ಮತದಾನ ಗೌಪ್ಯತೆ ಕಾಪಾಡದ ಆರೋಪ; ಬಿಜೆಪಿ ಸಂಸದ ಜಿ ಎಂ ಸಿದ್ದೇಶ್ವರ ವಿರುದ್ಧ ದೂರು ದಾಖಲು

Date:

ಮತದಾನ ಗೌಪ್ಯತೆ ಕಾಪಾಡದ ಆರೋಪದ ಮೇಲೆ ದಾವಣಗೆರೆ ಬಿಜೆಪಿ ಸಂಸದ ಜಿ ಎಂ ಸಿದ್ದೇಶ್ವರ ವಿರುದ್ಧ ನಗರದ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

- Advertisement -

ತೋಟಗಾರಿಕೆ ಸಹಾಯಕ ನಿರ್ದೇಶಕ, ಎಫ್ ಎಸ್ ಟಿ ಮುಖ್ಯಸ್ಥ ರಾಜೇಶ್ ಕುಮಾರ್ ಅವರು ಸಂಸದರ ವಿರುದ್ಧ  ಮತದಾನ ಗೌಪ್ಯತೆ ಕಾಪಾಡಿಲ್ಲ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ದಾವಣಗೆರೆ ಲೋಕಸಭಾ ಕ್ಷೇತ್ರದ 106ನೇ ವೃತ್ತದ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಪಿಎಸ್- 236 ಮಾಗನೂರು ಬಸಪ್ಪ ಪಬ್ಲಿಕ್ ಶಾಲೆಯ ಕೊಠಡಿ ಸಂಖ್ಯೆ- 1ರಲ್ಲಿ ಜಿ ಎಂ ಸಿದ್ದೇಶ್ವರ್ ಅವರು ಮತ ಚಲಾಯಿಸಿದರು. ಇದೇ ವೇಳೆ ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ತಮ್ಮ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರೊಂದಿಗೆ ಹಾಲಿ ಬಿಜೆಪಿ ಸಂಸದರು ಮತದಾನ ಮಾಡಿದರು.

ಮೊದಲು ಮತದಾನ ಮಾಡಿದ ಸಿದ್ದೇಶ್ವರ ಅವರು, ಗಾಯತ್ರಿಯವರ ಮತದಾನ ಆಗುವವರೆಗೆ ಅಲ್ಲೇ (ಮತಯಂತ್ರದ ಪಕ್ಕದಲ್ಲೇ) ಉಳಿದಿದ್ದರು. ಅಲ್ಲದೆ, ಗಾಯಿತ್ರಿ ಸಿದ್ದೇಶ್ವರ್ ರವರು ಮತದಾನ ಮಾಡುತ್ತಿರುವುದನ್ನು ಸಿದ್ದೇಶ್ವರ್ ಜಿಎಂ ರವರು ಪಕ್ಕದಲ್ಲೇ ನಿಂತು ನೋಡಿದರು. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಈ ವಿಡಿಯೋ ತುಣುಕು ಜಿಲ್ಲೆಯ ಸಹಾಯಕ ಚುನಾವಣಾಧಿಕಾರಿಗಳಿಗೂ ತಲುಪಿದ್ದು, ಆ ಹಿನ್ನೆಲೆಯಲ್ಲಿ ಅವರು ದೂರು ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿದ್ದರು. ಆ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.

ಬಳ್ಳಾರಿಯಲ್ಲಿ ಕಾರ್ಪೊರೇಟರ್ ವಿರುದ್ಧ ಕ್ರಮ

ಮೇ 7ರಂದು ನಡೆದಿದ್ದ ಲೋಕಸಭಾ ಚುನಾವಣೆಯ ಮತದಾನದ ಸಂದರ್ಭದಲ್ಲಿ ಮತದಾನದ ಗೌಪ್ಯತೆ ನಿಯಮ ಉಲ್ಲಂಘಿಸಿದ್ದ ಬಳ್ಳಾರಿಯ ಕಾರ್ಪೋರೇಟರ್ ಒಬ್ಬರ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ಬಳ್ಳಾರಿ ಪಾಲಿಕೆ 10 ನೇ ವಾರ್ಡ್ ನ ಬಿಜೆಪಿ ಸದಸ್ಯ ಕೋನಂಕಿ ತಿಲಕ್ ಅವರು ಮತದಾನದ ನಂತರ ಮತದಾರರ ಮೇಲೆ ಪ್ರಭಾವ ಬೀರುವಂಥ ಕೆಲಸ ಮಾಡಿದ್ದಾರೆಂಬ ಅವರ ಮೇಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ...

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ ‘ಮಹಾಭಿಯೋಗ’ ನಡೆದಿದೆಯೇ?

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ...

ಸೌಜನ್ಯ ಪ್ರಕರಣ ಮರುತನಿಖೆ | SIT ಪುನರ್‌ ರಚಿಸುವಂತೆ ಕೊಂದವರು ಯಾರು? ಆಂದೋಲನ ಒತ್ತಾಯ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ...

ರಾಜ್ಯದಲ್ಲಿ ಮಿತಿಮೀರಿದ ದಲಿತರ ಮೇಲಿನ ದೌರ್ಜನ್ಯ: ಕಾನೂನು ಸುವ್ಯವಸ್ಥೆ ವೈಫಲ್ಯದ ವಿರುದ್ಧ ಮುಖಂಡರ ಗುಡುಗು

ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ ದಲಿತರ ಮೇಲಿನ ಹಲ್ಲೆ, ದೌರ್ಜನ್ಯ, ಮಹಿಳೆಯರ...