ಬಿಹಾರ ಚುನಾವಣೆ ಮುಗಿಯುತ್ತಿದ್ದಂತೆ ಕಾಂಗ್ರೆಸ್ ನಾಯಕ ಶಕೀಲ್ ಅಹ್ಮದ್ ರಾಜೀನಾಮೆ

Date:

ಬಿಹಾರ ವಿಧಾನಸಭೆ ಚುನಾವಣೆಯ ಅಂತಿಮ ಹಂತದ ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಮಾಜಿ ಕೇಂದ್ರ ಕೇಂದ್ರ ಸಚಿವ ಶಕೀಲ್ ಅಹ್ಮದ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡುವ ಘೋಷಣೆ ಮಾಡಿದ್ದಾರೆ.

- Advertisement -

ಅಹ್ಮದ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರ ಬರೆದಿದ್ದು, ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ತೊರೆಯುವುದಾಗಿ ಹೇಳಿದ್ದಾರೆ. “ನಾನು ರಾಜೀನಾಮೆ ನೀಡಲು ಮೊದಲೇ ನಿರ್ಧರಿಸಿದ್ದೆ. ಆದರೆ ಮತದಾನ ಮುಗಿದ ಬಳಿಕ ಘೋಷಿಸಿದ್ದೇನೆ. ನನ್ನ ಕಾರಣದಿಂದಾಗಿ ಪಕ್ಷ ಯಾವುದೇ ಮತಗಳನ್ನು ಕಳೆದುಕೊಳ್ಳಬಾರದು ಎಂಬ ನಿಟ್ಟಿನಲ್ಲಿ ಚುನಾವಣೆ ಮುಗಿಯುವರೆಗೂ ಕಾದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಬಿಹಾರ ಚುನಾವಣೆ | ನ.6ಕ್ಕೆ ಮೊದಲ ಹಂತದ ಮತದಾನ; ಕಣದಲ್ಲಿರುವ ಘಟಾನುಘಟಿಗಳು ಇವರು!

ಐದು ಬಾರಿ ಶಾಸಕ ಮತ್ತು ಸಂಸದರಾಗಿರುವ ಅಹ್ಮದ್, ಪಕ್ಷದ ಸಿದ್ಧಾಂತಕ್ಕೆ ಯಾವುದೇ ವಿರೋಧವಿಲ್ಲ. ವೈಯಕ್ತಿಕ ಭಿನ್ನಾಭಿಪ್ರಾಯದಿಂದಾಗಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ. “ನಾನು ರಾಜೀನಾಮೆ ನೀಡಿದ ಮಾತ್ರಕ್ಕೆ ಬೇರೆ ಪಕ್ಷ ಅಥವಾ ಗುಂಪಿಗೆ ಸೇರುತ್ತೇನೆ ಎಂದರ್ಥವಲ್ಲ. ಆ ರೀತಿಯ ಉದ್ದೇಶ ನಾನು ಹೊಂದಿಲ್ಲ. ಕಾಂಗ್ರೆಸ್ ನೀತಿ, ತತ್ವಗಳ ಮೇಲೆ ನನಗೆ ಅಚಲ ನಂಬಿಕೆಯಿದೆ. ಜೀವನದುದ್ದಕ್ಕೂ ಕಾಂಗ್ರೆಸ್ ಮೌಲ್ಯಗಳ ಹಿತೈಷಿ, ಬೆಂಬಲಿಗನಾಗಿರುತ್ತೇನೆ. ನನ್ನ ಕೊನೆಯ ಮತವೂ ಕಾಂಗ್ರೆಸ್‌ ಪರವಾಗಿಯೇ ಇರುತ್ತದೆ” ಎಂದು ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

ಹಾಗೆಯೇ ತಮ್ಮ ತಾತ ಅಹ್ಮದ್ ಗಫೂರ್ 1937ರಲ್ಲಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿರುವುದು, ಅವರ ತಂದೆ ಶಕುರ್ ಅಹ್ಮದ್ 1952 ಮತ್ತು 1977ರ ನಡುವೆ ಐದು ಅವಧಿಗೆ ಕಾಂಗ್ರೆಸ್ ಶಾಸಕರಾಗಿ ಸೇವೆ ಸಲ್ಲಿಸಿರುವ ತಮ್ಮ ಕುಟುಂಬದ ಇತಿಹಾಸವನ್ನೂ ನೆನೆಪಿಸಿಕೊಂಡಿದ್ದಾರೆ.

ಇನ್ನು ಈ ಹಿಂದೆ 2023ರ ಏಪ್ರಿಲ್ 16ರಂದು ಅಹ್ಮದ್ ಕಾಂಗ್ರೆಸ್‌ಗೆ ಪತ್ರ ಬರೆದಿದ್ದರು. ತಾವು ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ, ಕೆನಡಾದಲ್ಲಿ ವಾಸವಿರುವ ತಮ್ಮ ಪುತ್ರರಿಗೂ ರಾಜಕೀಯದಲ್ಲಿ ಯಾವುದೇ ಆಸಕ್ತಿಯಿಲ್ಲ ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...