ಸಕಾಲ ಯೋಜನೆ ಅಡಿ 120 ಸೇವೆಗಳ ಸೇರ್ಪಡೆ: ಸಚಿವ ಕೃಷ್ಣ ಬೈರೇಗೌಡ

Date:

ಸಕಾಲ ಯೋಜನೆಗೆ ಇಂದಿನಿಂದ ಹೊಸದಾಗಿ 120 ಸೇವೆಗಳನ್ನು ಸೇರ್ಪಡೆಗೊಳಿಸಲಾಗಿದೆ. ಈ ಮೂಲಕ ಸೇವೆಗಳ ಸಂಖ್ಯೆ 1202ಕ್ಕೆ ಏರಿಕೆಯಾಗಿದೆ. ಎಲ್ಲ ಸೇವೆಗಳನ್ನೂ ಡಿಜಿಟಲೀಕರಣಗೊಳಿಸಬೇಕು. ಏಕ ಗವಾಕ್ಷಿ ಸೇವಾ ಸಿಂಧು ಪೋರ್ಟಲ್‌ನೊಂದಿಗೆ ಸಂಯೋಜಿಸಿ, ಸೇವಾ ಸಿಂಧು ಪೋರ್ಟಲ್ ಮೂಲಕ ಲಭ್ಯವಾಗುವಂತೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಸೋಮವಾರ ವಿಕಾಸಸೌಧದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳ ಜೊತೆ ಅವರು ಸಭೆ ನಡೆಸಿದ್ದಾರೆ. “ಸಕಾಲ ಯೋಜನೆಯ ಅಡಿ 101 ಇಲಾಖೆಯ 1082 ಸೇವೆಗಳನ್ನು ಈಗಾಗಲೆ ಜನರಿಗೆ ಒದಗಿಸಲಾಗುತ್ತಿದೆ. ಇದೀಗ ಹೊಸ 120 ಹೊಸ ಸೇವೆಗಳನ್ನು ಸೇರಿಸಲಾಗಿದೆ. ಹೊಸ ಸೇವೆ ಸೇರಿದಂತೆ ಕೆಲವು ಸೇವೆಗಳು ಇನ್ನೂ ಪೇಪರ್ ಅಪ್ಲಿಕೇಶನ್ ಮೋಡ್‌ನಲ್ಲಿಯೇ ಇವೆ. ಅವುಗಳನ್ನು ಮುಂದಿನ 8 ಟಿಂಗಳೊಳಗೆ ಡಿಜಿಟಲೀಕರಣ ಮಾಡಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ದೇವರು-ಧರ್ಮದ ಹೆಸರಲ್ಲಿ ಮರುಳು ಮಾಡಿ ನಾವು ಅಧಿಕಾರ ನಡೆಸಲ್ಲ: ಸಿದ್ದರಾಮಯ್ಯ

“1202 ಸಕಾಲ ಸೇವೆಗಳ ಪೈಕಿ 922 ನಾಗರಿಕ ಹಾಗೂ 280 ಸಿಬ್ಬಂದಿ ಸೇವೆಗಳನ್ನು ನೀಡಲಾಗುತ್ತಿದೆ. ಇವುಗಳಲ್ಲಿ ಪ್ರಸ್ತುತ 802 ಸೇವೆಗಳನ್ನು ಮಾತ್ರ ಸೇವಾಸಿಂಧು ಮೂಲಕ ಒದಗಿಸಲಾಗುತ್ತಿದೆ. ಉಳಿದ 120 ಸೇವೆಗಳನ್ನು ಆನ್‍ಲೈನ್ ಮೂಲಕ ಒದಗಿಸಲಾಗಿಲ್ಲ. ಅವುಗಳು ಕೂಡ ಡಿಜಿಟಲೀಕರಣ ಆಗಬೇಕು” ಎಂದು ವಿವರಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

 

ಸಭೆಯಲ್ಲಿ ಕಂದಾಯ ಆಯುಕ್ತ ಸುನೀಲ್ ಕುಮಾರ್, ಸಕಾಲ ನಿರ್ದೇಶಕ ಉಜ್ವಲ್ ಕುಮಾರ್ ಘೋಷ್ ಹಾಗೂ ಸಕಾಲ ಉಪ ನಿರ್ದೇಶಕಿ ಪಲ್ಲವಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೆಲೆಬ್ರಿಟಿಗಳ ಸುದ್ದಿಗಳು, ಮಾಧ್ಯಮಗಳು ಮತ್ತು ಜನಸಾಮಾನ್ಯರು

ಜವಾಬ್ದಾರಿಯುತ ಮಾಧ್ಯಮಗಳು ಮತ್ತು ಪ್ರಜ್ಞಾವಂತ ಜನರು ಸಕ್ರಿಯವಾಗಿ ಜನರನ್ನು ನಿರಂತರವಾಗಿ ಎಚ್ಚರಿಸುತ್ತಾ...

ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತದೆ: ಎಎಪಿ

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ...

120 ತಾಲ್ಲೂಕುಗಳಲ್ಲಿ ಕ್ರೀಡಾಂಗಣಗಳಿಲ್ಲ; ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯಗೆ ಮಾಹಿತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ...

ಜುಲೈ12ರಂದು ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆ

ರಾಜ್ಯದಲ್ಲಿ ತೆರವಾಗಿರುವ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ12ರಂದು ಉಪ ಚುನಾವಣೆ ನಡೆಯಲಿದೆ.ಕೇಂದ್ರ...