ಕಾನೂನು ಬಾಹಿರ ಕೆಲಸ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Date:

ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ನಗರದಲ್ಲಿ ಶಾಂತಿಯುತ ಹಾಗೂ ಭಯವಿಲ್ಲದ ವಾತಾವರಣ ನಿರ್ಮಿಸಲು ಬೆಂಗಳೂರು ನಗರ ಪೊಲೀಸರು ಶ್ರಮಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

- Advertisement -

ಇಂದು ತಮ್ಮನ್ನು ಭೇಟಿಯಾದ ಬೆಂಗಳೂರು ನಗರದ ಹಿರಿಯ ಪೊಲೀಸ್‌ ಅಧಿಕಾರಿಗಳನ್ನುದ್ದೇಶಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಕಡಿಮೆ ಆಗಿದೆ. ಸಂಪೂರ್ಣವಾಗಿ ಅಪರಾಧ ನಿರ್ಮೂಲನೆ ಮಾಡಲಾಗದಿದ್ದರೂ, ಕಡಿಮೆಗೊಳಿಸಲು ಸಾಧ್ಯವಿದೆ. ತಡೆಯಲು ಸಾಧ್ಯವಿರುವ ಅಪರಾಧಗಳನ್ನು ತಡೆಗಟ್ಟಲು ಪೊಲೀಸರು ಹೆಚ್ಚಿನ ಆದ್ಯತೆ ನೀಡಬೇಕು” ಎಂದು ತಿಳಿಸಿದರು.

cm and police meets

ನಗರದಲ್ಲಿ ಡ್ರಗ್ಸ್‌ ಹಾವಳಿ ತಡೆಗಟ್ಟುವಂತೆ ಸೂಚನೆ ನೀಡಿದ ಮುಖ್ಯಮಂತ್ರಿಗಳು, ಸಮಾಜದ ಒಳಿತಿಗಾಗಿ ಡ್ರಗ್ಸ್‌ ಮಾಫಿಯಾವನ್ನು ಮಟ್ಟಹಾಕುವ ಬಗ್ಗೆ ಎಲ್ಲ ಹಂತದ ಪೊಲೀಸ್‌ ಅಧಿಕಾರಿಗಳು ತೀರ್ಮಾನ ಕೈಗೊಂಡು ಅನುಷ್ಠಾನಗೊಳಿಸಬೇಕು. ವಿವಿಧ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಒಂಟಿಯಾಗಿ ಜೀವನ ಮಾಡುವವರನ್ನು ಗುರುತಿಸಿ, ಅವರ ರಕ್ಷಣೆಗೆ ಆದ್ಯತೆ ನೀಡಬೇಕು ಹಾಗೂ ಪೊಲೀಸ್‌ ಬೀಟ್‌ ವ್ಯವಸ್ಥೆ ಬಲಪಡಿಸಬೇಕು ಎಂದು ಸೂಚಿಸಿದರು.

ನಗರದಲ್ಲಿರುವ 241 ಹೊಯ್ಸಳ ವಾಹನಗಳ ಗಸ್ತುಪಡೆಯನ್ನು ಬಲಪಡಿಸಿ, ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದ ಮುಖ್ಯಮಂತ್ರಿಗಳು, “ಪೊಲೀಸ್‌ ಅಧಿಕಾರಿ, ಸಿಬ್ಬಂದಿ ರಿಯಲ್‌ ಎಸ್ಟೇಟ್‌ನವರ ಜೊತೆ ಶಾಮೀಲಾಗುವುದು, ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವುದು ಸರಿಯಲ್ಲ. ಇದರಿಂದ ಜನರಿಗೆ ಪೊಲೀಸ್‌ ವ್ಯವಸ್ಥೆಯ ಮೇಲಿನ ವಿಶ್ವಾಸ ಹೊರಟುಹೋಗುತ್ತದೆ” ಎಂದು ಕಿವಿಮಾತು ಹೇಳಿದರು.

ps meets

“ಸರ್ಕಾರ ಎಂದಿಗೂ ಕಾನೂನು ಬಾಹಿರವಾಗಿ ಕೆಲಸ ಮಾಡಿ ಎಂದು ನಿಮಗೆ ಹೇಳುವುದಿಲ್ಲ. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾದರೆ ಸರ್ಕಾರ ನಿಮ್ಮ ಮೇಲೂ ಕಠಿಣ ಕ್ರಮ ಕೈಗೊಳ್ಳುತ್ತದೆ. ನಗರದಲ್ಲಿ ರೌಡಿಸಂ ಅನ್ನು ಮಟ್ಟ ಹಾಕಬೇಕು. ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶ ನೀಡಬಾರದು” ಎಂದು ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಗರದಲ್ಲಿ ಬಂದೋಬಸ್ತ್‌ ವ್ಯವಸ್ಥೆ ಉತ್ತಮವಾಗಿ ಮಾಡಿರುವುದಾಗಿ ಬೆಂಗಳೂರು ನಗರ ಪೊಲೀಸರಿಗೆ ಮುಖ್ಯಮಂತ್ರಿಗಳು ಅಭಿನಂದನೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಜಾತಿಗಣತಿ ವರದಿ ಸ್ವೀಕಾರ ಮಾಡಲು ಸಿದ್ದರಾಮಯ್ಯಗೆ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ

ಮುಖ್ಯಮಂತ್ರಿಯವರ ಮಾರ್ಗದರ್ಶನದಲ್ಲಿ ನಗರದಲ್ಲಿ ಶಾಂತಿಯುತ ಹಾಗೂ ಸುರಕ್ಷಿತ ವಾತಾವರಣ ನಿರ್ಮಾಣಕ್ಕೆ ಶ್ರಮಿಸುವುದಾಗಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಅವರು ತಿಳಿಸಿದರು.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...