ತನಿಖಾ ಸಂಸ್ಥೆಗಳ ಪ್ರಕಾರ ಬಿಜೆಪಿಯವರೆಲ್ಲರೂ ಪರಮ ಪ್ರಾಮಾಣಿಕರೆ: ಗುಂಡೂರಾವ್‌ ಪ್ರಶ್ನೆ

Date:

ವಿಪಕ್ಷ ನಾಯಕರನ್ನೇ ಗುರಿಯಾಗಿಸಿಕೊಂಡು ಕೇಂದ್ರೀಯ ತನಿಖಾ ಸಂಸ್ಥೆಗಳು ದಾಳಿ ನಡೆಸುವ ಮರ್ಮವೇನು? ಈ ತನಿಖಾ ಸಂಸ್ಥೆಗಳ ಪ್ರಕಾರ ಬಿಜೆಪಿಯಲ್ಲಿರುವವರೆಲ್ಲರೂ ಪರಮ ಪ್ರಾಮಾಣಿಕರೆ” ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಹಂಚಿಕೊಂಡಿರುವ ಅವರು, “ತನಿಖಾ ಸಂಸ್ಥೆಗಳ ಪ್ರಕಾರ ಬಿಜೆಪಿಯವರು ಭ್ರಷ್ಟಾಚಾರ ಮಾಡೇ ಇಲ್ಲವೇ? ಬಿಜೆಪಿಯವರ ವಿರುದ್ಧ ಸಾಲು ಸಾಲು ಭ್ರಷ್ಟಾಚಾರದ ಆರೋಪವಿದ್ದರೂ ಕೇಂದ್ರೀಯ ತನಿಖಾ ಸಂಸ್ಥೆಗಳ್ಯಾಕೆ ಅವರ ವಿರುದ್ಧ ಒಂದೇ ಒಂದು ಪ್ರಕರಣ ದಾಖಲಿಸುವುದಿಲ್ಲ?” ಎಂದು ವಾಗ್ದಾಳಿ ನಡೆಸಿದ್ದಾರೆ.

“ಭ್ರಷ್ಟ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸದಿರಲು ನರೇಂದ್ರ ಮೋದಿಯವರ ಪ್ರಭಾವ ಇಲ್ಲದೆ ಬೇರೇನು ಕಾರಣವಿದೆ?” ಎಂದು ಕೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸ್ವತಂತ್ರ ಭಾರತದಲ್ಲಿ ಕೇಂದ್ರದ ತನಿಖಾ ಸಂಸ್ಥೆಗಳನ್ನು ಗರಿಷ್ಟ ಮಟ್ಟದಲ್ಲಿ ದುರಪಯೋಗಪಡಿಸಿಕೊಂಡ ಯಾವುದಾದರೂ ಸರ್ಕಾರವಿದ್ದರೆ ಅದು‌ ಮೋದಿ ಸರ್ಕಾರ ಮಾತ್ರ. ಮೋದಿಯವರ ಆಡಳಿತದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಗಳು ದಾಖಲಿಸಿರುವ ಪ್ರಕರಣಗಳಲ್ಲಿ ಶೇ.95% ರಷ್ಟು ಪ್ರಕರಣಗಳು ವಿಪಕ್ಷ ನಾಯಕರ ವಿರುದ್ಧ. ಈ ಅಂಕಿ- ಅಂಶವೇ ತನಿಖಾ ಸಂಸ್ಥೆಗಳ ದುರ್ಬಳಕೆಯ ಸತ್ಯ ದರ್ಶನ ತೋರಿಸುತ್ತವೆ” ಎಂದಿದ್ದಾರೆ.

“ಮೋದಿಯವರಿಗೆ ಹಾಗೂ ಅವರ ಸರ್ಕಾರಕ್ಕೆ ವಿರೋಧ ಪಕ್ಷಗಳನ್ನು ರಾಜಕೀಯವಾಗಿ ಎದುರಿಸುವ ಎದೆಗಾರಿಕೆ ಇಲ್ಲ. ಹಾಗಾಗಿ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ವಿಪಕ್ಷದವರನ್ನು ಬೆದರಿಸುವ ಪ್ರಯತ್ನ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತಗಟ್ಟೆಯ ಮತದಾನದ ಅಂಕಿಅಂಶ ನೀಡುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಲು ಸುಪ್ರೀಂ ನಕಾರ

ಪ್ರತಿ ಮತಗಟ್ಟೆಯ ಮತದಾನದ ಅಂಕಿಅಂಶಗಳನ್ನು ಒದಗಿಸುವ ಫಾರ್ಮ್‌ 17ಸಿ ಪ್ರತಿಗಳನ್ನು ತನ್ನ...

ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲು; ಸಿಎಂಗೆ ಅಭಿನಂದನೆ ಸಲ್ಲಿಸಿದ ಉಡಚಪ್ಪ ಮಾಳಗಿ

ರಾಜ್ಯದಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀಡುವ ಸಂಬಂಧ ಅಧಿಕೃತ ಆದೇಶ ಹೊರಡಿಸಲು...

ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್ ರದ್ದುಗೊಳಿಸಲು ಪ್ರಕ್ರಿಯೆ ಆರಂಭ: ಸಚಿವ ಪರಮೇಶ್ವರ್‌

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವ ಕುರಿತು ನಾವು...

ಬೆಂಗಳೂರು | ಪ್ರಭುದ್ಯಾ ಕೊಲೆ ಪ್ರಕರಣ; 2 ಸಾವಿರಕ್ಕಾಗಿ ಕೊಲೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ ಅಪ್ರಾಪ್ತ

ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಬೆಂಗಳೂರಿನ ಸುಬ್ರಹ್ಮಣ್ಯಪುರ...