ಕಾಂಗ್ರೆಸ್ ನಂತರ, ಸಿಪಿಐಗೆ ಐಟಿ ಇಲಾಖೆ ನೋಟಿಸ್

Date:

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾಗೆ (ಸಿಪಿಐ) ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ. ಕಳೆದ ಕೆಲವು ವರ್ಷಗಳಿಂದ ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಹಳೆಯ ಪ್ಯಾನ್ ಕಾರ್ಡ್ ಬಳಸಲಾಗಿದೆ ಎಂದು 11 ಕೋಟಿ ರೂಪಾಯಿಗಳ ‘ಬಾಕಿ’ ಪಾವತಿಸುವಂತೆ ಐಟಿ ನೋಟಿಸ್‌ನಲ್ಲಿ ಕೇಳಿದೆ ಎಂದು ವರದಿಯಾಗಿದೆ.

ತೆರಿಗೆ ಅಧಿಕಾರಿಗಳ ನೋಟಿಸ್‌ಅನ್ನು ಪ್ರಶ್ನಿಸಲು ಸಿಪಿಐ ವಕೀಲರೊಂದಿಗೆ ಚರ್ಚೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

“ನಾವು ಕಾನೂನು ನೆರವು ಪಡೆಯುತ್ತಿದ್ದೇವೆ. ನಮ್ಮ ವಕೀಲರನ್ನು ಸಂಪರ್ಕಿಸುತ್ತಿದ್ದೇವೆ” ಎಂದು ಹಿರಿಯ ಸಿಪಿಐ ನಾಯಕರೊಬ್ಬರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶುಕ್ರವಾರ ಬೆಳಗ್ಗೆಯಷ್ಟೇ, ಹಿಂದಿನ ವರ್ಷಗಳಲ್ಲಿ ಸಲ್ಲಿಸಿದ ತೆರಿಗೆ ರಿಟರ್ನ್ಸ್‌ನಲ್ಲಿ ವ್ಯತ್ಯಾಸಗಳಿವೆ ಎಂಬ ಕಾರಣಕ್ಕೆ ಕಾಂಗ್ರೆಸ್‌ 1,823 ಕೋಟಿ ರೂ.ಗಿಂತ ಹೆಚ್ಚಿನ ಬಾಕಿ ಪಾವತಿಸಬೇಕೆಂದು ಐಟಿ ನೋಟಿಸ್‌ ನೀಡಿದೆ.

ಅಲ್ಲದೆ, ತೃಣಮೂಲ ಕಾಂಗ್ರೆಸ್ ನಾಯಕ ಸಾಕೇತ್ ಗೋಖಲೆ ಅವರು ಕೂಡ ಕಳೆದ 72 ಗಂಟೆಗಳಲ್ಲಿ 11 ಐಟಿ ನೋಟಿಸ್‌ಗಳನ್ನು ಸ್ವೀಕರಿಸಿದ್ದಾರೆ ಎಂದು ವರದಿಯಾಗಿದೆ.

ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪ್ರತಿಪಕ್ಷಗಳನ್ನು ‘ಕುಗ್ಗಿಸಲು’ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಚುನಾವಣೆ | ಇನ್ನುಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು...

14 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ಹೆಚ್ಚುವರಿ ಉಸ್ತುವಾರಿ ಸಚಿವರ ನೇಮಕ

ಕರ್ನಾಟಕದ ಎರಡನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ಹೆಚ್ಚುವರಿ...

ಬರ ಪರಿಹಾರ | ಮೋದಿ ಶ್ಲಾಘಿಸುವ ಭರದಲ್ಲಿ ಮಾನ ಕಳೆದುಕೊಳ್ಳುತ್ತಿರುವ ಬಿಜೆಪಿ ನಾಯಕರು!

ಕೇಂದ್ರದಿಂದ ಬರ ಪರಿಹಾರ ಘೋಷಣೆಯಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನುಅಭಿನಂದಿಸಿ ಬಿಜೆಪಿ ನಾಯಕರು...

ಬರ ಪರಿಹಾರ | ಕೇಳಿದ್ದು 18 ಸಾವಿರ ಕೋಟಿ – ಕೊಟ್ಟಿದ್ದು 3 ಸಾವಿರ ಕೋಟಿ; ಬಿಜೆಪಿ ವಿರುದ್ಧ ನೆಟ್ಟಿಗರ ಕಿಡಿ

ರಾಜ್ಯದಲ್ಲಿ ತೀವ್ರ ಬರ ಎದುರಾಗಿದ್ದರೂ, ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ...