ನಿಮ್ಮ ವಿಭಜನೆಯ ರಾಜಕೀಯ ಇಂದು ನಮ್ಮನ್ನು ಇಲ್ಲಿಗೆ ತಂದು ನಿಲ್ಲಿಸಿದೆ : ಪ್ರಧಾನಿಗೆ ಪರೋಕ್ಷ ಟಾಂಗ್ ಕೊಟ್ಟ ನಟ ಕಿಶೋರ್

Date:

  • ‘ಮಹಿಳೆಯರಲ್ಲಿ ಕ್ಷಮೆಯಾಚಿಸದಿದ್ದರೆ, ನಿಮ್ಮ 56 ಇಂಚಿನ ಬಡಾಯಿಗೆ ಧಿಕ್ಕಾರವಿರಲಿ’
  • ನಿಮ್ಮ ಘೋಷಣೆಗಳನ್ನು ನಿಲ್ಲಿಸಿ ಮೊದಲು ಕೆಲಸ ಮಾಡಿ ಎಂದ ಬಹುಭಾಷಾ ನಟ

‘ಕೇವಲ ಮತ ​​ಮತ್ತು ಅಧಿಕಾರಕ್ಕಾಗಿ ಜನರನ್ನು ವಿಭಜಿಸುವ ನಿಮ್ಮ ರಾಜಕೀಯ, ಇಂದು ನಮ್ಮನ್ನು ಇಲ್ಲಿಗೆ ತಂದು ನಿಲ್ಲಿಸಿದೆ ‘ ಹೀಗಂತ ಪ್ರಧಾನಿ ಮೋದಿಯವರಿಗೆ ಪರೋಕ್ಷ ಟಾಂಗ್ ನೀಡಿದ್ದು ಬಹುಭಾಷಾ ನಟ ಕಿಶೋರ್.

ಮಣಿಪುರದ ಕುಕಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ನಗ್ನವಾಗಿ ಮೆರವಣಿಗೆ ಮಾಡಿರುವ ಘಟನೆಯ ವಿಡಿಯೋ ಹೊರಬಂದ ಬಳಿಕ ಫೇಸ್‌ಬುಕ್‌ ಪೋಸ್ಟ್‌ ಹಂಚಿಕೊಂಡಿರುವ ನಟ ಕಿಶೋರ್, ದೇಶದಲ್ಲಾಗುತ್ತಿರುವ ಕೆಲ ಬೆಳವಣಿಗೆಗಳನ್ನು ಉಲ್ಲೇಖಿಸಿ, ಆಕ್ರೋಶ ಹೊರಹಾಕಿದ್ದಾರೆ.

‘ಕೇವಲ ಮತ ​​ಮತ್ತು ಅಧಿಕಾರಕ್ಕಾಗಿ ಜನರನ್ನು ವಿಭಜಿಸುವ ನಿಮ್ಮ ರಾಜಕೀಯ, ಇಂದು ನಮ್ಮನ್ನು ಇಲ್ಲಿಗೆ ತಂದು ನಿಲ್ಲಿಸಿದೆ . ನೀವು ಈಗಲಾದರೂ ನಿಮ್ಮ ಬಾಯಿ ತೆರೆದು ಈ ಮಹಿಳೆಯರಲ್ಲಿ ಕ್ಷಮೆಯಾಚಿಸದಿದ್ದರೆ, ನಿಮ್ಮ 56 ಇಂಚಿನ ಬಡಾಯಿಗೆ ಧಿಕ್ಕಾರವಿರಲಿ’ ಎಂದು ತೀಕ್ಷ್ಣವಾಗಿ ಹೇಳಿಕೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೆಲವು ಪ್ರಕರಣಗಳನ್ನು ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿರುವ ನಟ ಕಿಶೋರ್, ‘ಹೌದು, ನಿಮ್ಮಿಂದ ನಾವು ಏನನ್ನಾದರೂ ನಿರೀಕ್ಷಿಸಲು ಹೇಗೆ ಸಾಧ್ಯ? ಮಹಿಳಾ ಕುಸ್ತಿಪಟುಗಳ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳನ್ನು ಸದ್ದಿಲ್ಲದೆ ಬೆಂಬಲಿಸಿದವರು ನೀವೇ ಅಲ್ಲವೇ? ಬಿಲ್ಕಿಸ್ ಬಾನು ಪ್ರಕರಣದ ಆರೋಪಿಗಳನ್ನು ಸದ್ದಿಲ್ಲದೆ ಬಿಡುಗಡೆ ಮಾಡಿ ಸಂಭ್ರಮಿಸಿದವರು ನೀವೇ ಅಲ್ಲವೇ? ಹಾತ್ರಸ್ ನ ದಲಿತ ಹೆಣ್ಣುಮಕ್ಕಳ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯನ್ನು ಮುಚ್ಚಿ ಮುಗಿಸಿದವರು ನೀವೇ ಅಲ್ಲವೇ???? ” ಎಂದು ಪ್ರಶ್ನಿಸಿದ್ದಾರೆ.

”ನಿಮ್ಮ ಘೋಷಣೆಗಳನ್ನು ನಿಲ್ಲಿಸಿ ಮೊದಲು ಕೆಲಸ ಮಾಡಿ..ನಿಮ್ಮ ಬೇಟಿ ಬಚಾವೋ ನಾಟಕಕ್ಕೆ ಧಿಕ್ಕಾರವಿರಲಿ…. ” ಎಂದು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಶಕ್ತಿ’ ಯೋಜನೆಯಿಂದ ಧರ್ಮಸ್ಥಳಕ್ಕೆ ಭಕ್ತರ ಸಂಖ್ಯೆ ಹೆಚ್ಚಳ; ಸಿಎಂ, ಡಿಸಿಎಂ ಸಂತಸ

ಸರ್ಕಾರದ 'ಶಕ್ತಿ' ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ...

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ, ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ಸಚಿವ ಕೆ ಎನ್ ರಾಜಣ್ಣ

"ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ, ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ...

‘ಈ ದಿನʼ ಗ್ರೌಂಡ್‌ ರಿಪೋರ್ಟ್‌ 3 | ವಿಡಿಯೊ ಪ್ರಕರಣ; ಹಲವು ಮಹಿಳೆಯರ ರಾಜಕೀಯ ಮಹತ್ವಾಕಾಂಕ್ಷೆ ಮಣ್ಣುಪಾಲು

ಹಾಸನದ ಸಂಸದನ ಕಾಮಕಾಂಡ ಬಯಲಾಗುತ್ತಿದ್ದಂತೆ ಆ ಪಕ್ಷದ ಹಲವು ನಾಯಕಿಯರ ರಾಜಕೀಯ...

ರೈತರ ಪಾಲಿಗೆ ಸತ್ತು ಹೋದ ಕಾಂಗ್ರೆಸ್ ಸರ್ಕಾರ: ಎ ಎಸ್ ಪಾಟೀಲ ನಡಹಳ್ಳಿ ವಾಗ್ದಾಳಿ

ರಾಜ್ಯದ ಕಾಂಗ್ರೆಸ್ ಸರ್ಕಾರವು ರೈತರ ಪಾಲಿಗೆ ಸತ್ತು ಹೋಗಿದೆ. ಕೇಂದ್ರ ಸರಕಾರ...