ಆಕಾಶ್ ಆನಂದ್ ವಜಾ | ಕಾಂಗ್ರೆಸ್‌ಗೆ ಸೇರಿ; ಬಿಎಸ್‌ಪಿ ಕಾರ್ಯಕರ್ತರಿಗೆ ಉದಿತ್ ರಾಜ್ ಆಹ್ವಾನ

Date:

ಬಿಎಸ್‌ಪಿಯ ಮುಖ್ಯಸ್ಥೆ ಮಾಯಾವತಿ ಅವರು ತನ್ನ ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್‌ಪಿಯ ಎಲ್ಲಾ ಸ್ಥಾನಗಳಿಂದ ತೆಗೆದುಹಾಕಿದ್ದಾರೆ. ಇದಾದ ಬಳಿಕ ಕಾಂಗ್ರೆಸ್ ನಾಯಕ ಉದಿತ್ ರಾಜ್, ಕಾಂಗ್ರೆಸ್‌ಗೆ ಸೇರುವಂತೆ ಬಿಎಸ್‌ಪಿ ಕಾರ್ಯಕರ್ತರಿಗೆ ಆಹ್ವಾನ ನೀಡಿದ್ದಾರೆ.

- Advertisement -

ಇತ್ತೀಚೆಗೆ “ಮಾಯಾವತಿ ಸಾಮಾಜಿಕ ಚಳವಳಿಯ ಕತ್ತು ಹಿಸುಕಿ ದಮನ ಮಾಡಿದ್ದಾರೆ. ಈಗ ಅವರ ಕತ್ತು ಹಿಸುಕುವ ಸಮಯ” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಉದಿತ್ ರಾಜ್, ಈಗ ಬಿಎಸ್‌ಪಿಯಲ್ಲಾದ ದಿಢೀರ್ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ಮತ್ತೆ ಮಾಯಾವತಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಸಾಮಾಜಿಕ ಚಳವಳಿಯ ದಮನ ಮಾಡಿದ ಮಾಯಾವತಿಯ ಕತ್ತು ಹಿಸುಕುವ ಸಮಯ ಬಂದಿದೆ: ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ

“ಮಾಯಾವತಿಯ ಕ್ರಮಗಳೇ ಬಿಎಸ್‌ಪಿಯನ್ನು ನಾಶ ಮಾಡುತ್ತದೆ. ಬಿಎಸ್‌ಪಿಯಲ್ಲಿ ದಲಿತರು ಅಥವಾ ಒಬಿಸಿಗಳಿಗಾಗಿ ಯಾವುದೇ ಯೋಜನೆಗಳು ಉಳಿದಿಲ್ಲ” ಎಂದು ಹೇಳಿದರು. ಹಾಗೆಯೇ ತನ್ನ ಈ ಹಿಂದಿನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

“ಬಹುಜನ ಆಂದೋಲನದ ಕತ್ತನ್ನು ಮಾಯಾವತಿ ಸೀಳುತ್ತಿರುವುದಾಗಿ ನಾನು ಫೆಬ್ರವರಿ 17ರಂದೇ ಹೇಳಿದ್ದೆ. ಸಮಾಜ ಇದನ್ನು ಅರ್ಥ ಮಾಡಿಕೊಳ್ಳಬೇಕು, ಮಾಯಾವತಿಯಿಂದ ದೂರ ಉಳಿಯಬೇಕು ಎಂಬುದೇ ನನ್ನ ಹೇಳಿಕೆಯ ಅರ್ಥವಾಗಿತ್ತು” ಎಂದು ಹೇಳಿಕೊಂಡಿದ್ದಾರೆ.

“ನಾನು ಮಾಯಾವತಿ ಬಗ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ನನ್ನ ಮೇಲೆ ಬೆದರಿಕೆ ಹಾಕಲಾಗಿದೆ. ನನ್ನ ಹತ್ಯೆ ಮಾಡಿದವರಿಗೆ ನಗದು ಬಹುಮಾನವನ್ನು ಕೂಡಾ ಘೋಷಿಸಲಾಗಿತ್ತು” ಎಂದು ದೂರಿದ್ದಾರೆ.

ಇದನ್ನು ಓದಿದ್ದೀರಾ? ಬಿಎಸ್‌ಪಿ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ಆಕಾಶ್ ಆನಂದ್ ವಜಾ

ಭಾನುವಾರ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ತನ್ನ ಸೋದರಳಿಯನನ್ನು ಎಲ್ಲಾ ಸ್ಥಾನಗಳಿಂದ ತೆಗೆದುಹಾಕುವ ನಿರ್ಧಾರವನ್ನು ದಿಢೀರ್ ಆಗಿ ಕೈಗೊಂಡಿದ್ದು, ಮಾಯಾವತಿ ನಿರ್ಧಾರವೀಗ ರಾಜಕೀಯ ಸಂಚಲನ ಮೂಡಿಸಿದೆ. ಈ ಹಿಂದೆ ಒಂದೆರಡು ಬಾರಿ ಆಕಾಶ್‌ಗೆ ರಾಜ್ಯ ನಾಯಕರ ಸ್ಥಾನ ನೀಡಲಾಗಿತ್ತು, ಹಾಗೆಯೇ ಹಿಂಪಡೆಯಲಾಗಿತ್ತು, ಮತ್ತೆ ಸ್ಥಾನ ನೀಡಲಾಗಿತ್ತು.

“ನಾನು ಸಾಯುವವರೆಗೂ ನಾನೇ ಮುಖ್ಯಸ್ಥೆ, ಉತ್ತಾರಾಧಿಕಾರಿ ಘೋಷಿಸಲ್ಲ” ಎಂಬ ಮಾಯಾವತಿ ಹೇಳಿಕೆಯು ಸದ್ಯ ಬಿಎಸ್‌ಪಿ ಮಾತ್ರವಲ್ಲ ಇತರೆ ರಾಜಕೀಯ ಪಕ್ಷಗಳಲ್ಲಿಯೂ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಕಾಂಗ್ರೆಸ್ ಅಸಮಾಧಾನಕ್ಕೆ ಒಳಗಾಗಿರುವ ಕಾಂಗ್ರೆಸ್ ನಾಯಕರುಗಳನ್ನು ತಮ್ಮೆಡೆ ಸೆಳೆಯುವ ಯತ್ನದಲ್ಲಿ ತೊಡಗಿದೆ. ಎಸ್‌ಪಿ ಮಾಯಾವತಿ ನಡೆಯನ್ನು “ವಿಚಿತ್ರ ನಿರ್ಧಾರ” ಎಂದು ಕರೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...