ಬಸವ ತತ್ವದ ಪ್ರಚಾರಕ ನಿಜಗುಣಾನಂದ ಸ್ವಾಮೀಜಿಗೆ ಮತ್ತೆ ಕೊಲೆ ಬೆದರಿಕೆ ಪತ್ರ : ಎಫ್‌ಐಆರ್ ದಾಖಲು

Date:

  • ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ ಎಂದ ನಿಜಗುಣಾನಂದ ಸ್ವಾಮೀಜಿ
  • ‘ನಿನ್ನ ಅಂತಿಮ ದಿನಗಳು ಆರಂಭವಾಗಿವೆ. ಇನ್ನು ದಿನಗಳನ್ನು ಎಣಿಸು’ ಎಂದು ಬೆದರಿಕೆ

ಬಸವ ತತ್ವದ ಪ್ರಚಾರಕ ಬೈಲೂರು ನಿಷ್ಕಲ ಮಂಟಪದ‌ ನಿಜಗುಣಾನಂದ ಸ್ವಾಮೀಜಿಗೆ ಮತ್ತೆ ಜೀವ ಬೆದರಿಕೆ ಪತ್ರ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಅನಾಮಿಕನಿಂದ ಕೊಲೆ ಬೆದರಿಕೆ ಪತ್ರ ಬಂದಿದ್ದು, ಕಿತ್ತೂರು ಪೊಲೀಸರಿಗೆ ಸ್ವಾಮೀಜಿ ದೂರು ನೀಡಿದ್ದಾರೆ. ಆಗಸ್ಟ್ 8ರಂದೇ ಜೀವ ಬೆದರಿಕೆ ಪತ್ರ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಬೆದರಿಕೆ ಪತ್ರದಲ್ಲಿ, “2020ರಲ್ಲಿ ನಿನ್ನ ಹತ್ಯೆ ತಪ್ಪಿರಬಹುದು, 2023ರಲ್ಲಿ ತಪ್ಪುವುದಿಲ್ಲ. ನಿನ್ನ ಪಾಪದ ಕೊಡ ತುಂಬಿದೆ, ಬೇಗ ನಿನ್ನ ತಿಥಿ ಬಗ್ಗೆ ಭಕ್ತರಿಗೆ ಹೇಳು. ನಮ್ಮ ಧರ್ಮದ ದೇವತೆಗಳನ್ನು ನಿಂದಿಸುವ ನಿನ್ನ ಘೋರ ಹತ್ಯೆ ಆಗುತ್ತೆ. ನಿನ್ನ ಅಂತಿಮ ದಿನಗಳು ಆರಂಭವಾಗಿವೆ. ಇನ್ನು ದಿನಗಳನ್ನು ಎಣಿಸು” ಎಂದು ಪೋಸ್ಟ್ ಮೂಲಕ ಜೀವ ಬೆದರಿಕೆ ಪತ್ರ ಮಠಕ್ಕೆ ಬಂದಿದೆ.

2020ರಲ್ಲಿಯೂ ಹತ್ಯೆ ಮಾಡುವುದಾಗಿ ಸ್ವಾಮೀಜಿಗೆ ಜೀವ ಬೆದರಿಕೆ ಪತ್ರವೊಂದು ಬಂದಿತ್ತು. ಇದೀಗ ಮತ್ತೆ ಜೀವ ಬೆದರಿಕೆ ಪತ್ರ ಬಂದಿದ್ದು, ಈವರೆಗೂ 5ಕ್ಕೂ ಹೆಚ್ಚು ಬಾರಿ ಶ್ರೀಗಳಿಗೆ ಜೀವ ಬೆದರಿಕೆ ಪತ್ರ ಬರೆದಿದ್ದಾರೆ.

nijagunanada

ತಮ್ಮ ನಿಷ್ಠುರ ಮಾತುಗಳಿಂದಲೇ ರಾಜ್ಯದಲ್ಲಿ ಬಸವ ತತ್ವದ ಪ್ರಚಾರಕರಾಗಿ ಖ್ಯಾತಿ ಗಳಿಸಿರುವ ನಿಜಗುಣಾನಂದ ಸ್ವಾಮೀಜಿ, ಪ್ರಮುಖ ಲಿಂಗಾಯತ ಸ್ವಾಮೀಜಿಗಳಲ್ಲಿ ಒಬ್ಬರು. ಮೂರ್ತಿ ಪೂಜೆ, ಮೌಢ್ಯ ವಿರೋಧಿ ವಿಚಾರಗಳನ್ನು ಅವರು ತಮ್ಮ ಪ್ರವಚನದಲ್ಲಿ ನೀಡುತ್ತಲೇ ಬಂದಿದ್ದಾರೆ.

ಪತ್ರದ ಬಗ್ಗೆ ಮಾತನಾಡಿರುವ ನಿಜಗುಣಾನಂದ ಸ್ವಾಮೀಜಿ, “ಕಳೆದ 15 ದಿನಗಳ ಹಿಂದೆ ಕೊಲೆ ಬೆದರಿಕೆ ಪತ್ರ ಬಂದಿದೆ. ಒಂದೇ ತರಹ ಬರಹದ ಪತ್ರಗಳು ಬೇರೆ ಬೇರೆ ಭಾಗಗಳಿಂದ ಬರುತ್ತಿವೆ. ಈಗಾಗಲೇ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ. ಕಳೆದ ಐದು ವರ್ಷಗಳಿಂದ ಸತತವಾಗಿ ಕೊಲೆ ಬೆದರಿಕೆ ಪತ್ರಗಳು ಬರುತ್ತಿವೆ. ಪತ್ರ ಬರೆಯುವವರ ಹಾಗೂ ನನ್ನ ಮಧ್ಯೆ ಯಾವುದೇ ದ್ವೇಷ ಇಲ್ಲ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿವೆ. ಇಂತಹ ಕೊಲೆ ಬೆದರಿಕೆ ಪತ್ರಗಳನ್ನು ನಾನು ‘ಪ್ರೇಮಪತ್ರ’ಗಳೆಂದು ಭಾವಿಸಿದ್ದೇನೆ. ನನಗೆ ಸಾವಿನ ಬಗ್ಗೆ ಭಯವಿಲ್ಲ, ಸೇವೆ ಮಾಡುವುದು ನಿಲ್ಲುತ್ತದೆ ಎನ್ನುವ ಕೊರಗಷ್ಟೇ. ನಾನು ಸಮಾಜದ ಮಗ. ಈ ರೀತಿಯ ಪತ್ರಗಳಿಂದ ಭಕ್ತರಲ್ಲಿ ಆತಂಕ ಸಹಜ. ಪೊಲೀಸರು, ಸರ್ಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದು ತಿಳಿಸಿದ್ದಾರೆ.

ಜೀವ ಬೆದರಿಕೆ ಪತ್ರದ ಕುರಿತು ಬೈಲೂರಲ್ಲಿ ಮಾತನಾಡಿರುವ ಮಾಜಿ ಸಿಎಂ, ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್, ಕಲ್ಯಾಣ ಕ್ರಾಂತಿ ಸಮಯದಲ್ಲಿ ಕೂಡ ಬಸವಣ್ಣರಿಗೂ ಹೀಗೆ ಕಿರುಕುಳ ನೀಡಲಾಗಿತ್ತು. ಮೂಢನಂಬಿಕೆ, ವೈಚಾರಿಕತೆ ಬಗ್ಗೆ ಮಾತನಾಡುವ ನಿಜಗುಣಾನಂದ ಸ್ವಾಮೀಜಿಗೂ ಬೆದರಿಕೆ ಬರುತ್ತಿವೆ. ನಾನು ಕೂಡ ಮುಖ್ಯಮಂತ್ರಿ, ಗೃಹಸಚಿವರ ಜೊತೆಗೆ ಮಾತನಾಡುತ್ತೇನೆ. ಆರೋಪಿಗಳ ಬಂಧನದ ಜೊತೆಗೆ ಸ್ವಾಮೀಜಿಯವರಿಗೆ ‌ಭದ್ರತೆ ಒದಗಿಸುವಂತೆ ಕೋರುತ್ತೇನೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಲಿಕಾಪ್ಟ‌ರ್ ದುರಂತದಲ್ಲಿ ಅಥಣಿ ಮೂಲದ ಸಿಸಿಬಿ ಇನ್ಸ್‌ಪೆಕ್ಟರ್‌ ಸೇರಿ ಆರು ಸಾವು

ಚಾ‌ರ್ ಧಾಮ್ ಯಾತ್ರೆಗೆ ತೆರಳಿದ್ದ ಬೆಂಗಳೂರಿನ ಸಿಸಿಬಿ ಇನ್ಸ್‌ಪೆಕ್ಟ‌ರ್ ಸೇರಿದಂತೆ ಆರು...

ಯಲ್ಲಾಪುರ | ವನ್ಯಜೀವಿಗಳ ಅಂಗಾಂಗ ವಶ ಪ್ರಕರಣ: ಸಮಗ್ರ ತನಿಖೆಗೆ ಸೋಮೇಶ್ವರ ನಾಯ್ಕ ಆಗ್ರಹ

ಯಲ್ಲಾಪುರ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ವನ್ಯಜೀವಿಗಳ ಅಂಗಾಂಗಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ ಹಲವು...

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...