ಪತ್ರಕರ್ತೆಯೊಂದಿಗೆ ಅನುಚಿತ ವರ್ತನೆ: ನಟ, ಬಿಜೆಪಿ ಮುಖಂಡ ಸುರೇಶ್‌ ಗೋಪಿ ವಿರುದ್ಧ ಎಫ್‌ಐಆರ್

Date:

ಕೇರಳದ ಪತ್ರಕರ್ತೆಯೋರ್ವರ ಜೊತೆ ಅನುಚಿತವಾಗಿ ವರ್ತಿಸಿದ ಘಟನೆಗೆ ಸಂಬಂಧಿಸಿ, ಪತ್ರಕರ್ತೆ ನೀಡಿದ ದೂರಿನ ಮೇರೆಗೆ ನಟ, ರಾಜಕಾರಣಿ, ಮಾಜಿ ಸಂಸದ ಸುರೇಶ್ ಗೋಪಿ ವಿರುದ್ಧ ಕೇರಳ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

‘ಮೀಡಿಯಾ ವನ್ ಚಾನೆಲ್‌’ನ ಮಹಿಳಾ ಪತ್ರಕರ್ತೆ ಶಿದಾ ಜಗತ್ ನೀಡಿದ ದೂರಿನ ಮೇರೆಗೆ ನಡಕ್ಕಾವು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಐಪಿಸಿ ಸೆಕ್ಷನ್ 354 (ಎ-1, 4) ಅಡಿಯಲ್ಲಿ ಮಹಿಳೆಯನ್ನು ದೈಹಿಕವಾಗಿ ಸಂಪರ್ಕಿಸುವ ಮೂಲಕ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಪ್ರಕರಣವನ್ನು ದಾಖಲಿಸಲಾಗಿದೆ. ದೂರುದಾರರ ಹೇಳಿಕೆಯನ್ನು ದಾಖಲಿಸಿಕೊಂಡ ನಂತರ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೋಯಿಕ್ಕೋಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವಾಗ ಪತ್ರಕರ್ತೆಯ ಭುಜಕ್ಕೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ ಘಟನೆ ಶುಕ್ರವಾರ ನಡೆದಿತ್ತು. ಪತ್ರಕರ್ತೆಯ ಹೆಗಲನ್ನು ಎರಡೆರಡು ಬಾರಿ ಅನುಚಿತವಾಗಿ ಮುಟ್ಟುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿತ್ತು.

ಆ ಬಳಿಕ ಪತ್ರಕರ್ತೆ ಶನಿವಾರ ಕೋಯಿಕ್ಕೋಡ್‌ ನಗರ ಪೊಲೀಸ್‌ ಆಯುಕ್ತರಿಗೆ ದೂರು ಸಲ್ಲಿಸಿದ್ದರು. ದೂರು ಸ್ವೀಕರಿಸಿದ ಕಮಿಷನರ್, ಮುಂದಿನ ಕ್ರಮಕ್ಕಾಗಿ ನಗರ ಸಹಾಯಕ ಆಯುಕ್ತರಿಗೆ ದೂರನ್ನು ರವಾನಿಸಿ, ಪುಕರಣ ದಾಖಲಿಸಲು ಸೂಚಿಸಿದ್ದಾರೆ.

ಇದೇ ಸಮಯದಲ್ಲಿ ಕೇರಳ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪಿ.ಸತಿದೇವಿ ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟದಿಂದ (ಕೆಯುಡಬ್ಲ್ಯು ಜೆ) ಕೂಡ ದೂರನ್ನು ಸ್ವೀಕರಿಸಿದ್ದು, ಪೊಲೀಸರಿಂದ ವರದಿ ಕೇಳಿದ್ದಾರೆ.

ವಿಡಿಯೋ ವೈರಲ್ ಆದ ನಂತರ ಘಟನೆ ವಿವಾದಕ್ಕೆ ತಿರುಗಿತ್ತು. ಈ ಹಿನ್ನೆಲೆಯಲ್ಲಿ ಸುರೇಶ್ ಗೋಪಿ ಶನಿವಾರ ಬೆಳಗ್ಗೆ ಫೇಸ್‌ಬುಕ್‌ ಪೋಸ್ಟ್ ಹಾಕಿ, ಕ್ಷಮೆಯಾಚಿಸಿದ್ದರು.

ಪತ್ರಕರ್ತೆಯನ್ನು ಮಗಳಂತೆ ನಡೆಸಿಕೊಂಡಿದ್ದು, ತಂದೆಯಂತೆ ಆಕೆಯಲ್ಲಿ ಕ್ಷಮೆ ಯಾಚಿಸುವುದಾಗಿ ಹೇಳಿದ್ದರು.

ಕ್ಷಮೆಯಾಚನೆ ಬಗ್ಗೆ ಪ್ರತಿಕ್ರಿಯಿಸಿದ್ದ ಪತ್ರಕರ್ತೆ, ‘ತಾನು ಮಾಡಿದ್ದು ತಪ್ಪು ಎಂಬ ಅರಿವು ಅವರಿಗಿರಬೇಕು. ಒಬ್ಬರ ದೇಹವನ್ನು ಅವರ ಅನುಮತಿ ಇಲ್ಲದೇ ಮುಟ್ಟು ತಪ್ಪು. ನನಗೆ ಅದು ಅನುಚಿತವಾಗಿ ವರ್ತಿಸಿದ ರೀತಿಯೇ ಅನಿಸಿತು. ನನಗೆ ಅವರ ನಡವಳಿಕೆ ಸರಿ ಇಲ್ಲ ಎಂದು ತೋರಿದ ಕಾರಣಕ್ಕಾಗಿಯೇ ನಾನು ಅವರ ಕೈಯನ್ನು ದೂರ ಸರಿಸಿದ್ದೆ. ಹಾಗಾಗಿ, ಈ ಘಟನೆಯ ಕೋಯಿಕ್ಕೋಡ್ ನಗರ ಪೊಲೀಸ್ ಕಮಿಷನರ್ ಅವರಿಗೆ ದೂರು ಸಲ್ಲಿಸುತ್ತೇನೆ’ ಎಂದು ತಿಳಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜುಲೈ ಮೂರನೇ ವಾರದಲ್ಲಿ ಕೇಂದ್ರ ಬಜೆಟ್ ಮಂಡನೆ ಸಾಧ್ಯತೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವಾಲಯದ ಜವಾಬ್ದಾರಿಯನ್ನು ಬುಧವಾರ...

ರೇಣುಕಸ್ವಾಮಿ ಕೊಲೆ | ಅಧಿಕಾರಿಗಳು ಪ್ರಾಮಾಣಿಕ ತನಿಖೆ ನಡೆಸಬೇಕು: ಬಸವರಾಜ ಬೊಮ್ಮಾಯಿ

ರೇಣುಕಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ...

ಉತ್ತರಾಖಂಡ| ಹೆಚ್ಚುತ್ತಿದೆ ಚಾರ್ ಧಾಮ್ ಯಾತ್ರಾರ್ಥಿಗಳ ಸಾವಿನ ಸಂಖ್ಯೆ; 116 ಮಂದಿ ಮೃತ್ಯು

ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರಿಕರ ಸಾವಿನ ಸಂಖ್ಯೆಯು ಹೆಚ್ಚಳವಾಗುತ್ತಿದ್ದು, ಬುಧವಾರ ಮತ್ತೆ...

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಯಾವುದೇ ಪುರಾವೆಯಿಲ್ಲ: ಧರ್ಮೇಂದ್ರ ಪ್ರಧಾನ್

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪಗಳನ್ನು ಅಲ್ಲಗಳೆದಿರುವ...