ಇದು ಸ್ಟೇಷನ್‌ ಮಾಸ್ಟರ್‌ ಮಾಡುವ ಕೆಲಸ; ಪ್ರಧಾನಿಯ ವಂದೇ ಭಾರತ್ ಉದ್ಘಾಟನೆ ಛೇಡಿಸಿದ ಪ್ರಕಾಶ್‌ ರೈ

Date:

ಪ್ರಧಾನಿ ಮೋದಿ ಹಾಗೂ ಕೇಂದ್ರದ ಬಿಜೆಪಿ ಕಾರ್ಯವೈಖರಿಯನ್ನು ಆಗಾಗ ತರಾಟೆಗೆ ತೆಗೆದುಕೊಳ್ಳುವ ನಟ ಪ್ರಕಾಶ್‌ ರೈ, ಇಂದು ದೇಶದ ವಿವಿಧೆಡೆ ವಂದೇ ಭಾರತ್ ರೈಲುಗಳ ಉದ್ಘಾಟನೆಯನ್ನು ಛೇಡಿಸಿದ್ದಾರೆ.

- Advertisement -

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅವರು, “ಒಬ್ಬ ಸ್ಟೇಷನ್‌ ಮಾಸ್ಟರ್‌ ಇದನ್ನು ಮಾಡಬಹುದು. ನಾವು ನಿಜವಾಗಿಯೂ ನಿಮ್ಮನ್ನು ಹೊತ್ತಿ ಉರಿಯುತ್ತಿರುವ ಮಣಿಪುರದಲ್ಲಿ ನೋಡಲು ಬಯಸುತ್ತೇನೆ” ಎಂದದ್ದಾರೆ,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪ್ರಕಾಶ್‌ ರೈ ಅವರ ಟ್ವೀಟ್‌ಗೆ ಸಾವಿರಕ್ಕೂ ಹೆಚ್ಚು ಮಂದಿ ಲೈಕ್‌ ಮಾಡಿ ಬೆಂಬಲ ವ್ಯಕ್ತಪಡಿಸಿದರೆ, ನಾನೂರಕ್ಕೂ ಹೆಚ್ಚು ಮಂದಿ ರೀಟ್ವೀಟ್‌ ಮಾಡಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಪ್ರಕಾಶ್ ರೈ ಮೋದಿ ಅಮೆರಿಕ ಭೇಟಿ ವಿರೋಧಿಸಿ ಸರಣಿ ಟ್ವೀಟ್ ಮೂಲಕ ಪ್ರತಿಭಟನೆ ವ್ಯಕ್ತಪಡಿಸಿದ್ದರು.

ಈ ಸುದ್ದಿ ಓದಿದ್ದೀರಾ? ಅರ್ಚಕ ವೃತ್ತಿ ಜಾತ್ಯತೀತ – ಯಾವುದೇ ಜಾತಿಯವರು ದೇವಸ್ಥಾನದ ಅರ್ಚಕರಾಗಬಹುದು: ಮದ್ರಾಸ್ ಹೈಕೋರ್ಟ್

ಬೆಂಗಳೂರು-ಧಾರವಾಡದ ‘ವಂದೇ ಭಾರತ್‌ ಎಕ್ಸ್‌ಪ್ರೆಸ್‌’ ರೈಲುಗೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಚಾಲನೆ ನೀಡಿದ್ದಾರೆ. ಇದೇ ವೇಳೆ ಭೋಪಾಲ್-ಇಂದೋರ್, ಭೋಪಾಲ್-ಜಬಲ್ಪುರ, ರಾಂಚಿ-ಪಾಟ್ನಾ ಮತ್ತು ಮಡಗಾಂವ್- ಮುಂಬಯಿ ಮಾರ್ಗದ ವಂದೇ ಭಾರತ್ ರೈಲುಗಳಿಗೆ ಪ್ರಧಾನಿಯವರಿಂದ ಚಾಲನೆ ದೊರೆಯಿತು.

ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು 490 ಕಿಲೋ ಮೀಟರ್‌ಗಳ ಹುಬ್ಬಳ್ಳಿ-ಧಾರವಾಡವನ್ನು 6 ಗಂಟೆ 13 ನಿಮಿಷದಲ್ಲಿ ತಲುಪಲಿದೆ. ಬೆಂಗಳೂರಿನಿಂದ ಬೆಳಗ್ಗೆ 5.45ಕ್ಕೆ ಹೊರಟು 11.58ಕ್ಕೆ ಧಾರವಾಡ ರೈಲು ನಿಲ್ದಾಣ ತಲುಪುತ್ತೆ. ಇದು ಗಂಟೆಗೆ ಸರಾಸರಿ 78.82 ಕಿಲೋ ಮೀಟರ್ ವೇಗದಲ್ಲಿ ಸಂಚಾರ ಮಾಡುತ್ತೆ.

ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಟಿಕೆಟ್ ದರ ಎಸಿ ಚೇರ್‌ಕಾರ್‌ ಕ್ಲಾಸ್‌ನಲ್ಲಿ ಒಂದು ಬಾರಿಯ ಪ್ರಯಾಣಕ್ಕೆ ಸುಮಾರು 1,205 ರೂಪಾಯಿ ಇದೆ. ಎಕ್ಸಿಕ್ಯೂಟಿವ್ ಚೇರ್‌ಕಾರ್‌ಗೆ ಊಟದ ವೆಚ್ಚ ಸೇರಿ 2,395 ರೂಪಾಯಿ ಇದೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ (ಮೆಜೆಸ್ಟಿಕ್ ರೈಲ್ವೆ ನಿಲ್ದಾಣ) ನಿಂದ ಯಶವಂತಪುರಕ್ಕೆ ಎಸಿ ಚೇರ್‌ಕಾರ್‌ 410 ರೂಪಾಯಿ, ಎಕ್ಸಿಕ್ಯೂಟಿವ್ ಚೇರ್‌ಕಾರ್‌ಗೆ 545 ರೂಪಾಯಿ ನಿಗದಿ ಪಡಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...