ಪ್ರಚೋದನಾಕಾರಿ ಫೇಸ್‌ ಬುಕ್‌ ಪೋಸ್ಟ್‌; ಡಿಕೆಶಿ ವಿರುದ್ಧ ಚುನಾವಣಾಧಿಕಾರಿಗೆ ಬಿಜೆಪಿ ದೂರು

Date:

  • ಪ್ರಚೋದನಾಕಾರಿ ಫೇಸ್‌ ಬುಕ್‌ ಪೋಸ್ಟ್‌ ಬಳಸಿದ ಆರೋಪ
  • ಕಾನೂನು ಕ್ರಮ ಜರುಗಿಸುವಂತೆ ಬಿಜೆಪಿಯಿಂದ ಆಗ್ರಹ

ಪ್ರಚೋದನಾಕಾರಿ ಫೇಸ್‌ ಬುಕ್‌ ಪೋಸ್ಟ್‌ ಬಳಸಿದ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ವಿರುದ್ಧ,ಮುಖ್ಯ ಚುನಾವಣಾ ಅಧಿಕಾರಿಗೆ ಬಿಜೆಪಿ ದೂರು ನೀಡಿದೆ.

ಮಂಗಳವಾರ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಿಯೋಗ ಈ ಸಂಬಂಧ ದೂರು ದಾಖಲಿಸಿದೆ.

ಡಿ ಕೆ ಶಿವಕುಮಾರ್ ತಮ್ಮ ಅಧಿಕೃತ ಫೇಸ್‍ಬುಕ್ ಪೇಜ್‍ನಲ್ಲಿ ಪ್ರಚೋದನಾಕಾರಿ ಪೋಸ್ಟ್‌ ಒಂದನ್ನು ಹಾಕಿದ್ದಾರೆ.

“ಪೆನ್ ಹಿಡಿದು ದೇಶದ ಭವಿಷ್ಯ ಉಜ್ವಲಗೊಳಿಸಬೇಕಾದ ಯುವಕರಿಗೆ ಆಯುಧಗಳನ್ನು ನೀಡಿ ಅವರ ಭವಿಷ್ಯವನ್ನು ಬಿಜೆಪಿ ಹೇಗೆ ಹಾಳುಗೆಡವಿದೆ ಎನ್ನುವುದಕ್ಕೆ ನಿನ್ನೆ ಸಾತನೂರಿನ ಬಳಿ ನಡೆದ ಘಟನೆಯೇ ಸಾಕ್ಷಿ” ಎಂದು ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪ ಮಾಡಿದ್ದಾರೆ.

ಜೊತೆಗೆ ಒಂದು ಜನಾಂಗದ ಮತದಾರರನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡಿ ನೀತಿಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕಮಲ ಪಕ್ಷ ಆರೋಪಿಸಿದೆ.

ಬಿಜೆಪಿ ವಿರುದ್ಧ ಡಿ ಕೆ ಶಿವಕುಮಾರ್ ಅವರು ಚುನಾವಣೆ ಸಂದರ್ಭದಲ್ಲಿ ಆಧಾರ ರಹಿತವಾಗಿ ಗಂಭೀರ ಆರೋಪ ಮಾಡಿದ್ದು, ಇದರ ಹಿಂದೆ ಮತದಾರರ ಮೇಲೆ ಪ್ರಭಾವ ಬೀರುವ ಸಂಚು ಇದೆ ಎಂದು ದೂರಿನಲ್ಲಿ ಗಮನ ಸೆಳೆಯಲಾಗಿದೆ.

ಈ ಹಿನ್ನೆಲೆಯಲ್ಲಿ ಡಿಕೆಶಿ ವಿರುದ್ಧ ದೂರು ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಬಿಜೆಪಿ ನಿಯೋಗ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಮಾಡಿಕೊಂಡಿದೆ.

ಈ ಸುದ್ದಿ ಓದಿದ್ದೀರಾ?:ರಾಮನಗರ | ಪುನೀತ್ ಕೆರೆಹಳ್ಳಿ ಪರಾರಿಯಾಗಿದ್ದಾನೆ; ಪತ್ತೆಗಾಗಿ ತಂಡ…

ಬಿಜೆಪಿ ನಿಯೋಗದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಎಸ್ ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ವಕೀಲ ಪ್ರಕೋಷ್ಟದ ಸಂಚಾಲಕ ಯೋಗೇಂದ್ರ ಹೊಡಗಟ್ಟ ಅವರಿದ್ದರು.

ಸಾತನೂರಿನಲ್ಲಿ ಗೋಸಾಗಣೆ ವೇಳೆ ನೈತಿಕ ಪೊಲೀಸ್‌ಗಿರಿ ಪ್ರದರ್ಶಿಸಿದ ಹಿಂದೂ ಸಂಘಟನೆಯೊಂದರ ಕಾರ್ಯಕರ್ತರು ಅನ್ಯಕೋಮಿನ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸಿದ್ದರು.

ಘಟನೆ ನಡೆದ ಕೆಲ ಸಮಯದ ನಂತರ ಆ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ. ಪೊದೆಯೊಂದರ ಬಳಿ ಆತನ ಮೃತದೇಹ ಪತ್ತೆಯಾಗಿತ್ತು.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ತಮ್ಮ ಫೇಸ್‌ಬುಕ್‌ನಲ್ಲಿ ಈ ವಿಚಾರವನ್ನು ಹಂಚಿಕೊಂಡು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ: ಕಾರ್ಯಕರ್ತರ ನೆರವಿಗಾಗಿ ಸಹಾಯವಾಣಿ ಆರಂಭಿಸಿದ ಬಿಜೆಪಿ

24 ಗಂಟೆ ಕಾರ್ಯಾಚರಣೆ ನಡೆಸಲಿರುವ ಬಿಜೆಪಿ ಸಹಾಯವಾಣಿ ಸಹಾಯವಾಣಿ ಕಾರ್ಯಾಚರಣೆಗೆ 100 ಜನ...

3 ತಿಂಗಳೊಳಗೆ ಎಲ್ಲ ಮಹಿಳೆಯರಿಗೂ ಶಕ್ತಿ ಯೋಜನೆ ಸ್ಮಾರ್ಟ್ ಕಾರ್ಡ್ ವಿತರಣೆ : ರಾಮಲಿಂಗಾರೆಡ್ಡಿ

ಭಾನುವಾರ ಅಧಿಕೃತ ಚಾಲನೆ ಪಡೆದುಕೊಳ್ಳಲಿರುವ ಶಕ್ತಿ ಯೋಜನೆ ನಾಳೆ ಸಾಂಕೇತಿಕವಾಗಿ ಕೆಲವರಿಗೆ ಸ್ಮಾರ್ಟ್...

ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಗೊಂದಲಗಳಿಲ್ಲ: ಸಿಎಂ ಸಿದ್ದರಾಮಯ್ಯ

ಸರ್ಕಾರದ ಘೋಷಿತ ಗ್ಯಾರಂಟಿಗಳು ಹಂತಹಂತವಾಗಿ ಜಾರಿಯಾಗಲಿವೆ ಪ್ರಣಾಳಿಕೆಯ ಘೋಷಣೆಯಂತೆ ನಾವು ಗ್ಯಾರಂಟಿ ಅನುಷ್ಠಾನ...

ರಾಜ್ಯ ಶಿಕ್ಷಣ ನೀತಿ | ತಜ್ಞರ ಜತೆ ಸಮಾಲೋಚಿಸಿ ಗೊಂದಲವಿಲ್ಲದಂತೆ ಜಾರಿಮಾಡುತ್ತೇವೆ: ಸಚಿವ ಸುಧಾಕರ್‌

ಉದ್ಯೋಗ ಮತ್ತು ನೇಮಕಾತಿ ಅಭಿಯಾನ ಉದ್ಘಾಟಿಸಿ ಉನ್ನತ ಶಿಕ್ಷಣ ಸಚಿವ ಹೇಳಿಕೆ 'ಎಸ್‌ಇಪಿ...