‘ಮೋದಾನಿ’ ಬಣ್ಣ ಬಯಲು ಮಾಡಿದ್ದಕ್ಕೆ ನಂಬಲಸಾಧ್ಯ ವೇಗದಲ್ಲಿ ಮೊಯಿತ್ರಾ ಉಚ್ಚಾಟನೆ: ನಟ ಕಿಶೋರ್ ಕಿಡಿ

Date:

ಪ್ರಶ್ನೆಗಾಗಿ ನಗದು ಆರೋಪ ಪ್ರಕರಣದಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾರನ್ನು ಲೋಕಸಭೆಯಿಂದ ಉಚ್ಚಾಟನೆಗೊಳಿಸಿದ ಬಳಿಕ ಕೇಂದ್ರ ಸರ್ಕಾರದ ಕಟು ಟೀಕಾಕಾರರಲ್ಲೊಬ್ಬರಾಗಿ ಗುರುತಿಸಿಕೊಂಡಿರುವ ಬಹುಭಾಷಾ ನಟ ಕಿಶೋರ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -

‘ನಾಚಿಕೆಯೇ ಇಲ್ಲದ ಸರ್ಕಾರವು ‘ಮೋದಾನಿ’ಯ ಜೋಡಿಯ ಬಣ್ಣ ಬಯಲು ಮಾಡಿದ್ದಕ್ಕೆ, ಆಧಾರವೇ ಇಲ್ಲದ ಆರೋಪದ ನೆಪದಲ್ಲಿ ಬಂಗಾಳದ ದಿಟ್ಟ ಮಹಿಳಾ ಸಂಸದೆ ಮಹುವಾ ಮೊಯಿತ್ರಾರನ್ನು ನಂಬಲಸಾಧ್ಯ ವೇಗದಲ್ಲಿ ಉಚ್ಚಾಟನೆ ಮಾಡಿದೆ’ ಎಂದು ಫೇಸ್‌ಬುಕ್‌ ಪೋಸ್ಟ್‌ನ ಮೂಲಕ ಹರಿಹಾಯ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಅಯೋಡಿನ್

ತಮ್ಮ ಸುದೀರ್ಘ ಪೋಸ್ಟ್‌ನಲ್ಲಿ ನಟ ಕಿಶೋರ್ ಕುಮಾರ್, ಉದ್ಯಮಿ ಅದಾನಿ ಪ್ರಕರಣ, ಹಿಂಡನ್‌ಬರ್ಗ್‌ ವರದಿ, ಲಖೀಂಪುರ್ ಖೇರಿ ಘಟನೆ, ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಪ್ರಕರಣ ಸೇರಿದಂತೆ ಮಹುವಾ ಮೊಯಿತ್ರಾ ಪ್ರಕರಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೌನದ ಬಗ್ಗೆ ಪ್ರಶ್ನಿಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಪೋಸ್ಟ್‌ನಲ್ಲಿ, “ನಾಚಿಕೆಗೆಟ್ಟ ವಿಶ್ವಗುರುವಿನ ನವ ಭಾರತಕ್ಕೆ ಸ್ವಾಗತ. ತಾನು ಮಾಡುತ್ತಿರುವ ಕುಕೃತ್ಯಗಳು ಜಗತ್ತಿಗೆ ಕಾಣುತ್ತಿರುವುದನ್ನು ತಿಳಿದೂ ಮುಂದುವರೆಸುವುದು ಭಂಡತನ, ನಾಚಿಕೆಗೇಡಿತನದ ಪರಾಕಾಷ್ಠೆ” ಎಂದು ಪ್ರಧಾನಿಯನ್ನು ಜರೆದಿದ್ದಾರೆ.

“ವಿಶ್ವದ ಅತಿ ದೊಡ್ಡ ಸ್ಕ್ಯಾಮ್‌ಗಾರ ಎಂದು ಆರೋಪ ಹೊತ್ತ, ನೀತಿ ಆಯೋಗದ ವರದಿಯ ಪ್ರಕಾರ ಯೋಗ್ಯತೆಯೇ ಇಲ್ಲದೇ ಇದ್ದರೂ ಬರೀ ವಿಶ್ವಗುರುವಿಗೆ ತನ್ನ ಏರೋಪ್ಲೇನು ಹತ್ತಿಸಿ, ದೇಶದ ಬಹುಪಾಲು ಆಸ್ತಿಯನ್ನು ತನ್ನದಾಗಿಸಿಕೊಂಡ ಅದಾನಿ ವಿರುದ್ಧ ಹಿಂಡನ್‌ಬರ್ಗ್ ಆರೋಪ ಮತ್ತು ಅದರ ಹಲವು ಸಾಕ್ಷಿಗಳು ಹೊರ ಬಂದು ವರ್ಷವೇ ಕಳೆದರೂ ಕಮಕ್ ಕಿಮಕ್ಕನ್ನದ, ರೈತರನ್ನು ಆತಂಕವಾದಿಗಳೆಂದು ಕರೆದು ಅವರ ಮೇಲೆ ಜೀಪು ಹತ್ತಿಸಲು ತನ್ನ ಮಗನಿಗೆ ಕುಮ್ಮಕ್ಕು ಕೊಟ್ಟ ಗೃಹರಾಜ್ಯ ಸಚಿವ ಅಜಯ್ ಮಿಶ್ರಾ ಟೇನಿ ಬಗ್ಗೆ ಎರಡು ವರ್ಷವಾದರೂ ಮಾತಾಡದೇ ಕೈಕಟ್ಟಿ ಕೂತ, ವಿಶ್ವದ ಪ್ರಸಿದ್ಧ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ಬ್ರಿಜ್ ಭೂಷಣನ ಕೂದಲೂ ಅಲ್ಲಾಡಿಸಲಾಗದ, ನಾಚಿಕೆಯೇ ಇಲ್ಲದ ಸರ್ಕಾರ ಇದು” ಎಂದು ಕಿಶೋರ್ ಕುಮಾರ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಮೋದಾನಿಯ ಜೋಡಿಯ ಬಣ್ಣ ಬಯಲು ಮಾಡಿದ್ದಕ್ಕೆ, ಆಧಾರವೇ ಇಲ್ಲದ ಆರೋಪದ ನೆಪದಲ್ಲಿ ಬಂಗಾಳದ ದಿಟ್ಟ ಮಹಿಳಾ ಸಂಸದೆ ಮಹುವಾ ಮೊಯಿತ್ರಾರನ್ನು ನಂಬಲಸಾಧ್ಯ ವೇಗದಲ್ಲಿ ಉಚ್ಚಾಟನೆ ಮಾಡಿಬಿಡುತ್ತದೆ. ಲಾಗಿನ್ ಐಡಿ ಪಾಸ್ವರ್ಡ್ ಸ್ನೇಹಿತನಿಗೆ ಕೊಟ್ಟದ್ದಕ್ಕೆ ಸಂಸತ್ತಿನಿಂದ ಉಚ್ಚಾಟನೆಯಾಗಬಹುದಾದರೆ, ದೇಶದ ಆಸ್ತಿಗಳನ್ನೆಲ್ಲ ಗೆಳೆಯನಿಗೆ ಕೊಟ್ಟ ವಿಶ್ವಗುರುವನ್ನೇನು ಮಾಡಬೇಕು?” ಎಂದು ಪ್ರಧಾನಿಯ ಕಾರ್ಯವೈಖರಿಯ ಬಗ್ಗೆ ಪ್ರಶ್ನಿಸಿದ್ದಾರೆ.

“ನೋಡಿ ಮೊಯಿತ್ರಾಜೀ ಕಲಿಯಿರಿ ನಮ್ಮ ವಿಶ್ವಗುರುವಿನಿಂದ. ಉಚ್ಚಾಟನೆಯಾಗದೆ ಗೆಳೆಯರಿಗೆ ಲಾಭ ಮಾಡಿಕೊಡುವುದು ಮತ್ತು ಗೆಳೆಯರಿಂದ ಲಾಭ ಪಡೆಯುವುದು ಹೇಗೆ ಎಂದು” ವ್ಯಂಗ್ಯದ ಧಾಟಿಯಲ್ಲಿ ಪ್ರಧಾನಿಯನ್ನು ಜರೆಯುವ ಮೂಲಕ ಟಿಎಂಸಿ ಸಂಸದೆ ಮೊಯಿತ್ರಾರಿಗೆ ಸಲಹೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ ಸಿಲುಕಿದ ಸತ್ಯಾನ್ವೇಷಣೆ!

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ...

ಲಡಾಖ್‌ನಲ್ಲಿ ಚುನಾವಣೆ ವಿರೋಧಿಸಿ ಪ್ರತಿಭಟನೆ; ಹೋರಾಟಗಾರ ಸೋನಮ್‌ ವಾಂಗ್‌ಚುಕ್‌ಗೆ ಗೃಹ ಬಂಧನ

ಪರಿಸರ ಹೋರಾಟಗಾರ ಸೋನಮ್‌ ವಾಂಗ್‌ಚುಕ್‌ ಅವರನ್ನು 60 ದಿನಗಳ ಕಾಲ ʻಗೃಹಬಂಧನʼದಲ್ಲಿ...

ನಕಲಿ ಕೋರ್ಟ್ ಆದೇಶದಡಿ 95 ವೆಬ್‌ಸೈಟ್ ನಿರ್ಬಂಧಿಸಿದ್ದ ಕೇಂದ್ರ ಸರ್ಕಾರ; ಮುಖಭಂಗದ ಬೆನ್ನಲ್ಲೇ ಅನ್‌ಬ್ಲಾಕ್‌ಗೆ ಆದೇಶ!

ನ್ಯಾಯಾಲಯಗಳ ನಕಲಿ ಆದೇಶಗಳನ್ನು ಆಧರಿಸಿ ಬರೋಬ್ಬರಿ 129 ಅಕ್ರಮ ಬೆಟ್ಟಿಂಗ್ ವೆಬ್‌ಸೈಟ್‌ಗಳನ್ನು...

7,300 ಕೋರ್ಟ್‌ಗಳ ಖಾಲಿ ಕುರ್ಚಿಗಳ ನಡುವೆ ನ್ಯಾಯಕ್ಕಾಗಿ ಕಾಯುತ್ತಿರುವ 5.8 ಕೋಟಿ ಪ್ರಕರಣಗಳು!

"ನ್ಯಾಯ ವಿಳಂಬವಾದರೆ ಅದು ನ್ಯಾಯ ನಿರಾಕರಣೆಗೆ ಸಮ" ಎಂಬ ಮಾತಿದೆ. ಆದರೆ...