ಅರಣ್ಯ ಭೂಮಿ ಪ್ರಕರಣ ಇತ್ಯರ್ಥಕ್ಕೆ ಹೆಚ್ಚುವರಿ ಎಸ್ಎಫ್ಓ ನಿಯೋಜನೆ: ಈಶ್ವರ ಖಂಡ್ರೆ

Date:

Advertisements

ಅರಣ್ಯ ಭೂಮಿಗೆ ಸಂಬಂಧಿಸಿದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಮತ್ತು ರೈತರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಹೆಚ್ಚುವರಿ ಫಾರೆಸ್ಟ್ ಸೆಟಲ್ಮೆಂಟ್ ಅಧಿಕಾರಿ(ಎಸ್‌ಎಫ್ಓ)ಗಳನ್ನು ನಿಯೋಜಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ದಾವಣಗೆರೆ ಮತ್ತು ಕೊಪ್ಪಳ ಅರಣ್ಯ ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, 25 -30 ವರ್ಷಗಳಿಂದ ಹಲವು ಪ್ರಕರಣ ಇತ್ಯರ್ಥ ಆಗದೆ ಉಳಿದಿದ್ದು, ಇದರಿಂದಾಗಿ ಬಡವರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ 3 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡವರಿಗೆ ತ್ವರಿತವಾಗಿ ನ್ಯಾಯಕೊಡಿಸುವಂತೆ ಮತ್ತು 1978ಕ್ಕೆ ಮುನ್ನ ಅರಣ್ಯದಲ್ಲಿದ್ದವರಿಗೆ ಹಕ್ಕು ಕೊಡಿಸಲು ಮುಂದಾಗಿದ್ದೇವೆ” ಎಂದರು.

ಹೊಸಪೇಟೆಯಲ್ಲಿ 5 ಕೋಟಿ ರೂ. ಕಾಮಗಾರಿ

Advertisements

ಕರ್ನಾಟಕ ಕೈಗಾರಿಕಾ ಪುನಶ್ಚೇತನ ನಿಗಮ (ಕೆ.ಎಂ.ಇ.ಆರ್.ಸಿ.) ಅಡಿಯಲ್ಲಿ ಹೊಸಪೇಟೆಯಲ್ಲಿ ಡಿ.31ರಂದು 5 ಕೋಟಿ ರೂ. ಮೌಲ್ಯದ ಅರಣ್ಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.

ದಾವಣಗೆರೆ ಅರಣ್ಯ ವಿಭಾಗಕ್ಕೆ ಪ್ರಸ್ತುತ ಭದ್ರಾವತಿ ವಲಯದಲ್ಲಿರುವ ಮಾವಿನಕಟ್ಟೆ ಮತ್ತು ಚೆನ್ನಗಿರಿ ಅರಣ್ಯ ವಲಯವನ್ನು ಸೇರಿಸಿ ಅರಣ್ಯ ವಿಭಾಗ ಪುನರ್ ವಿಂಗಡಣೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಲು ಹೇಳಿದರು.

“ಅರಣ್ಯ ಮತ್ತು ಸರ್ಕಾರಿ ಭೂಮಿ ಒತ್ತುವರಿ ತಡೆಯಲು ತೀರುವಳಿ ಭೂಮಿಯಲ್ಲಿ ಮರಗಳನ್ನು ಬೆಳೆಸಲು ಮತ್ತು ಆದ್ಯತೆಯ ಮೇಲೆ ಮೀಸಲು ಅರಣ್ಯ ಎಂದು ಘೋಷಿಸುವ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದ ಸಚಿವರು, ಪ್ರಸ್ತುತ ದಾವಣಗೆರೆ ವೃತ್ತದಲ್ಲಿರುವ 32 ಸಾವಿರ ಹೆಕ್ಟೇರ್ ಪರಿಭಾವಿತ ಅರಣ್ಯದಲ್ಲಿ ವಸತಿ ಪ್ರದೇಶ, ದೇವಸ್ಥಾನ, ಸ್ಮಶಾನಭೂಮಿ, ಅಂಗನವಾಡಿ, ಆಸ್ಪತ್ರೆ ಇತ್ಯಾದಿಗಳಿದ್ದರೆ, ಅವುಗಳನ್ನು ಕೈ ಬಿಡಲು ಮತ್ತು ಅದಕ್ಕೆ ಪರ್ಯಾಯವಾಗಿ ಭೂಮಿ ಗುರುತಿಸಿ ಸುಪ್ರೀಂಕೋರ್ಟ್‌ಗೆ ಐಎ ಸಲ್ಲಿಸಲು ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಲು ಕ್ರಮವಹಿಸುವಂತೆ” ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X