡಬೇಕು. ಪ್ರಧಾನಿ ಮೋದಿಜಿ ಕೊಡುವ 5 ಕೆ.ಜಿಗೆ ಕಾಂಗ್ರೆಸ್ಸಿನ 10 ಕೆ.ಜಿ ಅಕ್ಕಿ ಸೇರಿಸಿ ಪ್ರತಿಯೊಬ್ಬರಿಗೆ 15 ಕೆಜಿ ನೀಡಲು ಒತ್ತಾಯಿಸಬೇಕು. ಈ ಹೋರಾಟದಲ್ಲಿ ನಾನು ಭಾಗವಹಿಸುತ್ತೇನೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ಭರವಸೆ ನೀಡಿ ಅಧಿಕಾರ ಮದದಿಂದ ಈಗ ಮೋದಿಜಿ ಅವರ ಕಡೆ ತೋರಿಸುತ್ತಿದ್ದಾರೆ. ಮೋದಿಯವರು ಉಚಿತವಾಗಿ 10 ಕೆ.ಜಿ ಅಕ್ಕಿ ಕೊಡುವುದಾಗಿ ಹೇಳಿದ್ದರೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ಸಿಗರು ಕೊಟ್ಟ ಎಲ್ಲ ಭರವಸೆಗಳನ್ನು ಈಡೇರಿಸುವಂತೆ ಹೋರಾಟ ಮಾಡಿ ಈ ಸರ್ಕಾರಕ್ಕೆ ಪಾಠ ಕಲಿಸಬೇಕಿದೆ ಎಂದು ಕರೆನೀಡಿದರು.

ಇಡೀ ವಿಶ್ವವೇ ಕೊಂಡಾಡುವ ಬಿಹಾರದ ಪಾಟ್ನಾದಲ್ಲಿ 18 ಪಕ್ಷಗಳು ಸಭೆ ಸೇರಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೆ ಅಧಿಕಾರಕ್ಕೆ ಬರಲು ಬಿಡಬಾರದೆಂಬ ಸಂಕಲ್ಪ ಮಾಡಿದ್ದಾರೆ. 18 ಪಕ್ಷಗಳ ಮುಖಂಡರು ಪ್ರಾಮಾಣಿಕರೇ ಆಗಿದ್ದರೆ ಇಂಥ ಸಂಕಲ್ಪ ಮಾಡುತ್ತಿರಲಿಲ್ಲ. ಅದರ ಬದಲಾಗಿ ಅವರನ್ನು ಬೆಂಬಲಿಸಬೇಕಿತ್ತು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೋದಿಜಿ ಅವರ ನೇತೃತ್ವದಲ್ಲಿ 300ರಷ್ಟು ಲೋಕಸಭಾ ಸೀಟುಗಳನ್ನು ಗೆದ್ದು ಮತ್ತೊಮ್ಮೆ ಅಧಿಕಾರ ಪಡೆಯಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯದ ಬಡವರು ಹಸಿವಿನಿಂದ ಸಾಯಲಿ ಎಂದು ಕೇಂದ್ರ ಅಕ್ಕಿ ಕೊಡುತ್ತಿಲ್ಲ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಲೋಕಸಭಾ ಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ. ಅಸಾಧ್ಯವಾದುದು ಯಾವುದೂ ಇಲ್ಲ. ನಮ್ಮ ಕಾರ್ಯಕರ್ತರು ಮನಸ್ಸು ಮಾಡಿದರೆ ಈ ಗುರಿ ಈಡೇರಿಸಲು ಸಾಧ್ಯವಿದೆ ಎಂದು ನುಡಿದರು.

ತಂಡದ ಸಂಚಾಲಕ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್, ಸಂಸದ ಪಿ ಸಿ ಮೋಹನ್, ಮಾಜಿ ಸಚಿವ ಗೋವಿಂದ ಕಾರಜೋಳ, ಡಾ. ಸಿ ಎನ್‌ ಅಶ್ವತ್ಥನಾರಾಯಣ, ಶಾಸಕರಾದ ಸುರೇಶ್‍ಕುಮಾರ್, ಮುನಿರತ್ನ, ಕೋಶಾಧ್ಯಕ್ಷ ಸುಬ್ಬನರಸಿಂಹ, ಜಿಲ್ಲಾಧ್ಯಕ್ಷ ಮಂಜುನಾಥ್ ಸಭೆಯಲ್ಲಿ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...

ಯುಪಿ ಚುನಾವಣೆ | ಕಾಂಗ್ರೆಸ್‌ಗೆ ಫಲ ನೀಡುವುದೇ ಬ್ರಾಹ್ಮಣ-ಮುಸ್ಲಿಂ ಸಮೀಕರಣ

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಸ್ತರಣೆ: ಬಸ್ ಕಂಡಕ್ಟರ್ ಆಗಿ ಟಿಕೆಟ್ ನೀಡಿದ ಸಿಎಂ ವಿಜಯ್

ತಮಿಳುನಾಡು ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣ ಯೋಜನೆಯನ್ನು...