ಮೈಸೂರು ಸ್ಯಾಂಡಲ್ ಸೋಪ್‌ ಅನ್ನು ವಿಶ್ವಮಟ್ಟದ ಉತ್ಪನ್ನ ಮಾಡಲು ನಟಿ ತಮನ್ನಾ ನೇಮಕ: ಸಚಿವ ಎಂ ಬಿ ಪಾಟೀಲ್

Date:

Advertisements

ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಕರ್ನಾಟಕದ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪ್‌ನ ಅಧಿಕೃತ ರಾಯಭಾರಿಯನ್ನಾಗಿ 2 ವರ್ಷಗಳ ಅವಧಿಗೆ ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಇದಕ್ಕೆ ಕರವೇ ಸೇರಿದಂತೆ ಕನ್ನಡಪರ ಸಂಘಟನೆಗಳ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಎಂ ಬಿ ಪಾಟೀಲ್, “ಮೈಸೂರು ಸ್ಯಾಂಡಲ್ ಸೋಪ್‌ ಅನ್ನು ವಿಶ್ವಮಟ್ಟದ ಉತ್ಪನ್ನ ಮಾಡಲು ಈ ಕಾರ್ಯತಂತ್ರ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ ಲಿಮಿಟೆಡ್‌ ಸಂಸ್ಥೆಯು ಮೈಸೂರು ಸ್ಯಾಂಡಲ್ ಮತ್ತು ಇತರ ಉತ್ಪನ್ನಗಳಿಗೆ 2 ವರ್ಷಗಳ ಅವಧಿಗೆ ತಮನ್ನಾ ಭಾಟಿಯಾ ಅವರಿಗೆ 6.2 ಕೋಟಿ ರೂಪಾಯಿ ಸಂಭಾವನೆಗೆ ರಾಯಭಾರಿಯಾಗಿ ನೇಮಿಸಿದೆ. ಇದಕ್ಕೆ ಹಲವರು ಅಪಸ್ವರ ಎತ್ತಿರುವುದಕ್ಕೆ ಸಚಿವರು ಪ್ರತಿಕ್ರಿಯಿಸಿದ್ದಾರೆ.

ತಮನ್ನಾ ಭಾಟಿಯಾ ಅವರನ್ನು 6 ಕೋಟಿ ಮೊತ್ತ ನೀಡಿ ನೇಮಕ ಮಾಡುವುದಕ್ಕಿಂತ ಕನ್ನಡದ ನಟಿಯರಿಗೆ ಅವಕಾಶ ಕೊಡಬಹುದಿತ್ತಲ್ಲವೇ ಎಂದು ನೆಟ್ಟಿಗರೋರ್ವರು ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಎಂ ಬಿ ಪಾಟೀಲ್ ಅವರನ್ನು ಟ್ಯಾಗ್ ಮಾಡಿ ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿರುವ ಸಚಿವರು, “ಕೆಎಸ್‌ಡಿಎಲ್ ಕನ್ನಡ ಚಲನಚಿತ್ರೋದ್ಯಮದ ಬಗ್ಗೆ ಗೌರವವನ್ನು ಹೊಂದಿದೆ. ಕೆಲವು ಕನ್ನಡ ಚಲನಚಿತ್ರಗಳು ಬಾಲಿವುಡ್ ಚಲನಚಿತ್ರಗಳಿಗೂ ಸ್ಪರ್ಧೆಯನ್ನು ನೀಡುತ್ತಿವೆ. ಕರ್ನಾಟಕದಲ್ಲಿ ಮೈಸೂರು ಸ್ಯಾಂಡಲ್ ಈಗಾಗಲೇ ಉತ್ತಮ ಬ್ರ್ಯಾಂಡ್ ಅನ್ನು ಹೊಂದಿದೆ. ಇದನ್ನು ಬಲಪಡಿಸಲಾಗುವುದು. ಅದರ ಜೊತೆಗೆ ಮೈಸೂರು ಸ್ಯಾಂಡಲ್ ಸೋಪ್‌ ಅನ್ನು ವಿಶ್ವಮಟ್ಟದ ಉತ್ಪನ್ನ ಮಾಡಲು ಈ ಕಾರ್ಯತಂತ್ರ” ಎಂದು ತಿಳಿಸಿದ್ದಾರೆ.

Advertisements

ಕರ್ನಾಟಕದ ಹೆಮ್ಮೆಯ ಸಂಕೇತವಾಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್‌ಡಿಎಲ್) ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ನಟಿ ತಮನ್ನಾ ಭಾಟಿಯಾ ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ಇದರಲ್ಲಿ ಅವರ ವರ್ಚಸ್ಸು, ಡಿಜಿಟಲ್ ಫಾಲೋವರ್ಸ್‌ ಮತ್ತು ಯುವಜನರೊಂದಿಗೆ ಅವರ ಸಂಪರ್ಕ ಇವುಗಳನ್ನು ಮಾತ್ರ ಪರಿಗಣಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಕೆಎಸ್‌ಡಿಎಲ್ ಕಳೆದ ಸಾಲಿ‌ನಲ್ಲಿ 1,785 ಕೋಟಿ ರೂಪಾಯಿ ವಹಿವಾಟು ನಡೆಸಿದೆ. ಇದರಲ್ಲಿ ಕರ್ನಾಟಕದ ಪಾಲು ಶೇ. 18ರಷ್ಟಿದೆ. ಉಳಿದದ್ದು ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರದಿಂದ ಬಂದಿದೆ. ಸಂಸ್ಥೆಯ ವಹಿವಾಟನ್ನು 2028ರ ವೇಳೆಗೆ 5,000 ಕೋಟಿ ರೂಪಾಯಿಗೆ ಕೊಂಡೊಯ್ಯುವ ಗುರಿ ಇಟ್ಟುಕೊಂಡು ಈಗ ದಾಪುಗಾಲು ಹಾಕುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಮಾರುಕಟ್ಟೆ ತಂತ್ರವೇ ಮುಖ್ಯವಾಗುತ್ತದೆ. ಇದು ಮಾರುಕಟ್ಟೆ ಪರಿಣತರ ಸಮಿತಿಯ ತೀರ್ಮಾನವಾಗಿದೆ ಎಂದು ಅವರು ಹೇಳಿದ್ದಾರೆ.

ನಾವು ದೀಪಿಕಾ ಪಡುಕೋಣೆ, ರಶ್ಮಿಕಾ ಮಂದಣ್ಣ, ಪೂಜಾ ಹೆಗಡೆ, ಕಿಯಾರಾ ಅಡ್ವಾಣಿ ಅವರನ್ನೂ ಪರಿಗಣಿಸಿ‌ ನೋಡಿದೆವು. ಆದರೆ ತಮನ್ನಾ ಅವರು ಡಿಜಿಟಲ್ ಲೋಕದಲ್ಲಿ 2.8 ಕೋಟಿ ಫಾಲೋವರ್ಸ್ ಹೊಂದಿ, ಉಳಿದವರಿಗಿಂತ ಮುಂದಿದ್ದಾರೆ. ಜತೆಗೆ ಅವರು ಅಖಿಲ ಭಾರತ ಮಟ್ಟದ ವರ್ಚಸ್ಸು ಹೊಂದಿದ್ದಾರೆ. ಹೀಗಾಗಿ ಅವರನ್ನೇ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಳ್ಳಲಾಗಿದೆ. ಇದು ಕೆಎಸ್‌ಡಿಎಲ್ ಸಂಸ್ಥೆಗೆ ನಾವು ತರುತ್ತಿರುವ ಸಮಗ್ರ ಪರಿವರ್ತನೆಯಲ್ಲಿ ಕೇವಲ ಒಂದು ಅಂಶವಷ್ಟೆ ಎಂದು ಅವರು ವಿವರಿಸಿದ್ದಾರೆ.

ಕೆಎಸ್‌ಡಿಎಲ್‌ನ ಉದ್ಯೋಗಿಗಳು ಕನ್ನಡಿಗರೇ ಆಗಿದ್ದಾರೆ. ಬರುವ ಲಾಭಾಂಶದಲ್ಲಿ ಶೇಕಡಾ 30ರಷ್ಟನ್ನು ಸರಕಾರಕ್ಕೆ ಕೊಡಲಾಗುತ್ತಿದೆ. ಈಗ ಯೂರೋಪ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಮಾರುಕಟ್ಟೆ ವಿಸ್ತರಣೆ ಮಾಡಲಾಗುತ್ತಿದೆ. ಇವುಗಳ ಭಾಗವಾಗಿ 435 ವಿತರಕರನ್ನು ಹೊಸದಾಗಿ ನೇಮಿಸಿಕೊಳ್ಳಲಾಗಿದೆ. ಜತೆಗೆ ಇ-ಕಾಮರ್ಸ್ ಮೂಲಕ 500 ಕೋಟಿ ರೂಪಾಯಿ ವಹಿವಾಟು ನಡೆಸುವ ಮತ್ತು ರಫ್ತಿನಿಂದ 150 ಕೋಟಿ ರೂಪಾಯಿ ಗಳಿಸುವ ಗುರಿ ಹೊಂದಿದ್ದೇವೆ ಎಂದು ಪಾಟೀಲ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ₹6.20 ಕೋಟಿ ವೆಚ್ಚಕ್ಕೆ ನಟಿ ತಮನ್ನಾ ಮೈಸೂರು ಸ್ಯಾಂಡಲ್‌ ಸೋಪ್‌ಗೆ ‘ರಾಯಭಾರಿ’, ಕರವೇ ಆಕ್ಷೇಪ

‘ಇಷ್ಟಕ್ಕೂ ಒಂದು ಸರ್ಕಾರಿ ಸಂಸ್ಥೆ ಹೊಸ ಘಟಕವನ್ನು ವಿಜಯಪುರದಲ್ಲಿ ಆರಂಭಿಸುವ ಹಂತಕ್ಕೆ ಹೋಗುತ್ತಿದೆ ಎನ್ನುವುದೇ ಹೆಮ್ಮೆಯ ವಿಷಯ. ಹೀಗೆ ಮಾಡಿದ ನಂತರ ಅದನ್ನು ವಿಶ್ವಮಟ್ಟಕ್ಕೆ ತೆಗೆದುಕೊಂಡು‌ ಹೋಗಬೇಕಾಗಿದೆ. ಹಾಗೆಯೇ ಬ್ರ್ಯಾಂಡಿಂಗ್ ಹೆಚ್ಚಿಸಲು ಪ್ಯಾಕಿಂಗ್ ಬದಲಿಸುವ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಎಂ ಬಿ ಪಾಟೀಲ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X