ಪ್ರವೇಶ ಪತ್ರ ಡೌನ್ಲೋಡ್ ಪ್ರಕ್ರಿಯೆ ಸ್ಥಗಿತ, ಸರ್ಕಾರದ ಹುಳುಕು ಬಯಲು: ಬಿ ವೈ ವಿಜಯೇಂದ್ರ ಟೀಕೆ

Date:

ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ಸೆ. 14 ಮತ್ತು 15ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸೆ. 5ರಂದೇ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಕೆಲವು ಅಭ್ಯರ್ಥಿಗಳ ಪರೀಕ್ಷಾ ಕೇಂದ್ರಗಳ ಹಂಚಿಕೆಯಲ್ಲಿಯೂ ವ್ಯತ್ಯಯ ಕಂಡುಬಂದಿದ್ದು, ತಾತ್ಕಾಲಿಕವಾಗಿ ಪ್ರವೇಶ ಪತ್ರದ ಡೌನ್ಲೋಡ್ ಪ್ರಕ್ರಿಯೆ ಸಹ ಸ್ಥಗಿತಗೊಳಿಸುವ ಮೂಲಕ ಕೆಪಿಎಸ್‌ಸಿ ಹಾಗೂ ಸರ್ಕಾರದ ಹುಳುಕು ಬಯಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟೀಕಿಸಿದ್ದಾರೆ.

- Advertisement -

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, “ಕೆಪಿಎಸ್‌ಸಿ ಪರೀಕ್ಷೆಯ ಗೊಂದಲಗಳ ನಡುವೆ ಹಠಕ್ಕೆ ಬಿದ್ದವರಂತೆ ಪರೀಕ್ಷೆ ನಡೆಸಿದ್ದ ರಾಜ್ಯ ಸರ್ಕಾರ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ನ್ಯೂನತೆ ಬಯಲಾದ ಬೆನ್ನಲ್ಲೇ ಮತ್ತೆ ಮರು ಪರೀಕ್ಷೆಗೆ ಆದೇಶ ಹೊರಡಿಸಿ ಸಾವಿರಾರು ಪರೀಕ್ಷಾರ್ಥಿಗಳ ಶಾಪಕ್ಕೆ ಗುರಿಯಾಗಿತ್ತು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಇದೀಗ ಅಂತದ್ದೇ ಮತ್ತೊಂದು ಎಡವಟ್ಟು ಮಾಡಲು ಸರ್ಕಾರ ಮುಂದಾಗಿದೆ. ಸೆಪ್ಟೆಂಬರ್ 22ರಂದು ಯುಪಿಎಸ್ಸಿ ಹಾಗೂ ಎಸ್‌.ಎಸ್.ಸಿ ಪರೀಕ್ಷೆಗಳ ದಿನಾಂಕ ನಿಗದಿಯಾಗಿದ್ದು, ಅದೇ ದಿನ ಪಿಎಸ್ಐ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಉದ್ಯೋಗಾಕಾಂಕ್ಷಿಗಳ ವಿರೋಧಿ ಧೋರಣೆ ಅಲ್ಲದೆ ಬೇರೇನೂ ಅಲ್ಲ” ಎಂದು ಆರೋಪಿಸಿದ್ದಾರೆ.

“ಉದ್ಯೋಗವನ್ನು ಅರಸಿ ಪರೀಕ್ಷೆಗಳನ್ನು ಬರೆಯುವ ಉದ್ಯೋಗಾಕಾಂಕ್ಷಿಗಳನ್ನು ಮತ್ತೊಮ್ಮೆ ಸಂಕಷ್ಟಕ್ಕೆ ದೂಡುವ ಮುನ್ನವೇ ರಾಜ್ಯದ ಸರ್ಕಾರ ಸೆಪ್ಟೆಂಬರ್ 22 ರಂದು ನಡೆಸಲು ನಿರ್ಧರಿಸಿರುವ ಪಿಎಸ್ಐ ಪರೀಕ್ಷೆ ಮುಂದೂಡಿಕೆ ಮಾಡಿ ಹಾಗೂ ಗ್ರೂಪ್ ಬಿ ಹುದ್ದೆಗಳ ಪರೀಕ್ಷೆಯ ಪ್ರವೇಶ ಪತ್ರ ಹಾಗೂ ಪರೀಕ್ಷಾ ಕೇಂದ್ರಗಳ ಗೊಂದಲ ನಿವಾರಿಸಿ ಪರೀಕ್ಷಾರ್ಥಿಗಳಿಗೆ ತೊಂದರೆಗಳಾಗದಂತೆ ಎಚ್ಚರ ವಹಿಸಿ” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...