ಫೆಬ್ರುವರಿ ಅಂತ್ಯದ ವೇಳೆಗೆ ಬಂಡವಾಳ ವೆಚ್ಚ ಮಾಡಲು ಕ್ರಮ: ಮುಖ್ಯಮಂತ್ರಿ ಸೂಚನೆ

Date:

Advertisements
  • ಬಂಡವಾಳ ಮೇಲಣ ವೆಚ್ಚಕ್ಕಾಗಿ ಪ್ರಸಕ್ತ ಆಯವ್ಯಯದಲ್ಲಿ 54,374 ಕೋಟಿ ರೂ. ಹಂಚಿಕೆ
  • ಶೀಘ್ರವೇ ಕ್ರಿಯಾ ಯೋಜನೆ ಅನುಮೋದನೆ ಪಡೆದು ಕಾಮಗಾರಿ ಅನುಷ್ಠಾನಗೊಳಿಸಿ: ಸಿಎಂ

ಪ್ರಸಕ್ತ ಆಯವ್ಯಯದಲ್ಲಿ ಬಂಡವಾಳ ಮೇಲಣ ವೆಚ್ಚಕ್ಕಾಗಿ 54,374 ಕೋಟಿ ರೂ. ಹಂಚಿಕೆಯಾಗಿದ್ದು, ವಿವಿಧ ಇಲಾಖೆಗಳಿಗೆ ಹಂಚಿಕೆಯಾಗಿರುವ ಅನುದಾನವನ್ನು ಫೆಬ್ರುವರಿ ಒಳಗೆ ವೆಚ್ಚ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಸೋಮವಾರ ವಿವಿಧ ಇಲಾಖೆಗಳ ಬಂಡವಾಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಇಂದಿನ ಸಭೆಯಲ್ಲಿ ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಯೋಜನಾ ಇಲಾಖೆ (ಕಲ್ಯಾಣ ಕರ್ನಾಟಕ ಪ್ರದೇಶಾಭಿವೃಧಿ ಮಂಡಳಿ), ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಣ್ಣ ನೀರಾವರಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಕಳೆದ ವರ್ಷದ ಆಯವ್ಯಯದಲ್ಲಿ ಬಂಡವಾಳ ಮೇಲಣ ವೆಚ್ಚಕ್ಕೆ 46,955 ಕೋಟಿ ರೂ. ಹಂಚಿಕೆ ಮಾಡಲಾಗಿತ್ತು. ಪ್ರಸಕ್ತ ವರ್ಷದಲ್ಲಿ 54,374 ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, ಇದು ಸರ್ಕಾರದ ಆಸ್ತಿ ಸೃಜನೆಗೂ ಪೂರಕವಾಗಿರುವುದರಿಂದ ಈ ಅನುದಾನ ಸದ್ಬಳಕೆಯಾಗುವುದನ್ನು ಖಾತರಿಪಡಿಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

Advertisements

ಚುನಾವಣೆ ಹಾಗೂ ಆಯವ್ಯಯ ಅನುಮೋದನೆ ವಿಳಂಬವಾದ ಕಾರಣ ಒಟ್ಟಾರೆ ಪ್ರಗತಿಯಲ್ಲಿ ಹಿನ್ನಡೆಯಾಗಿದೆ. ಆದರೆ ಶೀಘ್ರವೇ ನಿಗದಿತ ಗುರಿಯಂತೆ ವೆಚ್ಚ ಮಾಡಬೇಕು. ಗ್ರಾಮೀಣ ರಸ್ತೆಗಳ ಯೋಜನೆಯಡಿ ಹೆಚ್ಚಿನ ಪ್ರಗತಿ ಸಾಧಿಸಲು ಸೂಚಿಸಿದ ಮುಖ್ಯಮಂತ್ರಿಗಳು, ಕೆ.ಕೆ.ಆರ್‌.ಡಿ.ಬಿ ಯಡಿ ಕಳೆದ ವರ್ಷದ 2,000 ಕೋಟಿ ರೂ. ಗಳಿಗೂ ಹೆಚ್ಚು ಅನುದಾನ ಲಭ್ಯವಿದ್ದು, ಪ್ರಸಕ್ತ ಸಾಲಿನಲ್ಲಿ 3,000 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಆದ್ದರಿಂದ ಶೀಘ್ರವೇ ಕ್ರಿಯಾ ಯೋಜನೆ ಅನುಮೋದನೆ ಪಡೆದು ಕಾಮಗಾರಿ ಅನುಷ್ಠಾನಗೊಳಿಸುವಂತೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರ ಘೋಷಣೆಯಲ್ಲ, ಪೀಡಿತರಿಗೆ ಪರಿಹಾರ ಮುಟ್ಟಿಸುವುದು ಮುಖ್ಯ

ಜಲ ಸಂಪನ್ಮೂಲ ಇಲಾಖೆಯಲ್ಲಿ 1 ಲಕ್ಷ ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ ಅನುಮೋದಿತ ಕಾಮಗಾರಿಗಳ ಪೈಕಿ ಸುಮಾರು 12,000 ಕೋಟಿ ಅಂದಾಜು ವೆಚ್ಚದ ಕಾಮಗಾರಿಗಳು ಪ್ರಾರಂಭವಾಗಿಲ್ಲ. ಇವುಗಳನ್ನು ಪರಿಶೀಲಿಸಿ, ಕೈಬಿಡುವ ಕುರಿತು ನೀರಾವರಿ ನಿಗಮಗಳ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಲು ಸೂಚಿಸಿದರು.

ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ 1400 ಕೋಟಿ ಲಭ್ಯವಿದೆ. ಅಗತ್ಯ ಔಷಧ ಮತ್ತು ಉಪಕರಣಗಳ ಖರೀದಿಗೆ ಬಳಕೆ ಮಾಡಿಕೊಳ್ಳಲು ಸೂಚಿಸಲಾಯಿತು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣದ ಮಾದರಿಯನ್ನು ಇಂಡಿಯನ್‌ ಪಬ್ಲಿಕ್‌ ಹೆಲ್ತ್‌ ಸ್ಟಾಂಡರ್ಡ್‌ ಗಳ ಅನ್ವಯ ನಿಗದಿ ಪಡಿಸುವ ಕುರಿತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ಆರೋಗ್ಯ ಇಲಾಖೆ ಸಭೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ಸಚಿವರಾದ ಸತೀಶ್‌ ಜಾರಕಿಹೊಳಿ, ದಿನೇಶ್‌ ಗುಂಡೂರಾವ್‌, ಎನ್ ಎಸ್ ಬೋಸರಾಜು, ಡಿ. ಸುಧಾಕರ್‌, ರಹೀಂ ಖಾನ್‌, ಬೈರತಿ ಸುರೇಶ್‌, ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆಯ ಉಪಾಧ್ಯಕ್ಷ ಪ್ರೊ. ರಾಜೀವ್‌ ಗೌಡ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಹಣಕಾಸು ಇಲಾಖೆ ಕಾರ್ಯದರ್ಶಿಗಳಾದ ಪಿ.ಸಿ. ಜಾಫರ್‌, ಡಾ. ಎಂ.ಟಿ. ರೇಜು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X