ಬಸವ ತತ್ವದ ಪ್ರಚಾರಕ ನಿಜಗುಣಾನಂದ ಸ್ವಾಮೀಜಿಗೆ ಮತ್ತೆ ಕೊಲೆ ಬೆದರಿಕೆ ಪತ್ರ : ಎಫ್‌ಐಆರ್ ದಾಖಲು

Date:

  • ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ ಎಂದ ನಿಜಗುಣಾನಂದ ಸ್ವಾಮೀಜಿ
  • ‘ನಿನ್ನ ಅಂತಿಮ ದಿನಗಳು ಆರಂಭವಾಗಿವೆ. ಇನ್ನು ದಿನಗಳನ್ನು ಎಣಿಸು’ ಎಂದು ಬೆದರಿಕೆ

ಬಸವ ತತ್ವದ ಪ್ರಚಾರಕ ಬೈಲೂರು ನಿಷ್ಕಲ ಮಂಟಪದ‌ ನಿಜಗುಣಾನಂದ ಸ್ವಾಮೀಜಿಗೆ ಮತ್ತೆ ಜೀವ ಬೆದರಿಕೆ ಪತ್ರ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಅನಾಮಿಕನಿಂದ ಕೊಲೆ ಬೆದರಿಕೆ ಪತ್ರ ಬಂದಿದ್ದು, ಕಿತ್ತೂರು ಪೊಲೀಸರಿಗೆ ಸ್ವಾಮೀಜಿ ದೂರು ನೀಡಿದ್ದಾರೆ. ಆಗಸ್ಟ್ 8ರಂದೇ ಜೀವ ಬೆದರಿಕೆ ಪತ್ರ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬೆದರಿಕೆ ಪತ್ರದಲ್ಲಿ, “2020ರಲ್ಲಿ ನಿನ್ನ ಹತ್ಯೆ ತಪ್ಪಿರಬಹುದು, 2023ರಲ್ಲಿ ತಪ್ಪುವುದಿಲ್ಲ. ನಿನ್ನ ಪಾಪದ ಕೊಡ ತುಂಬಿದೆ, ಬೇಗ ನಿನ್ನ ತಿಥಿ ಬಗ್ಗೆ ಭಕ್ತರಿಗೆ ಹೇಳು. ನಮ್ಮ ಧರ್ಮದ ದೇವತೆಗಳನ್ನು ನಿಂದಿಸುವ ನಿನ್ನ ಘೋರ ಹತ್ಯೆ ಆಗುತ್ತೆ. ನಿನ್ನ ಅಂತಿಮ ದಿನಗಳು ಆರಂಭವಾಗಿವೆ. ಇನ್ನು ದಿನಗಳನ್ನು ಎಣಿಸು” ಎಂದು ಪೋಸ್ಟ್ ಮೂಲಕ ಜೀವ ಬೆದರಿಕೆ ಪತ್ರ ಮಠಕ್ಕೆ ಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2020ರಲ್ಲಿಯೂ ಹತ್ಯೆ ಮಾಡುವುದಾಗಿ ಸ್ವಾಮೀಜಿಗೆ ಜೀವ ಬೆದರಿಕೆ ಪತ್ರವೊಂದು ಬಂದಿತ್ತು. ಇದೀಗ ಮತ್ತೆ ಜೀವ ಬೆದರಿಕೆ ಪತ್ರ ಬಂದಿದ್ದು, ಈವರೆಗೂ 5ಕ್ಕೂ ಹೆಚ್ಚು ಬಾರಿ ಶ್ರೀಗಳಿಗೆ ಜೀವ ಬೆದರಿಕೆ ಪತ್ರ ಬರೆದಿದ್ದಾರೆ.

ತಮ್ಮ ನಿಷ್ಠುರ ಮಾತುಗಳಿಂದಲೇ ರಾಜ್ಯದಲ್ಲಿ ಬಸವ ತತ್ವದ ಪ್ರಚಾರಕರಾಗಿ ಖ್ಯಾತಿ ಗಳಿಸಿರುವ ನಿಜಗುಣಾನಂದ ಸ್ವಾಮೀಜಿ, ಪ್ರಮುಖ ಲಿಂಗಾಯತ ಸ್ವಾಮೀಜಿಗಳಲ್ಲಿ ಒಬ್ಬರು. ಮೂರ್ತಿ ಪೂಜೆ, ಮೌಢ್ಯ ವಿರೋಧಿ ವಿಚಾರಗಳನ್ನು ಅವರು ತಮ್ಮ ಪ್ರವಚನದಲ್ಲಿ ನೀಡುತ್ತಲೇ ಬಂದಿದ್ದಾರೆ.

ಪತ್ರದ ಬಗ್ಗೆ ಮಾತನಾಡಿರುವ ನಿಜಗುಣಾನಂದ ಸ್ವಾಮೀಜಿ, “ಕಳೆದ 15 ದಿನಗಳ ಹಿಂದೆ ಕೊಲೆ ಬೆದರಿಕೆ ಪತ್ರ ಬಂದಿದೆ. ಒಂದೇ ತರಹ ಬರಹದ ಪತ್ರಗಳು ಬೇರೆ ಬೇರೆ ಭಾಗಗಳಿಂದ ಬರುತ್ತಿವೆ. ಈಗಾಗಲೇ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ. ಕಳೆದ ಐದು ವರ್ಷಗಳಿಂದ ಸತತವಾಗಿ ಕೊಲೆ ಬೆದರಿಕೆ ಪತ್ರಗಳು ಬರುತ್ತಿವೆ. ಪತ್ರ ಬರೆಯುವವರ ಹಾಗೂ ನನ್ನ ಮಧ್ಯೆ ಯಾವುದೇ ದ್ವೇಷ ಇಲ್ಲ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿವೆ. ಇಂತಹ ಕೊಲೆ ಬೆದರಿಕೆ ಪತ್ರಗಳನ್ನು ನಾನು ‘ಪ್ರೇಮಪತ್ರ’ಗಳೆಂದು ಭಾವಿಸಿದ್ದೇನೆ. ನನಗೆ ಸಾವಿನ ಬಗ್ಗೆ ಭಯವಿಲ್ಲ, ಸೇವೆ ಮಾಡುವುದು ನಿಲ್ಲುತ್ತದೆ ಎನ್ನುವ ಕೊರಗಷ್ಟೇ. ನಾನು ಸಮಾಜದ ಮಗ. ಈ ರೀತಿಯ ಪತ್ರಗಳಿಂದ ಭಕ್ತರಲ್ಲಿ ಆತಂಕ ಸಹಜ. ಪೊಲೀಸರು, ಸರ್ಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದು ತಿಳಿಸಿದ್ದಾರೆ.

ಜೀವ ಬೆದರಿಕೆ ಪತ್ರದ ಕುರಿತು ಬೈಲೂರಲ್ಲಿ ಮಾತನಾಡಿರುವ ಮಾಜಿ ಸಿಎಂ, ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್, ಕಲ್ಯಾಣ ಕ್ರಾಂತಿ ಸಮಯದಲ್ಲಿ ಕೂಡ ಬಸವಣ್ಣರಿಗೂ ಹೀಗೆ ಕಿರುಕುಳ ನೀಡಲಾಗಿತ್ತು. ಮೂಢನಂಬಿಕೆ, ವೈಚಾರಿಕತೆ ಬಗ್ಗೆ ಮಾತನಾಡುವ ನಿಜಗುಣಾನಂದ ಸ್ವಾಮೀಜಿಗೂ ಬೆದರಿಕೆ ಬರುತ್ತಿವೆ. ನಾನು ಕೂಡ ಮುಖ್ಯಮಂತ್ರಿ, ಗೃಹಸಚಿವರ ಜೊತೆಗೆ ಮಾತನಾಡುತ್ತೇನೆ. ಆರೋಪಿಗಳ ಬಂಧನದ ಜೊತೆಗೆ ಸ್ವಾಮೀಜಿಯವರಿಗೆ ‌ಭದ್ರತೆ ಒದಗಿಸುವಂತೆ ಕೋರುತ್ತೇನೆ ಎಂದು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತಗಟ್ಟೆಯ ಮತದಾನದ ಅಂಕಿಅಂಶ ನೀಡುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಲು ಸುಪ್ರೀಂ ನಕಾರ

ಪ್ರತಿ ಮತಗಟ್ಟೆಯ ಮತದಾನದ ಅಂಕಿಅಂಶಗಳನ್ನು ಒದಗಿಸುವ ಫಾರ್ಮ್‌ 17ಸಿ ಪ್ರತಿಗಳನ್ನು ತನ್ನ...

ವಿಜಯಪುರ | ರೈತರ ಸಮಸ್ಯೆಗಳ ಪರಿಹಾರಕ್ಕೆ ರೈತಸಂಘ ಆಗ್ರಹ

ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...

ಮೇ ಸಾಹಿತ್ಯ ಮೇಳ | ಹುಚ್ಚಮ್ಮ ಚೌಧರಿ ಕುಣಿಕೇರಿಗೆ ‘ಲಕ್ಷ್ಮಿಬಾಯಿ ಕಟ್ಟಿಮನಿ ಸಮಾಜಮುಖಿ ಮಹಿಳೆ ಪ್ರಶಸ್ತಿ’

ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ರಾಜ್ಯದ ಸಾಹಿತ್ಯ-ಸಾಂಸ್ಕೃತಿಕ ಚಳುವಳಿಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ...

ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್ ರದ್ದುಗೊಳಿಸಲು ಪ್ರಕ್ರಿಯೆ ಆರಂಭ: ಸಚಿವ ಪರಮೇಶ್ವರ್‌

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವ ಕುರಿತು ನಾವು...