ಪಶ್ಚಿಮ ಬಂಗಾಳ | ಪ್ರಧಾನಿ ಚುನಾವಣಾ ರ್‍ಯಾಲಿ ಬಳಿಕ ಟಿಎಂಸಿಯಿಂದ ಮೋದಿ ಹೇಳಿಕೆಗಳ ಫ್ಯಾಕ್ಟ್‌ಚೆಕ್!

Date:

Advertisements

ಪಶ್ಚಿಮ ಬಂಗಾಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರ್ಜರಿಯಾಗಿ ರ್‍ಯಾಲಿ ನಡೆಸಿ ಚುನಾವಣಾ ಪ್ರಚಾರ ಮಾಡಿದ ಕೆಲವೇ ಗಂಟೆಗಳಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರಧಾನಿಯ ಹೇಳಿಕೆಗಳನ್ನು ಪಟ್ಟಿ ಮಾಡಿ ಅದರ ಫ್ಯಾಕ್ಟ್‌ಚೆಕ್ ಮಾಡಿದೆ.

ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ, ಆಡಳಿತಾರೂಢ ಟಿಎಂಸಿ ಮತ್ತು ರಾಜ್ಯದಲ್ಲಿನ ಈ ಹಿಂದಿನ ಎಡರಂಗ ಸರ್ಕಾರವು ಅಭಿವೃದ್ಧಿಗೆ ಬ್ರೇಕ್ ಹಾಕಿದೆ. ಈ ಎರಡೂ ಪಕ್ಷಗಳು ತಮ್ಮ ಆಡಳಿತದಲ್ಲಿ ಬಂಗಾಳದ ಹಿರಿಮೆ, ಜಾಗತಿಕ ಇಮೇಜ್ ಮತ್ತು ಘನತೆಯನ್ನು ಹಾಳುಮಾಡಿದೆ ಎಂದು ಆರೋಪಿಸಿದ್ದರು.

ಕೋಲ್ಕತ್ತಾ ಹೈಕೋರ್ಟ್ ಇತ್ತೀಚೆಗೆ ರಾಜ್ಯದಲ್ಲಿ 25,000 ಕ್ಕೂ ಹೆಚ್ಚು ನೇಮಕಾತಿಗಳನ್ನು ರದ್ದುಗೊಳಿಸಿದೆ. ಇದರಿಂದಾಗಿ ಬೋಧಕ ಹುದ್ದೆಗಳ ನೇಮಕಾತಿಗಳಲ್ಲಿನ ಅಕ್ರಮ ನಡೆಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಪಕ್ಷವು ಮತ್ತೆ ಮುನ್ನೆಲೆಗೆ ಬಂದಿದೆ ಎಂದೂ ಪ್ರಧಾನಿ ದೂರಿದ್ದರು.

Advertisements

ಇದನ್ನು ಓದಿದ್ದೀರಾ?  ಕೋರ್ಟ್ ತೀರ್ಪುಗಳ ಮೇಲೆ ಬಿಜೆಪಿ ನಾಯಕರ ಪ್ರಭಾವ: ಮಮತಾ ಬ್ಯಾನರ್ಜಿ ಆಕ್ರೋಶ

“ಪಶ್ಚಿಮ ಬಂಗಾಳವು ದೇಶದ ಅಭಿವೃದ್ಧಿ ಮತ್ತು ಪ್ರಗತಿಯ ಎಂಜಿನ್ ಆಗಿದ್ದ ಸಮಯವಿತ್ತು. ಬಂಗಾಳ ಸಾಮಾಜಿಕ ಸುಧಾರಣೆಗಳು, ವೈಜ್ಞಾನಿಕ ಪ್ರಗತಿಗಳು, ಹಾಗೆಯೇ ತಾತ್ವಿಕ ಮತ್ತು ಆಧ್ಯಾತ್ಮಿಕ ಚಿಂತನೆ ಮತ್ತು ಜಾಗೃತಿಗೆ ದಾರಿ ತೋರಿತ್ತು” ಎಂದು ಪಿಎಂ ಬಹುಪಾಲು ಮುಸ್ಲಿಂ ಮತದಾರರಿರುವ ಮಾಲ್ಡಾ ಜಿಲ್ಲೆಯಲ್ಲಿ ಪ್ರಚಾರದ ವೇಳೆ ಹೇಳಿದ್ದರು.

“ಆದರೆ ಎಡರಂಗ ಮತ್ತು ಪ್ರಸ್ತುತ ಟಿಎಂಸಿ ಆಡಳಿತವು ಜಾಗತಿಕ ಮಟ್ಟದಲ್ಲಿ ಬಂಗಾಳದ ಹಿರಿಮೆಯನ್ನು ಕಸಿದುಕೊಂಡಿದೆ. ಪ್ರಪಂಚದ ದೃಷ್ಟಿಯಲ್ಲಿ ಅದರ ಘನತೆ ಮತ್ತು ಪ್ರತಿಷ್ಠೆಯನ್ನು ಕಡಿಮೆ ಮಾಡಿದೆ. ಟಿಎಂಸಿ ಆಡಳಿತದಲ್ಲಿ ಬಂಗಾಳದಲ್ಲಿ ಕೇವಲ ಸಾವಿರಾರು ಕೋಟಿಗಳ ಹಗರಣಗಳು ಮಾತ್ರ ಕಾಣಿಸುತ್ತಿದೆ” ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದರು.

ಇದನ್ನು ಓದಿದ್ದೀರಾ?  ಪಶ್ಚಿಮ ಬಂಗಾಳ ರಾಜ್ಯಪಾಲದ ವಿರುದ್ಧ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

“ಬಂಗಾಳದಲ್ಲಿ ಹಣ ನೀಡದೆ ಒಂದು ಇಟ್ಟಿಗೆ ಕೂಡಾ ಇಡಲ್ಲ. ಅಷ್ಟೊಂದು ಮಟ್ಟಿಗೆ ರಾಜ್ಯದಲ್ಲಿ ಭ್ರಷ್ಟಾಚಾರವಿದೆ. ಟಿಎಂಸಿ ರೈತರನ್ನೂ ಸಹ ಬಿಡಲಿಲ್ಲ. ಟಿಎಂಸಿ ರಾಜ್ಯದ ಯುವಕರ ಭವಿಷ್ಯದ ಜೊತೆ ಆಟವಾಡಿದೆ. ಈಗ 26,000 ಕುಟುಂಬಗಳಿಗೆ ಉದ್ಯೋಗವಿಲ್ಲದಂತಾಗಿದೆ. ಈ ಉದ್ಯೋಗಗಳಿಗೆ ಬದಲಾಗಿ ಅವರು ಟಿಎಂಸಿಗೆ ಲಂಚ ನೀಡಲು ಪಡೆದ ಸಾಲದ ಹೊರೆಯನ್ನು ಎದುರಿಸುತ್ತಿದ್ದಾರೆ,” ಎಂದು ಹೇಳಿದರು.

ಟಿಎಂಸಿಯ ಫ್ಯಾಕ್ಟ್‌ಚೆಕ್ ಏನು ಹೇಳುತ್ತದೆ?

ಬಿಜೆಪಿ ಸರ್ಕಾರವು ಬಂಗಾಳಕ್ಕೆ ವಿವಿಧ ಯೋಜನೆಗಳ ಅಡಿಯಲ್ಲಿ ಬರೋಬ್ಬರಿ 1.6 ಲಕ್ಷ ಕೋಟಿ ರೂಪಾಯಿ ಹಣವನ್ನು ತಡೆಹಿಡಿದಿದೆ ಎಂದು ತೃಣಮೂಲ ಹೇಳಿದೆ. ಬಿಜೆಪಿ ಮಾತ್ರ ಬಂಗಾಳದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆಗೆ ಈ ಮೂಲಕ ಟಿಎಂಸಿ ಪ್ರತಿಕ್ರಿಯೆ ನೀಡಿದೆ

ಕೌಶಲ್ ವಿಕಾಸ್ ಯೋಜನೆ ಮತ್ತು ಸ್ಟಾರ್ಟ್ ಅಪ್ ಇಂಡಿಯಾ ಕಾರ್ಯಕ್ರಮವು ಯುವಕರನ್ನು ಸಶಕ್ತಗೊಳಿಸಿದೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆಯ ಫ್ಯಾಕ್ಟ್‌ಚೆಕ್ ಮಾಡಿರುವ ಟಿಎಂಸಿ, ಕೌಶಲ್ ವಿಕಾಸ್ ಯೋಜನೆ 2.0 ಗಾಗಿ ಉದ್ಯೋಗ ದರವು ಶೇಕಡ 23 ರಷ್ಟಿದ್ದರೆ, ಪಿಎಂಕೆವಿವೈ 3.0ಗೆ ಉದ್ಯೋಗ ದರವು 8 ಕ್ಕೆ ಇಳಿಕೆಯಾಗಿದೆ ಎಂದು ಹೇಳಿದೆ.

ಬಂಗಾಳದಲ್ಲಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಲು ಟಿಎಂಸಿ ಕೇಂದ್ರಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಪ್ರಧಾನಿ ಮೋದಿ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಟಿಎಂಸಿ ಈ ಯೋಜನೆಯಡಿಯಲ್ಲಿ ಶೇಕಡ 40ರಷ್ಟು ಹಣವು ರಾಜ್ಯವೇ ನೀಡಬೇಕಾಗುತ್ತದೆ ಎಂದಿದೆ.

“ಬಂಗಾಳವು ಉತ್ತಮ ಆರೋಗ್ಯ ವಿಮಾ ಯೋಜನೆಯನ್ನು ಹೊಂದಿದ್ದು ಅದುವೇ ಸ್ವಾಸ್ಥ್ಯ ಸತಿ ಆಗಿದೆ. ಈ ಯೋಜನೆಯಡಿ 5 ಲಕ್ಷ ರೂಪಾಯಿ ಕವರೇಜ್ ಇದೆ. ಸಂಪೂರ್ಣ ಮೊತ್ತವನ್ನು ರಾಜ್ಯವು ಭರಿಸುತ್ತದೆ. ಸಂಪೂರ್ಣವಾಗಿ ಕಾಗದರಹಿತ, ನಗದು ರಹಿತ, ಇಬ್ಬರೂ ಸಂಗಾತಿಗಳ ಪೋಷಕರಿಗೂ ಇದು ಕವರ್ ಆಗುತ್ತದೆ. ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲರಿಗೂ ಉಚಿತ ಚಿಕಿತ್ಸೆಯಿದೆ” ಎಂದು ಟಿಎಂಸಿ ಹೇಳಿದೆ.

ಸಂದೇಶ್ ಖಾಲಿಯಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳ ಬಗ್ಗೆ ಪ್ರಧಾನಿ ಮೋದಿ ಮಮತಾ ಬ್ಯಾನರ್ಜಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಟಿಎಂಸಿ “ಬಂಗಾಳ ಪೊಲೀಸರು ಸಂದೇಶ್ ಖಾಲಿ ಆರೋಪಿಯನ್ನು 72 ಗಂಟೆಗಳಲ್ಲಿ ಬಂಧಿಸಿದೆ” ಎಂದು ಹೇಳಿದೆ. “ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಬಿಜೆಪಿ ಸಂಸದರ ವಿರುದ್ಧ ಬಿಜೆಪಿ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಟಿಎಂಸಿ ಪ್ರಶ್ನಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X