100 ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಿಗೆ 100 ಎಂಜನಿಯರಿಂಗ್‌ ಕಾಲೇಜು ದತ್ತು: ಪ್ರಿಯಾಂಕ್‌ ಖರ್ಗೆ

Date:

Advertisements
  • ಉದ್ಯೋಗಗಳಿಗೆ ಸೂಕ್ತವಾಗಿ ಯುವ ಜನಾಂಗ ಸಜ್ಜುಗೊಳಿಸಲು ಚಿಂತನೆ
  • ಕೌಶಾಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಜೊತೆ ಸಭೆ

ರಾಜ್ಯದ 100 ವಿವಿಧ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳೊಂದಿಗೆ ವಿವಿಧ 100 ಎಂಜನಿಯರಿಂಗ್‌ ಕಾಲೇಜುಗಳನ್ನು ಜೋಡಿಸಿ ಕೌಶಲ್ಯ ಅಭಿವೃದ್ಧಿಯಲ್ಲಿ ತರಬೇತಿ ನೀಡುವ ಮೂಲಕ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಲ್ಲಿ ಬೇಡಿಕೆಯಿರುವ ಉದ್ಯೋಗಗಳಿಗೆ ಸೂಕ್ತವಾಗಿ ಯುವ ಜನಾಂಗವನ್ನು ಸಜ್ಜುಗೊಳಿಸಲು ಚಿಂತಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ವೈದ್ಯಕೀಯ ಶಿಕ್ಷಣ ಹಾಗೂ ಕೌಶಾಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಅವರೊಂದಿಗೆ ಶುಕ್ರವಾರ ನಡೆದ ಮಾಹಿತಿ ತಂತ್ರಜ್ಞಾನ ಕೌಶಲ್ಯ ಸಲಹಾ ಸಮಿತಿಯಲ್ಲಿ ಅವರು ಮಾತನಾಡಿದರು.

ಬೆಂಗಳೂರಿನಲ್ಲಿರುವ ಮಾಹಿತಿ ತಂತ್ರಜ್ಞಾನ ಕಂಪೆನಿಗಳಲ್ಲಿ ಲಭ್ಯವಿರುವ ವಿಫುಲ ಹುದ್ದೆಗಳಿಗೆ ಕೌಶಲ್ಯ ನಿಪುಣತೆಯಿರುವ ಅಭ್ಯರ್ಥಿಗಳ ಅವಶ್ಯಕತೆಯಿದೆ, ಅನಿಮೇಷನ್‌, ಗೇಮಿಂಗ್‌, ಕೃತಕ ಬುದ್ಧಿಮತ್ತೆ, ರೊಬೋಟ್ಸ್‌, ಆಟೋಮೆಷಿನ್‌, ದ್ರೋಣ್‌ ಮುಂತಾದ ಕ್ಷೇತ್ರಗಳಲ್ಲಿ ಈಗ ಉದ್ಯೋಗಾವಕಾಶಗಳು ಹೇರಳವಾಗಿದ್ದು ಅಂತಹ ಹುದ್ದೆಗಳಿಗೆ ಯುವಕ ಯುವತಿಯರನ್ನು ಕುಶಲಿಗಳನ್ನಾಗಿ ಸಿದ್ಧ ಮಾಡಲು ತರಬೇತಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿತೀಶ್ ಕುಮಾರ್ ಅಭದ್ರ ಭಾಷೆ ನಿಂದನೀಯ

ಸಭೆಯಲ್ಲಿ ಭಾಗಿಗಳಾಗಿದ್ದ ಪ್ರತಿಷ್ಠಿತ ಕಂಪೆನಿಗಳ ಉನ್ನತ ಅಧಿಕಾರಿಗಳು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಹುದ್ದೆಗಳ ಬೇಡಿಕೆಯಿದೆಯಾದರೂ, ಅಭ್ಯೃಥಿಗಳಲ್ಲಿ ಕೌಶಲ್ಯ ಪರಿಣತಿ ಇಲ್ಲದಿರುವುದರಿಂದ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲಾಗುತ್ತಿಲ್ಲ, ಸರ್ಕಾರದ ವತಿಯಿಂದ ತಾಂತ್ರಿಕ ವಿದ್ಯಾರ್ಹತೆ ಇರುವ ಯುವಕ, ಯುವತಿಯರಿಗೆ ವಿವಿಧ ಕೌಶಲ್ಯ ತರಬೇತಿ ನೀಡಿ ಸಜ್ಜುಗೊಳಿಸಿದಲ್ಲಿ ಐಟಿ ಕ್ಷೇತ್ರದಲ್ಲಿನ ಉದ್ಯೋಗಾವಕಾಶಗಳಿಗೆ ಪೂರಕವಾಗಲಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಕೌಶಲ್ಯ ಅಭಿವೃದ್ಧಿ ಮಂಡಳಿ ಪ್ರಾಧಿಕಾರದ ಅಧ್ಯಕ್ಷರಾದ ಸರಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ಏಕರೂಪ್‌ ಕೌರ್‌ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X