ಪುತ್ತೂರಿನಲ್ಲಿ ಕಟೀಲ್, ಸದಾನಂದಗೌಡಗೆ ಚಪ್ಪಲಿ ಹಾರ ಹಾಕಿದ ಕಾರ್ಯಕರ್ತರು

Date:

  • ಡಿವಿಎಸ್, ಕಟೀಲ್ ವಿರುದ್ಧ ಆಕ್ರೋಶ ಹೊರಹಾಕಿದ ಕಾರ್ಯಕರ್ತರು
  • ಪಕ್ಷದ ಹೀನಾಯ ಸೋಲಿನ ಕಾರಣಕ್ಕೆ ಪಕ್ಷದ ನಾಯಕರ ವಿರುದ್ದ ಸಿಡಿಮಿಡಿ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿ, ಮತ್ತದರ ನಾಯಕರ ವಿರುದ್ಧ ಹಿಂದುತ್ವದಾದಿ ಸಂಘಟನೆಗಳ ಕಾರ್ಯಕರ್ತರ ಪಡೆ ಆಕ್ರೋಶ ಹೊರಹಾಕಿದೆ.

ಅದರಲ್ಲೂ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದಗೌಡ ವಿರುದ್ಧ ಕಿಡಿಕಾರಿದ್ದಾರೆ.

ತಮ್ಮ ಸಿಟ್ಟನ್ನು ಬಹಿರಂಗವಾಗಿಯೇ ಹೊರಹಾಕಿರುವ ಕಾರ್ಯಕರ್ತರು, ಸೋತ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಬ್ಯಾನರ್ ಅಳವಡಿಸಿರುವ ಕಾರ್ಯಕರ್ತರು, ತವರು ಕ್ಷೇತ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂಗೆ ಸೋಲಿನ ಬಿಸಿ ತಟ್ಟುವಂತೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಚಿಕ್ಕಮಗಳೂರು | ಬಿಜೆಪಿಯಿಂದ ನನ್ನ ಹೊರ ಹಾಕಿದ ಸಿ.ಟಿ ರವಿಯೇ ಕ್ಷೇತ್ರ ಖಾಲಿ ಮಾಡ್ಬೇಕಾಯ್ತು: ಎಂಪಿಕೆ

ಬ್ಯಾನರ್ ಬರಹದಲ್ಲಿ “ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ. ನೊಂದ ಹಿಂದೂ ಕಾರ್ಯಕರ್ತರು” ಎಂದು ಬರೆಯಲಾಗಿದೆ.

ಈ ಬ್ಯಾನರ್‌ನ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಕುರಿತಂತೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶುಕ್ಲಾ ಜೊತೆ ಕರಣ್ ಥಾಪರ್ ಮಾತುಕತೆ: ಮಹಾನಾಯಕನ ಐಬು ಮತ್ತು ಅಂಧಭಕ್ತರ ಹೂಂಕಾರ

ಭಾರತ ದೇಶ ಕಳೆದ ಹತ್ತು ವರ್ಷಗಳಿಂದ ಅದೆಂಥ ಕರಾಳಕೂಪಕ್ಕೆ ಜಾರುತ್ತಿದೆ ಎಂಬುದರ...

ಇಲ್ಲಾ ಗೌಡ್ರೇ, ಇದು ನ್ಯಾಯ ಅಲ್ಲ, ಇನ್ನು ನಿಲ್ಲಿಸ್ಬಿಡಿ ಸಾಕು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮನವಿ

ಪ್ರಜ್ವಲ್‌ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು...

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...

ಚಿಕ್ಕಮಗಳೂರು | ಬಿಜೆಪಿ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯ; ಜೆ.ಪಿ ಹೆಗ್ಡೆಗೆ ಜನ ಬೆಂಬಲ

ಚಿಕ್ಕಮಗಳೂರು ಹಾಗೂ ಉಡುಪಿ ಲೋಕಾಸಭಾ ಕ್ಷೇತ್ರವಾಗಿದೆ. ಎಂಟು ವಿಧಾನಸಭಾ ಕ್ಷೇತ್ರ ಒಳಗೊಂಡ...