ಕೇರಳ | ಶಬರಿಮಲೆ ಬೆನ್ನಲ್ಲೇ ಮತ್ತೊಂದು ಪ್ರಸಿದ್ಧ ದೇವಾಲಯದಲ್ಲಿ ಚಿನ್ನ, ವಿವಿಧ ಸ್ವತ್ತುಗಳು ನಾಪತ್ತೆ

Date:

ಕೇರಳದ ಶಬರಿಮಲೆ ದೇವಾಲಯದಲ್ಲಿ ಚಿನ್ನ ಕಳವು ಪ್ರಕರಣ ಬಹಿರಂಗವಾದ ಬೆನ್ನಲ್ಲೇ ಮತ್ತೊಂದು ಪ್ರಸಿದ್ಧ ದೇವಾಲಯ ಗುರುವಾಯೂರಿನಲ್ಲಿ ವಿವಿಧ ವಸ್ತುಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. 2019ರ ಲೆಕ್ಕಪರಿಶೋಧನೆಯ ವರದಿಯು ಬಿಡುಗಡೆಯಾಗಿದ್ದು, ಚಿನ್ನ ಮತ್ತು ದಂತ ಸೇರಿದಂತೆ ವಿವಿಧ ಸ್ವತ್ತುಗಳು ನಾಪತ್ತೆಯಾಗಿವೆ ಎಂದು ವರದಿಯಾಗಿದೆ.

- Advertisement -

ಸರಿಯಾಗಿ ನಿಯಮಗಳನ್ನು ಪಾಲಿಸದೆ ಚಿನ್ನ, ದಂತ ಮೊದಲಾದವುಗಳ ನಿರ್ವಹಣೆ ಮಾಡಲಾಗಿದೆ. ಹಾಗೆಯೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ನಡೆಸುತ್ತಿರುವ ಚಿನ್ನದ ಯೋಜನೆಯಲ್ಲಿ ಠೇವಣಿ ಮಾಡಿದ್ದರಿಂದ 79 ಲಕ್ಷ ರೂ. ನಷ್ಟ ಉಂಟಾಗಿರುವುದನ್ನು ಲೆಕ್ಕಪರಿಶೋಧನೆ ವೇಳೆ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಶಬರಿಮಲೆ ಗರ್ಭಗುಡಿ ದ್ವಾರದ ಚಿನ್ನ ನಾಪತ್ತೆ: ಕದ್ದವರು ಯಾರು?

ಇನ್ನು ಎಣಿಕೆ ವೇಳೆ ಮಂಜಟ್ಟಿ ಕಾಯಿಗಳು (ಕೆಂಪು ಗುಲಗಂಜಿ) ಕಾಣೆಯಾಗಿವೆ. ಕೇಸರಿ ಹೂವುಗಳನ್ನು ದಾಖಲೆಗಳಲ್ಲಿ ಸೇರಿಸಲಾಗಿಲ್ಲ. ಇದಲ್ಲದೆ, 15 ಲಕ್ಷ ರೂ. ಮೌಲ್ಯದ 2,000 ಕೆಜಿ ಸಾಂಪ್ರದಾಯಿಕವಾಗಿ ಬಳಸಲಾಗುವ ಪಾತ್ರೆಗಳು ಮತ್ತು ತಾಮ್ರ, ಹಿತ್ತಾಳೆ, ಕಂಚಿನಿಂದ ಪಾತ್ರೆಗಳನ್ನು(ಉರುಳಿ) ಲೆಕ್ಕಾಚಾರದಲ್ಲಿ ಸೇರಿಸಲಾಗಿಲ್ಲ. ಇನ್ನು ಪುನ್ನತ್ತೂರು ಆನೆ ಕೋಟೆಯಿಂದ 530 ಕೆಜಿಗೂ ಹೆಚ್ಚು ತೂಕದ ದಂತ ಕಾಣೆಯಾಗಿದೆ ಎಂದು ವರದಿಯಾಗಿದೆ.

ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿರುವ ಗುರುವಾಯೂರು ದೇವಸ್ವಂ ಮಂಡಳಿ ಎಲ್ಲಾ ನ್ಯೂನತೆಗಳನ್ನು ಪರಿಹರಿಸಲಾಗಿದೆ. ಈ ಬಗ್ಗೆ ವಿವರವಾದ ಅಫಿಡವಿಟ್‌ ಅನ್ನು ಕೇರಳ ಹೈಕೋರ್ಟ್‌ಗೆ ಸಲ್ಲಿಸಲಾಗಿದೆ ಎಂದು ಹೇಳಿದೆ. ರಾಜ್ಯ ಸರ್ಕಾರವು ಎಲ್ಲಾ ಗೊಂದಲಗಳನ್ನು ಪರಿಹರಿಸಲಾಗಿದೆ. ಈ ಬಗ್ಗೆ ಅಂತಿಮ ವರದಿಯನ್ನೂ ಶೀಘ್ರವೇ ನೀಡಲಾಗುವುದು ಎಂದು ಹೇಳಿದೆ.

ಆದರೆ ವಿರೋಧ ಪಕ್ಷ ಬಿಜೆಪಿ ಕೇರಳ ಸರ್ಕಾರದ ವಿರುದ್ಧ ವಾಗ್ದಾಳಿ ಆರಂಭಿಸಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯ ಪ್ರದೀಪ್ ಭಂಡಾರಿ, “ಇದು ಎಡ ಸರ್ಕಾರವು ಹಿಂದೂ ಭಕ್ತರಿಗೆ ಮಾಡಿದ ದೊಡ್ಡ ಅವಮಾನ. ಶಬರಿಮಲೆ ಬಳಿಕ ಈಗ ಗುರುವಾಯೂರು ದೇವಾಲಯದ ಖಜಾನೆಯಿಂದ ಚಿನ್ನ ಕಾಣೆಯಾಗಿದೆ ಎಂದು ಲೆಕ್ಕಪರಿಶೋಧನೆಯು ಬಹಿರಂಗಪಡಿಸಿದೆ. ಕೇರಳ ಸರ್ಕಾರ ಪೂಜ್ಯ ದೇವಾಲಯಗಳನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ಮತ್ತು ದುರುಪಯೋಗ ಮಾಡುತ್ತಿರುವುದು ಆಘಾತಕಾರಿ” ಎಂದು ಬರೆದುಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...