ದ್ವೇಷ ಭಾಷಣ ವಿವಾದದ ಬೆನ್ನಲ್ಲೇ ‘ಡ್ಯಾಮೇಜ್ ಕಂಟ್ರೋಲ್‌’ಗೆ ಮುಂದಾದ ಪ್ರಧಾನಿ ಮೋದಿ!

Date:

ರಾಜಸ್ಥಾನದಲ್ಲಿ ನಿನ್ನೆ ಚುನಾವಣಾ ಭಾಷಣ ಮಾಡುತ್ತಾ, ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದಿದ್ದ ಪ್ರಧಾನಿ ನರೇಂದ್ರ ಮೋದಿ, ದೇಶಾದ್ಯಂತ ವಿವಾದಕ್ಕೆ ನಾಂದಿ ಹಾಡಿದ ಬೆನ್ನಲ್ಲೇ ಇಂದು ಯೂ ಟರ್ನ್‌ ಹೊಡೆದಿದ್ದಾರೆ.

ನಿನ್ನೆ(ಏ.21) ಮಾತನಾಡುತ್ತಾ, ‘ದೇಶದ ಸಂಪತ್ತನ್ನು ಒಟ್ಟುಗೂಡಿಸಿ, ಹೆಚ್ಚು ಮಕ್ಕಳಿರುವ ಮುಸ್ಲಿಮರಿಗೆ ನೀಡುವುದು ಕಾಂಗ್ರೆಸ್‌ನ ಪ್ರಣಾಳಿಕೆ’ ಎಂದು ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ಟೀಕಿಸುವ ಭರದಲ್ಲಿ ಪ್ರಧಾನಿ ಮೋದಿ ದ್ವೇಷ ಭಾಷಣಗೈದಿದ್ದರು.

ಇದು ವ್ಯಾಪಕ ವಿವಾದವಾಗುತ್ತಿದ್ದಂತೆಯೇ ಇಂದು ಯೂ ಟರ್ನ್‌ ಹೊಡೆದಿದ್ದು, ತಮ್ಮ ಇಂದಿನ ಭಾಷಣದಲ್ಲಿ ತ್ರಿವಳಿ ತಲಾಖ್, ಹಜ್ ಕೋಟಾಗಳನ್ನು ಪ್ರಸ್ತಾಪಿಸುತ್ತಾ ‘ಡ್ಯಾಮೇಜ್ ಕಂಟ್ರೋಲ್‌’ಗೆ ಮುಂದಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇಂದು ಉತ್ತರ ಪ್ರದೇಶದ ಅಲೀಘಡ್‌ನಲ್ಲಿ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಹಿಂದೆ, ಕಡಿಮೆ ಹಜ್ ಕೋಟಾದ ಕಾರಣ, ಸಾಕಷ್ಟು ಹೊಡೆದಾಟಗಳು ನಡೆಯುತ್ತಿದ್ದವು. ಲಂಚವು ಅಲ್ಲಿ ಸಾಮಾನ್ಯವಾಗಿತ್ತು ಮತ್ತು ಪ್ರಭಾವಿ ವ್ಯಕ್ತಿಗಳಿಗೆ ಮಾತ್ರ ಹಜ್‌ಗೆ ಹೋಗಲು ಅವಕಾಶವಿತ್ತು. ಆದರೆ, ಇಂದು ಭಾರತದಲ್ಲಿನ ಹಜ್ ಕೋಟಾವನ್ನು ಹೆಚ್ಚಿಸುವಂತೆ ನಾನು ಸೌದಿ ಅರೇಬಿಯಾದ ಯುವರಾಜನಿಗೆ ಮನವಿ ಮಾಡಿದ್ದೆ. ಅಲ್ಲದೇ, ವೀಸಾ ನಿಯಮಗಳನ್ನು ಕೂಡ ನಮ್ಮ ಸರ್ಕಾರವು ಮುಸ್ಲಿಮರಿಗೆ ಸುಲಭಗೊಳಿಸಿದೆ” ಎಂದು ಹೇಳಿದ್ದಾರೆ.

“ಈ ಹಿಂದೆ ನಮ್ಮ ಮುಸ್ಲಿಂ ತಾಯಂದಿರು ಮತ್ತು ಸಹೋದರಿಯರು ಹಜ್‌ಗೆ ಏಕಾಂಗಿಯಾಗಿ ಹೋಗಲು ಸಾಧ್ಯವಾಗುತ್ತಿರಲಿಲ್ಲ ಮತ್ತು ಮುಹ್ರಿಮ್(ಮೇಲುಸ್ತುವಾರಿ) ಇಲ್ಲದೆ ಹಜ್‌ಗೆ ಹೋಗಲು ಆಗುತ್ತಿರಲಿಲ್ಲ. ಈಗ ನಮ್ಮ ಸರ್ಕಾರವು ಮುಹ್ರಿಮ್ ಇಲ್ಲದೆಯೂ ಹಜ್‌ಗೆ ತೆರಳಲು ಅವಕಾಶ ಮಾಡಿಕೊಟ್ಟಿದೆ. ಆ ಮೂಲಕ ಹಲವು ಮುಸ್ಲಿಂ ತಾಯಂದಿರ ಹಜ್‌ಗೆ ತೆರಳುವ ಕನಸು ಈಡೇರಿದೆ” ಎಂದು ಮೋದಿ ತಮ್ಮ ಭಾಷಣದಲ್ಲಿ ನುಡಿದಿದ್ದಾರೆ.

“ಕಾಂಗ್ರೆಸ್ ಮತ್ತು ಎಸ್‌ಪಿಯಂತಹ ಪಕ್ಷಗಳು ಯಾವಾಗಲೂ ತುಷ್ಟೀಕರಣದ ರಾಜಕಾರಣ ಮಾಡುತ್ತಿವೆ. ಮುಸ್ಲಿಮರ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ಉನ್ನತಿಗಾಗಿ ಎಂದಿಗೂ ಏನನ್ನೂ ಮಾಡಿಲ್ಲ. ತ್ರಿವಳಿ ತಲಾಖ್‌ಗೆ ಬಲಿಯಾದ ಅನೇಕ ಹೆಣ್ಣುಮಕ್ಕಳ ಜೀವನವು ನಾಶವಾಯಿತು. ತ್ರಿವಳಿ ತಲಾಖ್‌ನಿಂದಾಗಿ ಮಗಳು, ಅವಳ ತಂದೆ, ಸಹೋದರ ಮತ್ತು ಕುಟುಂಬ ಎಲ್ಲರೂ ತೊಂದರೆಗೀಡಾಗುತ್ತಿದ್ದರು. ನಾನು ದೇಶದಲ್ಲಿ ತ್ರಿವಳಿ ತಲಾಖ್ ವಿರುದ್ಧ ಕಾನೂನು ಜಾರಿ ಮಾಡುವ ಮೂಲಕ ಮುಸ್ಲಿಂ ಹೆಣ್ಣು ಮಕ್ಕಳ ಜೀವನವನ್ನು ಭದ್ರಪಡಿಸಿದ್ದೇನೆ” ಎಂದು ಪ್ರಧಾನಿ ನರೇಂದ್ರ ಮೋದಿ, ತನ್ನ ಬೆನ್ನನ್ನು ತಾನೇ ತಟ್ಟಿಕೊಂಡಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶದಲ್ಲಿ ಅಪಘಾತ: 11 ಮಂದಿ ಸಾವು, 10 ಜನರಿಗೆ ಗಾಯ

ಉತ್ತರ ಪ್ರದೇಶ ಶಹಜಹಾನ್‌ಪುರದಲ್ಲಿ ಬಸ್‌ ಹಾಗೂ ಟ್ರಕ್ ನಡುವೆ  ಸಂಭವಿಸಿದ ಭೀಕರ...

ಬಾಂಗ್ಲಾದೇಶ ಸಂಸದನ ಹತ್ಯೆ ಪ್ರಕರಣ: ತನಿಖೆಗಾಗಿ ಢಾಕಾ ಪೊಲೀಸರ ತಂಡ ಕೋಲ್ಕತ್ತಾಗೆ ಭೇಟಿ

ಕೋಲ್ಕತ್ತಾದಲ್ಲಿ ಈ ವಾರದ ಆರಂಭದಲ್ಲಿ ನಡೆದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಮ್...

ಧ್ವನಿ ಬದಲಾಯಿಸುವ ಆ್ಯಪ್ ಬಳಸಿ 7 ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

30 ವರ್ಷದ ವ್ಯಕ್ತಿಯೊಬ್ಬ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಳಸಿ, ಶಿಕ್ಷಕಿಯಾಗಿ...

ಮೊದಲ ಬಾರಿಗೆ ಮತ ಚಲಾಯಿಸಿದ ಹಣಕಾಸು ಆಯೋಗದ ಮುಖ್ಯಸ್ಥ ಅರವಿಂದ್ ಪನಗಾರಿಯಾ

ಹದಿನಾರನೇ ಹಣಕಾಸು ಆಯೋಗದ ಅಧ್ಯಕ್ಷ, 71 ವರ್ಷ ವಯಸ್ಸಿನ ಅರವಿಂದ್ ಪನಗಾರಿಯಾ...