ಆರೋಗ್ಯ ಇಲಾಖೆ | 8 ವರ್ಷಗಳ ಬಳಿಕ ಕೌನ್ಸಲಿಂಗ್ ಮೂಲಕ ವರ್ಗಾವಣೆ ಜಾರಿಗೊಳಿಸಿದ ಸಚಿವ ಗುಂಡೂರಾವ್

Date:

  • ವರ್ಗಾವಣೆ ಕೌನ್ಸಲಿಂಗ್ ಸುತ್ತೋಲೆ ಪ್ರಕಟ
  • ಜುಲೈ ತಿಂಗಳ ಅಂತ್ಯದೊಳಗೆ ಕೌನ್ಸಲಿಂಗ್ ಪೂರ್ಣಗೊಳಿಸಲು ಸೂಚನೆ

ಆರೋಗ್ಯ ಇಲಾಖೆಯಲ್ಲಿ ಈ ಬಾರಿ ಕೌನ್ಸಲಿಂಗ್ ಮೂಲಕವೇ ವರ್ಗಾವಣೆ ನಡೆಯಲಿದೆ. 2016ರ ಬಳಿಕ ಆರೋಗ್ಯ ಇಲಾಖೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಕೌನ್ಸಲಿಂಗ್ ಮೂಲಕ ವರ್ಗಾವಣೆ ನಡೆಯಲಿದ್ದು, 8 ವರ್ಷಗಳಿಂದ ಕೌನ್ಸಲಿಂಗ್ ಎದುರು ನೋಡುತ್ತಿದ್ದ ಅರ್ಹ ವೈದ್ಯರು ಸಿಬ್ಬಂದಿಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉತ್ತಮ ಹೆಜ್ಜೆಯಿಟ್ಟಿದ್ದಾರೆ.

- Advertisement -

ಕಳೆದ ವರ್ಷ ಸರ್ಕಾರ ರಚನೆಯಾದ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿಗಳು ವರ್ಗಾವಣೆಗೆ ಬೇಡಿಕೆ ಇಟ್ಟಿದ್ದರು. ಸಾಮಾನ್ಯ ವರ್ಗವಾಣೆ ನಡೆಸಿದರೂ, ಎಲ್ಲರ ಬೇಡಿಕೆಗಳನ್ನ ಈಡೇರಿಸಲು ಸಾಧ್ಯವಾಗಿರಲಿಲ್ಲ. ಅಲ್ಲದೇ, ಸಾಕಷ್ಟು ವರ್ಗಾವಣೆತ ಒತ್ತಡ ಪರಿಸ್ಥಿತಿಗಳನ್ನ ಎದುರಿಸಬೇಕಾಗಿ ಬಂದಿತ್ತು. ಇದಕ್ಕೆ ಕಾರಣ 2016ರಿಂದ ಆರೋಗ್ಯ ಇಲಾಖೆಯಲ್ಲಿ ಸಮರ್ಪಕವಾದ ವರ್ಗಾವಣೆ ನಡೆದಿರಲಿಲ್ಲ. ಅಲ್ಲದೇ, ಸಾಮಾನ್ಯ ವರ್ಗಾವಣೆಯಲ್ಲಿ ಅರ್ಹರಿಗೆ ನ್ಯಾಯ ದೊರೆಯುವುದಿಲ್ಲ ಎಂಬುವುದನ್ನ ಮನಗಂಡ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈ ಬಾರಿ ಪೂರ್ಣ ಪ್ರಮಾಣದ ಕೌನ್ಸಲಿಂಗ್ ಮೂಲಕ ವರ್ಗಾವಣೆ ನಡೆಸುವಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಗ್ರೂಪ್ ‘ಎ’ಯಿಂದ ಹಿಡಿದು ಗ್ರೂಪ್ ‘ಡಿ’ಯಲ್ಲಿ ಬರುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳನ್ನ ಕೌನ್ಸಲಿಂಗ್ ಮೂಲಕವೇ ವರ್ಗಾವಣೆ ನಡೆಸಲು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಜುಲೈ 31ರೊಳಗೆ ಕೌನ್ಸಲಿಂಗ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

ಇಲಾಖೆಯಲ್ಲಿ ಗುರುತಿಸಿರುವ ತಜ್ಞ ಹುದ್ದೆಗಳಲ್ಲಿ ವೈದ್ಯರುಗಳು ತಜ್ಞತೆಗೆ ಅನುಗುಣವಾಗಿ ಕಾರ್ಯನಿರ್ವಹಿಸದೇ ಬೇರೆ ತಜ್ಞತೆ/ಇತರೆ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಜ್ಞ ವೈದ್ಯರ ಮಾಹಿತಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.

ಇದನ್ನು ಓದಿದ್ದೀರಾ? ಯುಎಸ್‌ನ ಪ್ರತಿ ಐವರು ವಲಸಿಗ ವೈದ್ಯರಲ್ಲಿ ಒಬ್ಬರು ಭಾರತೀಯರು!

ಮೂರು ವರ್ಷ ಸೇವಾವಧಿ ಪೂರೈಸಿರುವ ವೈದ್ಯರು, ನಾಲ್ಕು ವರ್ಷ ಪೂರೈಸಿರುವ ಗ್ರೂಪ್ ಬಿ ನೌಕರರು, 5 ವರ್ಷ ಪೂರೈಸಿದ ಗ್ರೂಪ್ ಸಿ ನೌಕರರು ಹಾಗೂ 7 ವರ್ಷ ಸೇವಾವಧಿ ಪೂರೈಸಿರುವ ಗ್ರೂಪ್ ಡಿ ನೌಕರರು ಜೂನ್ ತಿಂಗಳ ಅಂತ್ಯದೊಳಗೆ ಮಾಹಿತಿ ಸಲ್ಲಿಸುವಂತೆ ತಿಳಿಸಲಾಗಿದೆ. ಮೇಲ್ಕಾಣಿಸಿದ ಸೇವಾವಧಿ ಪೂರೈಸಿರುವ ವೈದ್ಯರು ಹಾಗೂ ಸಿಬ್ಬಂದಿಗಳ ಸ್ಥಾನಗಳಿಗೆ ಕೌನ್ಸಲಿಂಗ್ ಮೂಲಕ ವರ್ಗಾವಣೆ ನಡೆಸಲು ಅವಕಾಶ ಕಲ್ಪಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...