ಎಚ್ ಡಿ ರೇವಣ್ಣ ಸಹಿತ ಎಲ್ಲ ಅಭ್ಯರ್ಥಿಗಳಿಗೆ ಹೈಕೋರ್ಟ್‌ ಸಮನ್ಸ್

Date:

  • ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ಸಮನ್ಸ್
  • ಎಚ್​.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆ

ಹಾಸನ ಲೋಕಸಭಾ ಕ್ಷೇತ್ರ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಘೋಷಿಸಿದ ಬೆನ್ನಲ್ಲೇ ಎಚ್ ಡಿ ರೇವಣ್ಣ ಸಹಿತ ಎಲ್ಲ ಅಭ್ಯರ್ಥಿಗಳಿಗೆ ಹೈಕೋರ್ಟ್‌ ಸೋಮವಾರ ಸಮನ್ಸ್ ಜಾರಿ ಮಾಡಿದೆ.

- Advertisement -

ಹಾಸನದ ಹೊಳೆನರಸೀಪುರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಗೆಲುವು ದಾಖಲಿಸಿದ್ದ ಎಚ್ ಡಿ ರೇವಣ್ಣರ ಸಹಿತ ಸ್ಪರ್ಧೆ ಮಾಡಿದ್ದ ಎಲ್ಲ ಅಭ್ಯರ್ಥಿಗಳಿಗೆ ಹೈಕೋರ್ಟ್‌ ಏಕಸದಸ್ಯ ಪೀಠ ಸೋಮವಾರ ಸಮನ್ಸ್ ಜಾರಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಪರಾಜಿತ ಬಿಜೆಪಿ ಅಭ್ಯರ್ಥಿ ಹಾಗೂ ವಕೀಲರಾದ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಇಂದು(ಸೆಪ್ಟೆಂಬರ್ 04) ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ ಅವರ ವಿರುದ್ಧ ಸ್ಪರ್ಧಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ಸಮನ್ಸ್ ಜಾರಿ ಮಾಡುವಂತೆ ಆದೇಶ ಹೊರಡಿಸಿದೆ. ವಿಧಾನಸಭೆ ಕಾರ್ಯದರ್ಶಿ ಮೂಲಕ ಸಮನ್ಸ್ ಜಾರಿಗೆ ಕೋರ್ಟ್ ಆದೇಶ ಮಾಡಿದೆ.

ರೇವಣ್ಣ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿ ದೇವರಾಜೇಗೌಡ ಪರಾಜಿತಗೊಂಡಿದ್ದರು. ಚುನಾವಣೆಯಲ್ಲಿ ಅಕ್ರಮ ನಡೆಸಿ ಜೆಡಿಎಸ್‌ನ ಎಚ್.ಡಿ. ರೇವಣ್ಣ ಜಯಗಳಿಸಿದ್ದಾರೆ. 2ನೇ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಹೀಗಾಗಿ ಇವರಿಬ್ಬರ ಮತಗಳಿಕೆಯನ್ನು ಅಸಿಂಧುಗೊಳಿಸುವಂತೆ ದೇವರಾಜೇಗೌಡ ಅವರು ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ಎಲ್ಲ ಅಭ್ಯರ್ಥಿಗಳಿಗೆ ಹೈಕೋರ್ಟ್‌ ಸಮನ್ಸ್ ಜಾರಿ ಮಾಡಿದೆ.

ಪ್ರಜ್ವಲ್ ರೇವಣ್ಣ ಅವರನ್ನು ಹೈಕೋರ್ಟ್‌ ಏಕಸದಸ್ಯ ಪೀಠ ಅಸಿಂಧುಗೊಳಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಎಚ್​.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆಗಳಿವೆ.

ಚುನಾವಣಾ ನಾಮಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಹಾಸನ ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣ ಅವರನ್ನು ಹೈಕೋರ್ಟ್‌ ಕಳೆದ ಶುಕ್ರವಾರ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...