ಅಂಗನವಾಡಿಗಳಿಗೆ ಸ್ವಂತ ಕಟ್ಟಡಕ್ಕೆ ಕ್ರಮ; ಲಕ್ಷ್ಮೀ ಹೆಬ್ಬಾಳ್ಕರ್

Date:

Advertisements

ರಾಜ್ಯದಲ್ಲಿ ಸಾಧ್ಯವಾದಷ್ಟು ಕಡೆ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಗೆ ಮಾಹಿತಿ ನೀಡಿದರು.

ತಿಪಟೂರಿನ ಶಾಸಕ ಷಡಕ್ಷರಿ ಕೇಳಿದ ಪ್ರಶ್ನೆಗೆ ಸಚಿವರು ಬುಧವಾರ ಉತ್ತರಿಸಿದರು. “ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 376 ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿದ್ದು, 274 ಕೇಂದ್ರಗಳಿಗೆ ಸ್ವಂತಕಟ್ಟಡಗಳಿವೆ. 62 ಬಾಡಿಗೆ ಕಟ್ಟಡಗಳಲ್ಲಿವೆ. 22 ಶಾಲಾ ಆವರಣಗಳಲ್ಲಿ ನಡೆಯುತ್ತಿವೆ. 8 ಸಮುದಾಯಭವನಗಳಲ್ಲಿ ನಡೆಯುತ್ತಿವೆ. 3 ಪಂಚಾಯಿತಿ ಕಟ್ಟಡಗಳಲ್ಲಿ ನಡೆಯುತ್ತಿವೆ. 7 ಇತರ ಕಟ್ಟಡಗಳಲ್ಲಿ ನಡೆಯುತ್ತಿವೆ. ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಕಳೆದ 3 ವರ್ಷಗಳಲ್ಲಿ 364 ಲಕ್ಷ ರೂ. ಗಳನ್ನು ಒದಗಿಸಲಾಗಿದೆ” ಎಂದು ಸಚಿವರು ತಿಳಿಸಿದರು.

“ರಾಜ್ಯದಲ್ಲಿ 4 ಸಾವಿರ ಸರ್ಕಾರಿ ನಿವೇಶನಗಳಿಗೆ ಅಂಗನವಾಡಿ ಹೆಸರು ಹಾಕಿಸಲಾಗಿದೆ. ನಿವೇಶನ ಸಿಕ್ಕ ತಕ್ಷಣ ಅಗತ್ಯವಿರುವ ಎಲ್ಲ ಕಡೆ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗುವುದು. ಸಾರ್ವಜನಿಕ ಸೌಲಭ್ಯಗಳಿಗಾಗಿ ಮೀಸಲಿಟ್ಟಿರುವ ಸೈಟ್ ಗಳನ್ನು ಅಂಗನವಾಡಿ ಕಟ್ಟಡಕ್ಕೆ ಬಳಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸಚಿವರು ಭರವಸೆ ನೀಡಿದರು.

Advertisements

ಬಾಲ್ಯವಿವಾಹ ಬೇರು ಸಮೇತ ಕಿತ್ತು ಹಾಕಲು ಇಲಾಖೆ ಸನ್ನದ್ಧ

ಬಾಲ್ಯವಿವಾಹ ಪದ್ಧತಿಯನ್ನು ಬೇರು ಸಮೇತ ಕಿತ್ತು ಹಾಕಲು ನಮ್ಮ ಇಲಾಖೆ ಸನ್ನದ್ಧವಾಗಿದೆ. ಬಾಲ್ಯವಿವಾಹ ಪ್ರಕರಣವನ್ನು ಮುಚ್ಚಿಹಾಕಲು ಯಾರಿಂದಲೂ ಸಾಧ್ಯವಿಲ್ಲ. ಈಗ ಕಾನೂನು ಹಿಂದಿನಂತಿಲ್ಲ. ಅತ್ಯಂತ ಪ್ರಬಲವಾದ ಕಾನೂನು ರಾಜ್ಯದಲ್ಲಿ ಜಾರಿ ಇದೆ. ಯಾವುದಾದರೂ ನಿರ್ದಿಷ್ಟ ಪ್ರಕರಣದಲ್ಲಿ ಲೋಪ ಕಂಡುಬಂದಲ್ಲಿ ಗಮನಕ್ಕೆ ತಂದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿ, “ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿ ವಿವಿಧ ನಿಯಮಗಳ ಅಡಿಯಲ್ಲಿ ಕೆಲಸ ಮಾಡಲಾಗುತ್ತಿದೆ. ಅನುಷ್ಠಾನದಲ್ಲಿರುವ ಕೆಲ ಕುಂದುಕೊರತೆಗಳನ್ನು ಸರ್ಕಾರ ಗಮನಿಸಿದೆ. ಅವುಗಳನ್ನು ಪರಿಹರಿಸಿ ಮಕ್ಕಳ ಹಕ್ಕುಗಳನ್ನು ಸಂರಕ್ಷಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಶಿಕ್ಷಣ ಇಲಾಖೆ, ಪೊಲಿಸ್ ಇಲಾಖೆ, ಕಾರ್ಮಿಕ ಇಲಾಖೆ, ಮತ್ತಿತರ ಸಂಬಂಧಿಸಿದ ಇಲಾಖೆಗಳಲ್ಲದೇ ರಾಜ್ಯ ಅಪರಾಧ ಜಾಗೃತಿ ದಳ ಹಾಗೂ ಬಾಲ್ಯ ವಿವಾಹ ನಿಷೇಧ ಕೋಶ ಇತ್ಯಾದಿ ಪ್ರಾಧಿಕಾರಗಳು ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಇವುಗಳ ಮೇಲುಸ್ತುವಾರಿ ಹಾಗೂ ದಾಖಲಾಗುವ ನಿರ್ದಿಷ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುತ್ತದೆ ಎಂದು ಸಚಿವರು ಪೂರಕ ಪ್ರಶ್ನೆಗೆ ವಿವರಣೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X