ಮಹಾರಾಷ್ಟ್ರ | ‘ವಂದೇ ಮಾತರಂ’ ವಿಚಾರವಾಗಿ ವಿಧಾನಸಭೆಯಲ್ಲಿ ತೀವ್ರ ಕಲಹ ; ಸದನ ಮುಂದೂಡಿಕೆ

Date:

Advertisements
  • ಮಹಾರಾಷ್ಟ್ರ ಸಂಭಾಜಿ ನಗರದಲ್ಲಿನ ಗಲಭೆ ವಿಚಾರದಲ್ಲಿ ಶಾಸಕ ಅಜ್ಮಿ ಹೇಳಿಕೆ
  • ವಂದೇ ಮಾತರಂ ಘೋಷಣೆ ಬಗೆಗಿನ ಹೇಳಿಕೆ ಬಗ್ಗೆ ಬಿಜೆಪಿ ನಾಯಕರ ವಿರೋಧ

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬುಧವಾರ (ಜುಲೈ 19) ಸಮಾಜವಾದಿ ಪಕ್ಷದ (ಎಸ್‌ಪಿ) ಶಾಸಕ ಅಬು ಅಜ್ಮಿ ‘ವಂದೇ ಮಾತರಂ’ ವಿಚಾರದಲ್ಲಿ ನೀಡಿದ ಹೇಳಿಕೆ ತೀವ್ರ ಗದ್ದಲಕ್ಕೆ ಕಾರಣವಾಗಿದ್ದು ಕಲಾಪ ಗುರುವಾರಕ್ಕೆ ಮುಂದೂಡಿಕೆಯಾಗಿದೆ.

ವಿಧಾನಸಭೆಯಲ್ಲಿ ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ‘ವಂದೇ ಮಾತರಂ’ ಘೋಷಣೆ ವಿಚಾರದಲ್ಲಿ ಎಸ್‌ಪಿ ಶಾಸಕ ಅಬು ಅಜ್ಮಿ ನೀಡಿದ ಹೇಳಿಕೆ ಬಗ್ಗೆ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಸದನದಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಹಿನ್ನೆಲೆ ಸ್ಪೀಕರ್‌ ಕಲಾಪವನ್ನು ಮುಂದೂಡಿದ್ದಾರೆ.

ಮಹಾರಾಷ್ಟ್ರ ಸಂಭಾಜಿನಗರ ಜಿಲ್ಲೆಯಲ್ಲಿ ನಡೆದ ಗಲಭೆಯ ವಿಚಾರವನ್ನು ಪ್ರಸ್ತಾಪಿಸಿದ ಎಸ್‌ಪಿ ಶಾಸಕ ಅಬು ಅಜ್ಮಿ, “’ವಂದೇ ಮಾತರಂ’ ಘೋಷಣೆ ಹೇಳುವುದು ನನಗೆ ಸ್ವೀಕಾರಾರ್ಹವಲ್ಲ. ನಾವು ಇದನ್ನು ಒಪ್ಪುವುದೂ ಇಲ್ಲ. ಭಾರತದಲ್ಲಿ ವಾಸಿಸಬೇಕಾದರೆ ವಂದೇ ಮಾತರಂ ಪಠಿಸಬೇಕು ಎಂದು ಕೆಲವರು ಹೇಳುತ್ತಾರೆ, ನಾವು ಅದನ್ನು ಮಾಡಲು ಸಾಧ್ಯವಿಲ್ಲ, ನಾವು ಒಬ್ಬ ದೇವರನ್ನು ಮಾತ್ರ ನಂಬುತ್ತೇವೆ” ಎಂದು ಹೇಳಿದರು.

Advertisements

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ಅಬು ಅಜ್ಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ವೇಳೆ ಸದನದಲ್ಲಿ ಗದ್ದಲ ಏರ್ಪಟ್ಟಿತ್ತು. ಸಭಾಧ್ಯಕ್ಷ ರಾಹುಲ್ ನಾರ್ವೇಕರ್ ಅವರು ಸದನದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಗುಜರಾತ್ | ಧಾರಾಕಾರ ಮಳೆ ; ರಸ್ತೆಗಳು ಜಲಾವೃತ, ವಾಹನಗಳು ಮುಳುಗಡೆ

“ಮಹಾರಾಷ್ಟ್ರ ಸಂಭಾಜಿ ಜಿಲ್ಲೆ ಗಲಭೆಯ ವಿಚಾರದಲ್ಲಿ ಅಜ್ಮಿ ಅವರ ಹೇಳಿಕೆಗಳು ವಿಷಯಕ್ಕೆ ಅಪ್ರಸ್ತುತವಾಗಿವೆ. ಅವರು ಚರ್ಚೆಗಾಗಿ ಪಟ್ಟಿ ಮಾಡಲಾದ ವಿಷಯದ ಮೇಲೆ ಕೇಂದ್ರೀಕರಿಸಬೇಕು” ಎಂದು ಸಭಾಧ್ಯಕ್ಷ ನಾರ್ವೇಕರ್ ಹೇಳಿದರು.

ಆದರೆ ಉಭಯ ಪಕ್ಷಗಳ ನಾಯಕರು ಪ್ರತಿಭಟನೆ ಮುಂದುವರಿಸಿದ ಕಾರಣ ಸಭಾಧ್ಯಕ್ಷರು ಸದನವನ್ನು ಮುಂದೂಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X