‘ಯಾರು ಅವರು, 2 ನಿಮಿಷದ ಕಾಮೆಡಿಯನ್’: ಕುನಾಲ್ ಕಾಮ್ರಾ ಬಗ್ಗೆ ಕಂಗನಾ ರಣಾವತ್ ಕಿಡಿ

Date:

ಶಿವಸೇನೆ ಮುಖ್ಯಸ್ಥ ಏಕನಾಥ್ ಶಿಂದೆಯನ್ನು ಟೀಕಿಸಿದ ಸ್ಟಾಂಡ್‌ಅಪ್ ಕಾಮೆಡಿಯನ್ ಕುನಾಲ್ ಕಾಮ್ರಾ ವಿರುದ್ಧ ಬಿಜೆಪಿ ಸಂಸದೆ ಮತ್ತು ನಟಿ ಕಂಗನಾ ರಣಾವತ್ ವಾಗ್ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲೇ ಈ ಹಿಂದೆ ಉದ್ಧವ್ ಠಾಕ್ರೆ ಸರ್ಕಾರ ತನ್ನ ವಿರುದ್ದ ಕೈಗೊಂಡ ಕ್ರಮ ಕಾನೂನುಬಾಹಿರವಾಗಿತ್ತು, ಇದು ಕಾನೂನುಬದ್ಧವಾಗಿದೆ ಎಂದು ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ.

- Advertisement -

ಸಂಸತ್ತಿನ ಹೊರಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಕಂಗನಾ ರಣಾವತ್, “ಯಾರನ್ನಾದರೂ ಈ ರೀತಿ ಅಗೌರವಿಸುವುದು ಸರಿಯಲ್ಲ. ಹಾಸ್ಯದ ಹೆಸರಲ್ಲಿ ಯಾವುದೇ ವ್ಯಕ್ತಿಯನ್ನು ಅವಮಾನಿಸಬಾರದು. ಬರೀ ಎರಡು ನಿಮಿಷಗಳ ಖ್ಯಾತಿಗಾಗಿ ಈ ರೀತಿ ಮಾಡುತ್ತಾರೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಶಿಂದೆ ‘ದ್ರೋಹಿ’ ಎಂದ ಕುನಾಲ್ ಕಮ್ರಾ: ಎಫ್‌ಐಆರ್ ದಾಖಲು, ಹೋಟೆಲ್ ಧ್ವಂಸ

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರನ್ನು ಸ್ಟಾಂಡ್‌ಅಪ್ ಕಾಮೆಡಿಯನ್ ಕುನಾಲ್ ಕಾಮ್ರಾ ಟೀಕಿಸಿದ್ದು, ಈ ವಿಡಿಯೋ ವೈರಲ್ ಆದ ಕೆಲವೇ ಗಂಟೆಗಳಲ್ಲಿ ಕುನಾಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕುನಾಲ್ ವಿರುದ್ಧ ಶಿಂದೆ ನೇತೃತ್ವದ ಶಿವಸೇನೆ ಶಾಸಕ ಮುರ್ಜಿ ಪಟೇಲ್ ದೂರು ನೀಡಿದ್ದಾರೆ. ಕಮ್ರಾ ಹೆಸರನ್ನು ಉಲ್ಲೇಖಿಸದೆಯೇ ಪರೋಕ್ಷವಾಗಿ ಶಿಂದೆ ಅವರನ್ನು ಸಂಬೋಧಿಸಿ ತನ್ನದೇ ಪಕ್ಷಕ್ಕೆ ದ್ರೋಹ ಬಗೆದ ದ್ರೋಹಿ ಎಂದು ಹೇಳಿದ್ದಾರೆ. ಅದಾದ ಬೆನ್ನಲ್ಲೇ ಶಿವಸೇನೆ ಕಾರ್ಯಕರ್ತರು ಮುಂಬೈ ಸ್ಟುಡಿಯೋವನ್ನು ಧ್ವಂಸಗೊಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಂಸದೆ ಕಂಗನಾ, “ನನಗೆ ಏನಾಯಿತು ಮತ್ತು ಈಗ ಏನಾಗುತ್ತಿದೆ ಎಂಬುದನ್ನು ನಾನು ಹೋಲಿಸಲು ಬಯಸುವುದಿಲ್ಲ. ಅದು ಕಾನೂನುಬಾಹಿರ, ಇದು ಕಾನೂನುಬದ್ಧವಾಗಿದೆ. ಯಾವುದೇ ವ್ಯಕ್ತಿಯನ್ನು ಹಾಸ್ಯದ ಹೆಸರಲ್ಲಿ ಅವಮಾನಿಸುವುದು ಸರಿಯಲ್ಲ. ನೀವು ಅವರ ಕೆಲಸವನ್ನು ನಿರ್ಲಕ್ಷಿಸುತ್ತಿದ್ದೀರಿ. ಶಿಂದೆ ಆಟೋರಿಕ್ಷಾ ಓಡಿಸುತ್ತಿದ್ದರು. ಆದರೆ ಈಗ ತುಂಬಾ ಬೆಳೆದಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕುನಾಲ್ ಕಮ್ರಾ ಜೊತೆ ಟ್ವೀಟ್‌ ವಾರ್ | ಓಲಾ ಷೇರು ಕುಸಿತ; ಭವಿಶ್ ದುರಹಂಕಾರದ ಫಲವೆಂದ ನೆಟ್ಟಿಗರು

“ಕಮ್ರಾ ಅರ್ಹತೆಗಳೇನು? ಜೀವನದಲ್ಲಿ ಏನನ್ನೂ ಸಾಧಿಸಲಾಗದ ಇವರು ಯಾರು? ಹಾಸ್ಯವನ್ನು ದುರುಪಯೋಗ ಮಾಡುವುದು, ನಮ್ಮ ಧಾರ್ಮಿಕ ಗ್ರಂಥಗಳನ್ನು ಅಪಹಾಸ್ಯ ಮಾಡುವುದು, ನಮ್ಮ ತಾಯಂದಿರು ಮತ್ತು ಸಹೋದರಿಯರ ಬಗ್ಗೆ ತಮಾಷೆ ಮಾಡುವುದು- ಹೀಗೆ ಇವೆಲ್ಲ ಮಾಡಿ ತಮ್ಮನ್ನು ತಾವು ಪ್ರಭಾವಿ (influencers) ಎಂದು ಕರೆಸಿಕೊಳ್ಳುತ್ತಾರೆ. ಎರಡು ನಿಮಿಷಗಳ ಖ್ಯಾತಿಗಾಗಿ ಇದನ್ನು ಮಾಡುತ್ತಾರೆ. ನಮ್ಮ ಸಮಾಜ ಯಾವ ದಿಕ್ಕಿನಲ್ಲಿ ಸಾಗುತ್ತಿದೆ” ಎಂದು ಪ್ರಶ್ನಿಸಿದರು.

2020ರಲ್ಲಿ ಕಂಗನಾ ರಣಾವತ್ ಕಚೇರಿ ನೆಲಸಮ

2020ರ ಸೆಪ್ಟೆಂಬರ್‌ನಲ್ಲಿ ಮುಂಬೈನ ಪಾಲಿ ಹಿಲ್‌ನಲ್ಲಿರುವ ಕಂಗನಾ ಕಚೇರಿಯ ಒಂದು ಭಾಗವನ್ನು ಅತಿಕ್ರಮಣ ಕಾರಣದಿಂದಾಗಿ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಕೆಡವಿತ್ತು. ಆದರೆ ಕ್ರಮದ ಬಗ್ಗೆ ಪ್ರಶ್ನೆ ಹುಟ್ಟಿತ್ತು. ಆ ಸಂದರ್ಭದಲ್ಲಿ ಉದ್ಧವ್ ಠಾಕ್ರೆ ಸರ್ಕಾರ ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿತ್ತು.

ಈ ಬೆನ್ನಲ್ಲೇ ಕಂಗನಾ ರಣಾವತ್ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದ್ದರು. ಆ ವೇಳೆ ಕಂಗನಾ ಬಿಜೆಪಿ ಸದಸ್ಯರಾಗಿರಲಿಲ್ಲ. ಶಿವಸೇನೆಯೂ ಕೂಡಾ ವಿಭಜನೆಯಾಗಿರಲಿಲ್ಲ. ಆದರೆ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ವಿಚಾರದಲ್ಲಿ ಕಂಗನಾ ಮತ್ತು ಮಹಾರಾಷ್ಟ್ರ ಸರ್ಕಾರದ ನಡುವೆ ವಾಗ್ವಾದ ನಡೆಯುತ್ತಿತ್ತು. ನಟಿ ಈ ಧ್ವಂಸವನ್ನು ವಿರೋಧಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಹಾಗೆಯೇ ನ್ಯಾಯಾಲಯದಲ್ಲಿ ಅವರ ಪರವಾಗಿ ತೀರ್ಪು ಬಂದಿತ್ತು. ಈ ಕ್ರಮದ ಹಿಂದಿನ ಉದ್ದೇಶವನ್ನು ಹೈಕೋರ್ಟ್ ಪ್ರಶ್ನಿಸಿತ್ತು.

ಇದೀಗ ಕುನಾಲ್ ಕಾಮ್ರಾ ಮಹಾರಾಷ್ಟ್ರ ಉಪಮುಖ್ಯಮಂತ್ರಿಯನ್ನು ಟೀಕಿಸುತ್ತಿದ್ದಂತೆ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮುಂಬೈನ ಖಾರ್ ಪ್ರದೇಶದ ಯುನಿಕಾಂಟಿನೆಂಟಲ್ ಹೋಟೆಲ್‌ನಲ್ಲಿರುವ ದಿ ಹ್ಯಾಬಿಟ್ಯಾಟ್ ಸ್ಟುಡಿಯೋವನ್ನು ಧ್ವಂಸಗೊಳಿಸುತ್ತಿದೆ. ಕಟ್ಟಡ ಅತಿಕ್ರಮಣ ಪ್ರದೇಶದಲ್ಲಿದೆ ಎಂದು ಹೇಳಿದೆ. ಎರಡೂ ಪ್ರಕರಣದಲ್ಲಿಯೂ ನೇರವಾಗಿ ರಾಜಕೀಯ ಕಂಡುಬಂದಿದೆ. ಆದರೆ ಇದೀಗ ಬಿಜೆಪಿಯಲ್ಲಿರುವ ಕಂಗನಾ ಇಂದಿನ ಬಿಜೆಪಿ ಸರ್ಕಾರದ ಕ್ರಮ ಕಾನೂನುಬದ್ಧವಾಗಿದೆ ಎಂದು ಹೇಳಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...