ಜೂನ್ 15ರ ಒಳಗೆ ಇಡೀ ಇಲಾಖೆಯ ಸುಧಾರಣೆಗೆ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

Date:

Advertisements
  • ಅಧಿಕಾರಿಗಳು, ನಿರ್ದೇಶಕರೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಚಿವ ಪ್ರಿಯಾಂಕ್‌ ಖರ್ಗೆ
  • ಸಾವಿರಕ್ಕೂ ಹೆಚ್ಚು ಕೋಟಿ ಬಾಕಿ ಹಣ ಬಿಡುಗಡೆಗೆ ಕೇಂದ್ರ ಸಚಿವರಿಗೆ ಪತ್ರ ಬರೆಯಲು ಸೂಚನೆ

ಜೂನ್ 15ರ ಒಳಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಸಮಗ್ರ ಸುಧಾರಣೆಯಾಗಬೇಕು ಎಂದು ನೂತನ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದ್ದಾರೆ.

ಸೋಮವಾರ ವಿಕಾಸ ಸೌಧದಲ್ಲಿ ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ನಿರ್ದೇಶಕರೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಹಲವು ನಿರ್ದೇಶನ ನೀಡಿದ್ದಾರೆ.

ವಿಶೇಷವಾಗಿ ಭ್ರಷ್ಟಾಚಾರದ ಕೇಂದ್ರಬಿಂದುವಾಗಿರುವ ಕೆಆರ್‌ಐಡಿಎಲ್‌ನ ಸ್ವರೂಪವನ್ನು ಬದಲಾಯಿಸಲು ಭ್ರಷ್ಟರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಕೆಆರ್‌ಐಡಿಎಲ್‌ ನಿರ್ವಹಿಸಬಹುದಾದ ಹಾಗೂ ವಹಿಸಿಕೊಳ್ಳಬಹುದಾದ ಕಾಮಗಾರಿಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳಲು ನಿರ್ದಿಷ್ಟ ಮಾರ್ಗಸೂಚಿಗಳ ಬಗ್ಗೆ ಸಚಿವರು ನಿರ್ದೇಶನ ನೀಡಿದ್ದಾರೆ.

Advertisements

ಭ್ರಷ್ಟ ಇಒ ಹಾಗೂ ಪಿಡಿಒಗಳ ವಿರುದ್ಧ ರಾಜ್ಯಾದ್ಯಂತ ದಾಖಲಾಗಿರುವ ಎಲ್ಲ ಪ್ರಕರಣಗಳ ತನಿಖಾ ವರದಿ ಪರಿಶೀಲಿಸಿ, ತನಿಖೆ ಪೂರ್ಣಗೊಂಡು ವರದಿ ನೀಡಲಾಗಿರುವ ಪ್ರಕರಣಗಳಲ್ಲಿ ನಿರ್ದಾಕ್ಷಿಣ್ಯವಾಗಿ ಎರಡು ದಿನದ ಒಳಗೆ ಅಮಾನತಿಗೆ ಸೂಚನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪನಿಶ್ಮೆಂಟ್‌ಗೆ ಆಸ್ಪದ ಕೊಡಬೇಡಿ, ಒಳ್ಳೆ ಕೆಲಸ ಮಾಡಿ: ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಎಚ್ಚರಿಕೆ

ಇಲಾಖೆಯ ಕಾರ್ಯನಿರ್ವಹಣೆ ಹಾಗೂ ಹಣಕಾಸಿನ ಖರ್ಚು, ಖರ್ಚಾಗಿರುವ ಹಣದ ಎಲ್ಲ ಕಾಮಗಾರಿಗಳ ಪ್ರಗತಿಯ ಸಂಪೂರ್ಣ ಮಾಹಿತಿ ಪಡೆದು ಕೇಂದ್ರ ಸರ್ಕಾರದ ಯೋಜನೆಗಳಿಗೆ ರಾಜ್ಯ ಸರ್ಕಾರದ ಹಣ ಖರ್ಚಾಗುತ್ತಿರುವ ಕುರಿತು ಮಾಹಿತಿ ಪಡೆದು, ಕೂಡಲೇ ಕೇಂದ್ರದಿಂದ ಬಾಕಿಯಿರುವ 1,000 ಕ್ಕೂ ಹೆಚ್ಚು ಕೋಟಿ ಹಣವನ್ನು ಶೀಘ್ರ ಬಿಡುಗಡೆಗೆ ಕೇಂದ್ರ ಸಚಿವರಿಗೆ ಪತ್ರ ಬರೆಯುವಂತೆ ನಿರ್ದೇಶನ ನೀಡಿದ್ದಾರೆ.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಪ್ರಧಾನ ಕಾರ್ಯದರ್ಶಿ ಐಎಎಸ್‌ ಅಧಿಕಾರಿ ಅತೀಖ್, ಪಂಚಾಯತ್ ರಾಜ್ ಪ್ರಧಾನ ಕಾರ್ಯದರ್ಶಿ ಐಎಎಸ್ ಅಧಿಕಾರಿ ಉಮಾ ಮಹದೇವನ್ ಸೇರಿದಂತೆ ಇತರ ಅಧಿಕಾರಿಗಳು ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

Download Eedina App Android / iOS

X