ಪಾಪ್‌ಕಾರ್ನ್ ಬಳಿಕ ಈಗ ಡೋನಟ್‌ಗೆ ‘ಜಿಎಸ್‌ಟಿಗರ’ ಕಾಟ ಶುರುವಾಗಿದೆ: ಕಾಂಗ್ರೆಸ್

Date:

ಈ ಹಿಂದೆ ಪಾಪ್‌ಕಾರ್ನ್ ಮೇಲೆ ವಿವಿಧ ರೀತಿಯ ಜಿಎಸ್‌ಟಿ ವಿಧಿಸಿದ ಕೇಂದ್ರ ಸರ್ಕಾರ ಇದೀಗ ಡೋನಟ್‌ಗೆ ಬೇರೆ ಬೇರೆ ರೀತಿಯ ಜಿಎಸ್‌ಟಿ ವಿಧಿಸಲು ಮುಂದಾಗಿದೆ. ಈ ವಿಭಿನ್ನ ಜಿಎಸ್‌ಟಿ ದರಗಳನ್ನು ಜಾರಿಗೆ ತಂದ ಕೇಂದ್ರ ಸರ್ಕಾರವನ್ನು ಶನಿವಾರ ಕಾಂಗ್ರೆಸ್ ಟೀಕಿಸಿದೆ. “ಪಾಪ್‌ಕಾರ್ನ್ ಬಳಿಕ ಈಗ ಡೋನಟ್‌ಗೆ ‘ಜಿಎಸ್‌ಟಿಗರ’ ಕಾಟ ಶುರುವಾಗಿದೆ” ಎಂದು ಹೇಳಿದೆ.

- Advertisement -

ಈ ಬಗ್ಗೆ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜಿಎಸ್‌ಟಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಈಗ ಡೋನಟ್ ಜಿಎಸ್‌ಟಿಗರಿಂದಾಗಿ ಬಳಲುತ್ತಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಪಾಪ್‌ಕಾರ್ನ್‌ ಮೇಲೆ ಮೂರು ರೀತಿಯ ಜಿಎಸ್‌ಟಿ; ಟ್ರೋಲ್ ಆದ ನಿರ್ಮಲಾ ಸೀತಾರಾಮನ್

“ಮ್ಯಾಡ್ ಓವರ್ ಡೋನಟ್ಸ್ (ಬೇಕರಿ) ತನ್ನ ಬೇಕರಿ ವಸ್ತುಗಳ ಮೇಲೆ 18% ತೆರಿಗೆ ಇದೆ. ಆದರೆ ಡೋನಟ್‌ಗಳ ಮೇಲೆ ಶೇಕಡ 5ರಷ್ಟು ತೆರಿಗೆ ಪಾವತಿಸಿದ್ದಾರೆ. ಅದಕ್ಕಾಗಿ ಈಗ 100 ಕೋಟಿ ರೂ. ತೆರಿಗೆ ನೋಟಿಸ್ ಎದುರಿಸುವಂತಾಗಿದೆ. ಸದ್ಯ ಈ ವಿಚಾರವು ಬಾಂಬೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

ಹಾಗೆಯೇ, “ವ್ಯಾಪಾರ ನಡೆಸುವುದು ಈ ಜಿಎಸ್‌ಟಿಯಿಂದಾಗಿ ಸುಲಭ” ಎಂದು ಜೈರಾಮ್ ರಮೇಶ್ ವ್ಯಂಗ್ಯವಾಡಿದ್ದಾರೆ. “ಇದಕ್ಕಾಗಿಯೇ ಜಿಎಸ್‌ಟಿ 2.0 ಅತೀ ತುರ್ತಾದ ನಿರ್ಧಾರ ಎಂದು ಹೇಳುವುದು” ಎಂದಿದ್ದಾರೆ.

ಪಾಪ್‌ಕಾರ್ನ್‌ಗೆ ಹೋಲಿಸಿದರೆ ದೇಶದಲ್ಲಿ ಡೋನಟ್‌ಗಳನ್ನು ಸೇವಿಸುವವರ ಸಂಖ್ಯೆ ಕಡಿಮೆ ಎನ್ನಬಹುದು. ಇಂದಿಗೂ ಡೋನಟ್‌ಗಳು ಶ್ರೀಮಂತರು ಮತ್ತು ಮಧ್ಯಮ ವರ್ಗದ ಕೆಲ ಜನರ ನಡುವೆ ಮಾತ್ರ ಪರಿಚಿತವಾಗಿದೆ.

ಸದ್ಯ ಡೋನಟ್‌ ಅನ್ನು ರೆಸ್ಟೋರೆಂಟ್‌ನಲ್ಲಿ ಮಾರಾಟ ಮಾಡುವ ಸಿಹಿ ತಿನಿಸು ಎಂದು ಪರಿಗಣಿಸಿ ಶೇಕಡ 5ರಷ್ಟು ಜಿಎಸ್‌ಟಿ ವಿಧಿಸುವುದೇ ಅಥವಾ ಬೇಕರಿ ತಿಂಡಿ ಎಂದು ಪರಿಗಣಿಸಿ ಶೇಕಡ 18ರಷ್ಟು ಜಿಎಸ್‌ಟಿ ವಿಧಿಸುವುದೇ ಎಂಬ ವಿಚಾರದ ಬಗ್ಗೆ ಚರ್ಚೆ ನಡೆಯುತ್ತಿದೆ. ಸದ್ಯ ಇದಕ್ಕೆ ಸಂಬಂಧಿಸಿದ ಅರ್ಜಿಯನ್ನು ಬಾಂಬ್ ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಪಾಪ್‌ಕಾರ್ನ್‌ಗೂ ಮೂರು ರೀತಿಯ ಜಿಎಸ್‌ಟಿ ವಿಧಿಸಿರುವ ವಿಚಾರದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಟ್ರೋಲ್‌ಗೆ ಒಳಗಾಗಿದ್ದರು. ಜಿಎಸ್‌ಟಿ ಕೌನ್ಸಿಲ್ ಈ ಬಗ್ಗೆ ಸ್ಪಷ್ಟನೆ ನೀಡಿರುವುದನ್ನು ಕೂಡಾ ನೆಟ್ಟಿಗರು ಟ್ರೋಲ್ ಮಾಡಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕೂಡಾ ಕೇಂದ್ರ ಸರ್ಕಾರದ ಜಿಎಸ್‌ಟಿ ನೀತಿಯನ್ನು ವಿರೋಧಿಸಿತ್ತು.

‘ಸಕ್ಕರೆ ಮಿಠಾಯಿ’ ಎಂದು ವರ್ಗೀಕರಿಸಲಾದ ಕಾರಣ ಕ್ಯಾರಮೆಲೈಸ್ಡ್ ಪಾಪ್‌ಕಾರ್ನ್ ಮೇಲೆ ಸಾಲ್ಟೆಡ್ (ಉಪ್ಪು ಮಿಶ್ರಿತ) ಮತ್ತು ಸಾದಾ ಪಾಪ್‌ಕಾರ್ನ್‌ಗಿಂತ ವಿಭಿನ್ನವಾಗಿ ತೆರಿಗೆ ವಿಧಿಸಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿವರಿಸಿದ್ದರು. ಇದರಿಂದಾಗಿ ಭಾರೀ ಟ್ರೋಲ್ ಆಗಿದ್ದರು. ಇದೀಗ ಡೋನಟ್ ಮೇಲಿನ ಜಿಎಸ್‌ಟಿ ವಿಚಾರವನ್ನು ಮುನ್ನಲೆಗೆ ತರುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...