ನೈತಿಕ ಪೊಲೀಸ್‌ಗಿರಿ ಕಡಿವಾಣಕ್ಕೆ ʼಆ್ಯಂಟಿ ಕಮ್ಯುನಲ್ ವಿಂಗ್ʼ ಸ್ಥಾಪನೆಗೆ ಮುಂದಾದ ಸರ್ಕಾರ

Date:

  • ಮಂಗಳೂರು ನೈತಿಕ ಪೊಲೀಸ್‌ಗಿರಿ ಖಂಡಿಸಿದ ಗೃಹ ಸಚಿವ ಜಿ ಪರಮೇಶ್ವರ್
  • ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿಗೆ ಸೂಚನೆ

ರಾಜ್ಯದಲ್ಲಿನ ‘ನೈತಿಕ ಪೊಲೀಸ್‌ಗಿರಿʼ ತಡೆಯಲು ʼಆ್ಯಂಟಿ ಕಮ್ಯುನಲ್ ವಿಂಗ್’ ಸ್ಥಾಪನೆ ಮಾಡಲಾಗುವುದೆಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದರು.

ಮಂಗಳೂರು ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಪಶ್ಚಿಮ ವಿಭಾಗ ಪೊಲೀಸ್‌ ಅಧಿಕಾರಿಗಳ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್‌ ಹೊಸ ಘಟಕ ಆರಂಭಿಸುವುದಾಗಿ ತಿಳಿಸಿದರು.

ಹೊಸ ವಿಭಾಗದಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ. ಕರಾವಳಿ ಭಾಗದಲ್ಲಿ ಶಾಂತಿ ಕಾಪಾಡುವುದರ ಜೊತೆಗೆ ಸಹಬಾಳ್ವೆ ನಡೆಸುವ ಒಳ್ಳೆಯ ಜನರ ಸ್ವಾಭಿಮಾನಕ್ಕೆ ಧಕ್ಕೆಯಾಗದ ಘಟನೆಗಳು ನಡೆಯದಂತೆ ಇವರು ನೋಡಿಕೊಳ್ಳಲಿದ್ದಾರೆ ಎಂದು ಪರಮೇಶ್ವರ್ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಭಾಗದ ಜನ ಒಳ್ಳೆಯವರು, ಕೆಲವರಿಂದಾಗಿ ಈ ಭಾಗದಲ್ಲಿ ಭಯದ ವಾತಾವರಣವಿದೆ ಎಂದು ಜನ ಮಾತನಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಮು ಸೌಹಾರ್ದತೆ ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಅನೈತಿಕ ಪೊಲೀಸ್ ಗಿರಿ : ಪಶ್ವಿಮ ವಲಯ ಪೊಲೀಸರೊಂದಿಗೆ ಗೃಹ ಸಚಿವರ ಸಭೆ

ನೈತಿಕ ಪೊಲೀಸ್‌ಗಿರಿಯ ಸಮಸ್ಯೆಗಳು ಸವಾಲುಗಳ ಬಗ್ಗೆ ವಿಚಾರಿಸಿದ್ದೇನೆ. ಈ ರೀತಿಯ ಘಟನೆ ವಿಚಾರಗಳು ನಮಗೆ ಹೊಸದೇನಲ್ಲ. ಮೂರನೇ ಭಾರಿ ನಾನು ಗೃಹ ಸಚಿವನಾಗಿದ್ದೇನೆ. ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್‌ಗಿರಿಯಿಂದಾಗಿ ರಾಜ್ಯಕ್ಕೆ ಕೆಟ್ಟ ಹೆಸರು ಬಂದಿದೆ. ಇದನ್ನು ತಡೆಯದಿದ್ರೆ ಇಲಾಖೆಗೆ ಕೆಟ್ಟ ಹೆಸರು ಬರಲಿದೆ. ಹೀಗಾಗಿ ಇದರ ವಿಚಾರದಲ್ಲಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದರ ಜೊತೆಗೆ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ ಗೃಹ ಸಚಿವರು, ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು ಎಂದು ಹೇಳಿದರು.

ಇದೇ ವೇಳೆ ಕರಾವಳಿಯ ಕೋಮುದ್ವೇಷಕ್ಕೆ ಬಲಿಯಾದ ದೀಪಕ್ ರಾವ್, ಫಾಜಿಲ್, ಜಲೀಲ್, ಮಸೂದ್ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ನೀಡಲಿದೆ. ಈ ಸಂಬಂಧ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಪರಮೇಶ್ವರ್ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜುಲೈ 5ರಂದು ಬಡ ಮಹಿಳೆಯರ ಖಾತೆಗೆ 8,500 ರೂ ಜಮೆ: ರಾಹುಲ್ ಗಾಂಧಿ

ಮಹಾಲಕ್ಷ್ಮೀ ಯೋಜನೆ ದೇಶದಲ್ಲಿರುವ ಬಡ ಮಹಿಳೆಯರ ಬ್ಯಾಂಕ್ ಖಾತೆಗೆ ಜುಲೈ 5ರಂದು...

ಗದಗ | ಮುಖ್ಯ ರಸ್ತೆ ದುರಸ್ಥಿ ಮಾಡುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ

ಗದಗ ಮುಖ್ಯ ರಸ್ತೆ ರೈಲ್ವೆ ಇಲಾಖೆಗೆ ಸಂಬಂಧಪಟ್ಟಿದ್ದು ಈ ರಸ್ತೆಯ ದುರಸ್ತಿ...

ಬೀದರ್‌ | ಬೆಂಕಿ ಅವಘಡ ; ಹೊತ್ತಿ ಉರಿದ ಜೆಸ್ಕಾಂ ಕಚೇರಿ

ಟ್ರಾನ್ಸ್‌ಫಾರ್ಮಾರ್‌ ರಿಪೇರಿ ಮಾಡುವ ವೇಳೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಧಗ ಧಗನೆ...

ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ: ಮುಖ್ಯ ಚುನಾವಣಾ ಆಯುಕ್ತ

ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್...