ಬಿಜೆಪಿ ಟಿಕೆಟ್ ಕೈತಪ್ಪುತ್ತಿದ್ದಂತೆ ಕಾಂಗ್ರೆಸ್ ಸೇರಲು ವರುಣ್ ಗಾಂಧಿಗೆ ಆಹ್ವಾನ

Date:

ಉತ್ತರ ಪ್ರದೇಶದ ಬಿಜೆಪಿ ಸಂಸದ ವರುಣ್ ಗಾಂಧಿ ಅವರಿಗೆ ಪಿಲಿಭಿತ್ ಕ್ಷೇತ್ರದಿಂದ ಟಿಕೆಟ್‌ ಕೊಡಲು ಬಿಜೆಪಿ ನಿರಾಕರಿಸಿದೆ. ಈ ಬೆನ್ನಲ್ಲೇ ಅವರನ್ನು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಕಾಂಗ್ರೆಸ್‌ಗೆ ಆಹ್ವಾನಿಸಿದ್ದಾರೆ. “ವರುಣ್ ಗಾಂಧಿ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾದರೆ ನಾವು ತುಂಬಾ ಸಂತೋಷಪಡುತ್ತೇವೆ” ಎಂದು ಹೇಳಿದ್ದಾರೆ.

“ವರುಣ್ ಗಾಂಧಿ ಉತ್ತಮ ವ್ಯಕ್ತಿತ್ವ ಹೊಂದಿರುವ ಪ್ರಬಲ ನಾಯಕ ಮತ್ತು ಗಾಂಧಿ ಕುಟುಂಬದೊಂದಿಗೆ ಸಂಬಂಧವನ್ನು ಹೊಂದಿದ್ದಾರೆ. ಆದ್ದರಿಂದಾಗಿ ಬಿಜೆಪಿಯು ವರುಣ್ ಗಾಂಧಿ ಅವರಿಗೆ ಲೋಕಸಭೆ ಚುನಾವಣೆ ಟಿಕೆಟ್ ನೀಡಿಲ್ಲ. ಅವರು ಕಾಂಗ್ರೆಸ್‌ಗೆ ಬರಬೇಕೆಂದು ನನಗೆ ಅನಿಸುತ್ತದೆ. ನಮಗೆ ಅದರಿಂದ ಸಂತೋಷವಾಗುತ್ತದೆ” ಎಂದು ಚೌಧರಿ ಹೇಳಿದರು.

ಇದನ್ನು ಓದಿದ್ದೀರಾ?  ಅಘೋಷಿತ ತುರ್ತು ಪರಿಸ್ಥಿತಿ: ಪ್ರಧಾನಿ ಮೋದಿಗೆ ಸೋಲು ಕಟ್ಟಿಟ್ಟ ಬುತ್ತಿ?  

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪಿಲಿಭಿತ್‌ ಲೋಕಸಭೆ ಕ್ಷೇತ್ರದಲ್ಲಿ ಎರಡು ಬಾರಿ ಗೆಲುವು ಸಾಧಿಸಿರುವ ವರುಣ್ ಗಾಂಧಿ ಅವರಿಗೆ ಈ ಬಾರಿ ಟಿಕೆಟ್ ಸಿಕ್ಕಿಲ್ಲ. ಅವರ ಬದಲಾಗಿ ಉತ್ತರ ಪ್ರದೇಶ ಸಚಿವ ಜಿತಿನ್ ಪ್ರಸಾದ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ವರುಣ್ ಗಾಂಧಿಯ ತಾಯಿ ಮೇನಕಾ ಗಾಂಧಿಗೆ ಸುಲ್ತಾನಪುರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನೀಡಲಾಗಿದೆ.

ಮನ್‌ಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಎರಡು ಬಾರಿ ಸಚಿವರಾಗಿದ್ದ ಜಿತಿನ್ ಪ್ರಸಾದ್, 2014 ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಅದಾದ ಬಳಿಕ ಎರಡು ವರ್ಷಗಳ ಹಿಂದೆ ಬಿಜೆಪಿ ಸೇರ್ಪಡೆಯಾಗಿದ್ದು, 2021ರಲ್ಲಿ ಉತ್ತರ ಪ್ರದೇಶದ ವಿಧಾನಸಭೆಗೆ ಆಯ್ಕೆಯಾಗಿದ್ದರು.

ವರುಣ್ ಗಾಂಧಿ ಬಿಜೆಪಿಯ ಸಂಸದರಾದರೂ ಕೂಡಾ ಮೋದಿ ಸರ್ಕಾರದ ವಿರುದ್ಧವೇ ಹಲವಾರು ಬಾರಿ ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ವರುಣ್ ಗಾಂಧಿಗೆ ಟಿಕೆಟ್ ತಪ್ಪುತ್ತಿದ್ದಂತೆ ಇತ್ತ ಅಖಿಲೇಶ್ ಯಾದವ್‌ರ ಸಮಾಜವಾದಿ ಪಕ್ಷವೂ ಕೂಡಾ ‘ವರುಣ್ ಗಾಂಧಿಗಾಗಿ ತಮ್ಮ ಪಕ್ಷದ ಬಾಗಿಲು ತೆರೆದಿದೆ’ ಎಂದು ಹೇಳಿದೆ.

ಸಂಜಯ್ ಗಾಂಧಿಯ ಪುತ್ರ ವರುಣ್ ಗಾಂಧಿ 2009ರಲ್ಲಿ ಮೊದಲ ಬಾರಿಗೆ ಲೋಕಸಭೆಯಲ್ಲಿ ಪಿಲಿಭಿತ್‌ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಕಂಡಿದ್ದಾರೆ. 2014ರಲ್ಲಿ ಸುಲ್ತಾನಪುರದಲ್ಲಿ ಸ್ಪರ್ಧಿಸಿ ಜಯಿಸಿದ್ದಾರೆ. ಆದರೆ ಈ ಬಾರಿ ಈ ಕ್ಷೇತ್ರದ ಟಿಕೆಟ್ ಅನ್ನು ವರುಣ್ ಗಾಂಧಿಯ ತಾಯಿ ಮೇನಕಾ ಅವರಿಗೆ ನೀಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂತ್ರಸ್ತೆ ಅಪಹರಣ ಪ್ರಕರಣ | ಮೇ 31ಕ್ಕೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ತೀರ್ಪು

ಕೆ ಆರ್‌ ನಗರ ಮಹಿಳೆ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ...

ದೆಹಲಿಯಲ್ಲಿ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ; ಭಾರತದ ಸಾರ್ವಕಾಲಿಕ ದಾಖಲೆ

ದೆಹಲಿಯಲ್ಲಿ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ದೇಶದಲ್ಲಿ ದಾಖಲಾದ...

‘ಯಾವುದು ಹಾಳಾಗಿಲ್ಲವೋ ಅದನ್ನು ಎಂದಿಗೂ ಸರಿಪಡಿಸಲು ಪ್ರಯತ್ನಿಸಬೇಡಿ’; ವಿದ್ಯಾರ್ಥಿನಿ ಪ್ರಾಚಿ ನಿಗಮ್

ಉತ್ತರಪ್ರದೇಶದ 10ನೇ ತರಗತಿಯ ಬೋರ್ಡ್‌ ಪರೀಕ್ಷೆಯಲ್ಲಿ 55 ಲಕ್ಷ ವಿದ್ಯಾರ್ಥಿಗಳಲ್ಲಿ ಪ್ರಾಚಿ...

ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ: ಅರವಿಂದ್ ಕೇಜ್ರಿವಾಲ್

ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ತಿಳಿಸಿದ್ದು,ಲೋಕಸಭೆ...