ಆನ್ ಲೈನ್ ಗೇಮಿಂಗ್ ಕಡಿವಾಣಕ್ಕೆ ಕ್ರಮ: ಸಚಿವ
ದಿನೇಶ್ ಗುಂಡೂರಾವ್

Date:

Advertisements
  • ಸರ್ಕಾರದಿಂದ ನ್ಯಾಷನಲ್ ಸೈಬರ್ ಕ್ರೈಂ ರಿಪೋರ್ಟಿಂಗ್ ಪೋರ್ಟಲ್‌ ಪ್ರಾರಂಭ
  • 1930 ಸಹಾಯವಾಣಿ ಸಂಖ್ಯೆ, ಸಾರ್ವಜನಿಕರು 24*7 ಮಾಹಿತಿ ಒದಗಿಸಬಹುದು

ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಯುವ ಸಮುದಾಯದವರು ಆನ್ ಲೈನ್ ಗೇಮ್ ಆಡುವ ಹವ್ಯಾಸಿಗಳಾಗಿದ್ದು, ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರ ಸೋಷಿಯಲ್ ಮೀಡಿಯಾ, ಮಾಧ್ಯಮಗಳು ಮತ್ತು ಪೊಲೀಸ್ ಇಲಾಖೆಯ ಮೂಲಕ ಸೈಬರ್ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಡಿವಾಣಕ್ಕೆ ಕ್ರಮ ವಹಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಆನ್ ಲೈನ್ ಗೇಮಿಂಗ್ ಆ್ಯಪ್ ಮೂಲಕ ಮಕ್ಕಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಇವುಗಳ ಬಗ್ಗೆ ತನಿಖೆ ಕೈಗೊಂಡು, ಇಂತಹ ಚಟುವಟಿಕೆಗಳನ್ನು ರದ್ದು ಪಡಿಸುವಂತೆ ಕೋರಿ ವಿಧಾನ‌ ಪರಿಷತ್ ಸದಸ್ಯರಾದ ಅರುಣ್ ಡಿ.ಎಸ್ ಸರ್ಕಾರದ ಗಮನ ಸೆಳೆದರು.

ಗೃಹ ಸಚಿವರ ಪರವಾಗಿ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಆನ್ ಲೈನ್ ಗೇಮ್ ಗಳಾದ ಡ್ರೀಮ್ 11. ಮೈ ಸರ್ಕಲ್ ಮುಂತಾದ ಆ್ಯಪ್ ಗಳಿಂದ ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಯುವ ಸಮುದಾಯದವರು ಆನ್ ಲೈನ್ ಗೇಮ್ ಆಡುವ ಹವ್ಯಾಸಿಗಳಾಗಿದ್ದು, ಇವರು ತಮ್ಮ ಉದ್ಯೋಗದ ಬಗ್ಗೆ ಹೆಚ್ಚು ಆಸಕ್ತಿಯನ್ನು ವಹಿಸದೇ, ದಕ್ಷತೆಯಿಂದ ಕಾರ್ಯ ನಿರ್ವಹಿಸದೇ, ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಆ ಮೂಲಕ ಆರ್ಥಿಕ ನಷ್ಟ ಹೊಂದಿ ಮಾನಸಿಕ ತೊಂದರೆಗೊಳಗಾಗುತ್ತಿದ್ದಾರೆ ಎಂದು ವಿವರಿಸಿದರು.

Advertisements

ಜೊತೆಗೆ, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಆನ್ ಲೈನ್ ಗೇಮ್ ಆಡುವ ಹವ್ಯಾಸಿಗಳಾಗಿದ್ದು ತಮ್ಮ ವಿದ್ಯಾರ್ಥಿ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಸರ್ಕಾರ ಸೋಷಿಯಲ್ ಮೀಡಿಯಾ, ಮಾಧ್ಯಮಗಳು ಮತ್ತು ಪೊಲೀಸ್ ಇಲಾಖೆಯ ಮೂಲಕ ಸೈಬರ್ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.

ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ‘ಸೈಬರ್ ಕ್ರೈಂ ಜಾಗೃತಿ ದಿವಸ’ ಆಚರಣೆ ಮಾಡುತ್ತಿದ್ದು, ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಸೈಬರ್ ಅಪರಾಧ ತಡೆಗಟ್ಟುವ ಕುರಿತು ಜಾಗೃತಿ ಕಾರ್ಯಾಗಾರಗಳನ್ನು ಏರ್ಪಡಿಸಿ ವಂಚನೆಗೆ ಒಳಗಾಗದಂತೆ ಸಲಹೆ ಸೂಚನೆಗಳನ್ನು ನೀಡಲಾಗುತ್ತಿದೆ ಎಂದರು.

ಸರ್ಕಾರದಿಂದ ನ್ಯಾಷನಲ್ ಸೈಬರ್ ಕ್ರೈಂ ರಿಪೋರ್ಟಿಂಗ್ ಪೋರ್ಟಲ್‌ ಪ್ರಾರಂಭಿಸಿದ್ದು, ಸಾರ್ವಜನಿಕರು ತಮಗೆ ವಂಚನೆಯಾದ ಬಗ್ಗೆ ಈ ಪೋರ್ಟಲ್ ಮುಖಾಂತರ ದೂರು ಸಲ್ಲಿಸಬಹುದಾಗಿದೆ. ಸರ್ಕಾರವು 1930 ಸಹಾಯವಾಣಿ ಸಂಖ್ಯೆಯನ್ನು ಪ್ರಾರಂಭಿಸಿದ್ದು, ಸಾರ್ವಜನಿಕರು 24*7 ಹಣ ವಂಚನೆಯಾದ ಬಗ್ಗೆ ತುರ್ತಾಗಿ ಮಾಹಿತಿಯನ್ನು ಒದಗಿಸಬಹುದಾಗಿದೆ. ಆನ್ ಲೈನ್ ಮೂಲಕ ಸಾಲ ನೀಡಿ ವಂಚನೆ ಮಾಡುವ ಆ್ಯಪ್ ಗಳ ಮೇಲೆ ನಿಗಾ ವಹಿಸಲು ಜಿಲ್ಲಾ ಮಟ್ಟದಲ್ಲಿ ಸಿಐಎನ್ ಪಿಎಸ್ ತೆರೆದಿದ್ದು ಇದಕ್ಕೆ ಇನ್ಸ್ ಪೆಕ್ಟರ್ ದರ್ಜೆ ಅಧಿಕಾರಿಯನ್ನು ನೇಮಿಸಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X