ಸಚಿವ ಜಮೀರ್ ಅಹಮ್ಮದ್ ಹೇಳಿಕೆ ಪಕ್ಷಕ್ಕೆ ಹೊರೆಯಾಗಿದ್ದರೆ ಕ್ರಮ ಕೈಗೊಳ್ಳಬಹುದು: ಸಚಿವ ಪರಮೇಶ್ವರ್

Date:

ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿಕೆ ಪಕ್ಷಕ್ಕೆ ಹೊರೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೇ ಹೇಳಿದ್ದಾರೆ. ಅಧ್ಯಕ್ಷರು ಪಕ್ಷದ ಶಿಸ್ತುಪಾಲನಾ ಸಮಿತಿಗೆ ವರದಿ ಕೊಟ್ಟರೆ ಸಮಿತಿ ಅಧ್ಯಕ್ಷ ರಹೀಂ ಖಾನ್ ಕ್ರಮ ಕೈಗೊಳ್ಳಬಹುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

- Advertisement -

ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು “ನಾನು ಈ ಹಿಂದೆ ಪಕ್ಷದ ಶಿಸ್ತುಸಮಿತಿ ಸದಸ್ಯನಾಗಿದ್ದೆ. ಆಗ ಪಕ್ಷಕ್ಕೆ ಹಾನಿಯಾಗುವ ಹೇಳಿಕೆ ಕೊಡುವ ನಾಯಕರನ್ನು ಅವರು ಎಷ್ಟೇ ದೊಡ್ಡವರಿದ್ದರೂ ನೋಟಿಸ್ ಕೊಟ್ಟು ಕರೆಸುತ್ತಿದ್ದೆವು. ಅಗತ್ಯ ಬಿದ್ದರೆ ಅಮಾನತು ಸಹ ಮಾಡುತ್ತಿದ್ದೆವು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಿಎಂ ಬದಲಾವಣೆ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಚರ್ಚೆ ಆಗಿಲ್ಲ. ಹೀಗಿದ್ದರೂ ಬಿಜೆಪಿ ಹಾಗೂ ಜೆಡಿಎಸ್‌ನವರು​ ಈ ಬಗ್ಗೆ ಮಾತನಾಡುತ್ತಿದ್ದಾರೆ. ಸಿಎಂ ಅವರನ್ನು ಕಂಡರೆ ಬಿಜೆಪಿ ಅವರಿಗೆ ಹೊಟ್ಟೆ ಉರಿ” ಎಂದು ಹೇಳಿದರು.

ಬಿಜೆಪಿ ವಿರುದ್ಧದ ಶೇ 40 ಕಮಿಷನ್ ಆರೋಪಕ್ಕೆ ದಾಖಲೆ ಇಲ್ಲ ಎಂದು ಲೋಕಾಯುಕ್ತ ತನಿಖೆಯಲ್ಲಿ ಉಲ್ಲೇಖಿಸಿರುವ ಕುರಿತು ಪ್ರತಿಕ್ರಿಯಿಸಿ “ಲೋಕಾಯುಕ್ತ ಪೊಲೀಸರು ಯಾವ ಆಧಾರದ ಮೇಲೆ ಸಾಕ್ಷಿ ಇಲ್ಲ ಎಂದಿದ್ದಾರೆ ಎಂಬುದನ್ನು ನೋಡಬೇಕಿದೆ. ಅಗತ್ಯ ಬಿದ್ದರೆ ಮರು ತನಿಖೆಗೆ ಸಿದ್ಧರಿದ್ದೇವೆ’ ಎಂದರು.

“ಶಾಸಕರ ಖರೀದಿಗೆ ಈಗಲೂ ಬಿಜೆಪಿ ಯತ್ನಿಸುತ್ತಿದೆ. ಈ ವಿಚಾರವಾಗಿ ದಾಖಲೆ ಸಿಕ್ಕರೆ ಅದರ ಬಗ್ಗೆಯೂ ತನಿಖೆ ಮಾಡುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಣಿಪುರ – ಭಾರತವನ್ನು ದೇಶವಾಗಿ ಉಳಿಸಿಕೊಳ್ಳಲು ಶಾಂತಿ, ಸೋದರತೆ ಅಗತ್ಯವೆಂದು ಪ್ರಧಾನಿ ಅರಿತಿರುವರೇ?

40% ಕಮಿಷನ್ ಪ್ರಕರಣ

“ನಾವು ಕೆಂಪಣ್ಣ ಆಯೋಗ ಬರೆದ ಪತ್ರದ ಮೇಲೆ ಹೋರಾಟ ಮಾಡಿದ್ದೆವು. ನಮಗೆ ಅದೇ ದಾಖಲೆ. ಈಗ ಲೋಕಾಯುಕ್ತದವರು ಯಾವ ಆಧಾರದ ಮೇಲೆ ಸಾಕ್ಷಿ ಇಲ್ಲ ಎನ್ನುತ್ತಿದ್ದಾರೆ ಎಂಬುದನ್ನು ನೋಡಬೇಕಿದೆ. ಅಗತ್ಯಬಿದ್ದರೆ ಮರುತನಿಖೆಗೆ ಒಳಪಡಿಸಲು ನಾವು ಸಿದ್ಧ” ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಡ್ರಗ್ಸ್ ಹಾವಳಿ​​

ಬೆಂಗಳೂರಿನಲ್ಲಿ ಚಾಕಲೇಟ್​ ರೂಪದಲ್ಲಿ ಡ್ರಗ್ಸ್ ಸಿಗುತ್ತಿರುವ ಕುರಿತ ಪ್ರಶ್ನೆಗೆ, “ಡ್ರಗ್ಸ್ ವಿರುದ್ಧ ಕ್ರಮಕ್ಕೆ ಸರ್ಕಾರ ಸಮರ ಸಾರಿದೆ. ಎಲ್ಲೆಡೆ ಕಡಿವಾಣ ಹಾಕಲು ತೀರ್ಮಾನ ‌ಮಾಡಲಾಗಿದೆ. ಶಾಲಾ, ಕಾಲೇಜುಗಳ ಬಳಿ ಡ್ರಗ್ಸ್​ ಚಾಕಲೇಟ್​ ರೂಪದಲ್ಲಿ ಮಾರಾಟವಾಗುತ್ತಿವೆ ಎಂಬ ಮಾಹಿತಿ ಬಂದರೆ‌ ಕೂಡಲೇ ಮೆಡಿಕಲ್​ ಶಾಪ್​ಗಳ ಲೈಸನ್ಸ್ ರದ್ದು ಮಾಡಲು ಕ್ರಮ ವಹಿಸಲಾಗುವುದು. ಆನೇಕಲ್​ ಭಾಗದಲ್ಲಿ ಪೊಲೀಸರು ಹೆಚ್ಚು ದಾಳಿ ಮಾಡುತ್ತಿದ್ದಾರೆ. ಬೇರೆ ರಾಜ್ಯದಿಂದ ಡ್ರಗ್ಸ್ ಬರುತ್ತಿದ್ದುದನ್ನು ಪೊಲೀಸರು ಹಿಡಿದಿದ್ದಾರೆ. ಹೊರ ದೇಶದಿಂದ ಬಂದು ಡ್ರಗ್ಸ್ ಮಾರಾಟ ಮಾಡುವವರ ಮಾಹಿತಿಯನ್ನು ಹೈ ಕಮಿಷನ್​ ಹಾಗೂ ರಾಯಭಾರಿಗಳಿಗೆ ನೀಡಲಾಗಿದೆ. ಮಹಾರಾಷ್ಟ್ರದಲ್ಲಿ ಏರ್‌ಪೋರ್ಟ್ ಡ್ರಗ್ಸ್ ಮೂಲಕ ಸಿಕ್ಕಾಪಟ್ಟೆ ಬರುತ್ತಿದೆ. ವಿಶಾಖಪಟ್ಟಣದಲ್ಲಿ ಒಂದೂವರೆ ಸಾವಿರ ಕೆ.ಜಿ‌ ಡ್ರಗ್ಸ್​ ಹಿಡಿದಿದ್ದಾರೆ‌” ಎಂದು ಪರಮೇಶ್ವರ್ ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...